ನವದೆಹಲಿ, ಜು. 24: ದೇಶದಲ್ಲಿ ಕಳೆದ ೨೪ಗಂಟೆಯಲ್ಲಿ 39,097 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ ಸೋಂಕಿನಿಂದ 35,087 ಮಂದಿ ಚೇತರಿಸಿಕೊಂಡಿದ್ದು, 546 ಮಂದಿ ಸಾವಿಗೀಡಾಗಿದ್ದಾರೆ.
ಈ ಮೂಲಕ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,13,32,159ಕ್ಕೆ ಏರಿಕೆಯಾಗಿದ್ದು, ಈ ಪೈಕಿ 3,05,03,166 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ ಚೇತರಿಕೆ ಪ್ರಮಾಣ ಶೇ.97.35 ಮತ್ತು ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.1.31ರಷ್ಟಿದೆ. ಸತತ 33 ದಿನಗಳಿಂದ ಕೋವಿಡ್ ದೃಢ ಪ್ರಮಾಣವು ಶೇ.3ಕ್ಕಿಂತ ಕಡಿಮೆ ದಾಖಲಾಗಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದು ಬಂದಿದೆ.
ಈವರೆಗೂ ಕೋವಿಡ್ ಕಾರಣಗಳಿಂದಾಗಿ 4,20,016 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ 4,08,977 ಪ್ರಕರಣಗಳು ಸಕ್ರಿಯವಾಗಿವೆ. ದೇಶದಾದ್ಯಂತ ಒಟ್ಟು 42,78,82,261 ಡೋಸ್ ಲಸಿಕೆ ಹಾಕಲಾಗಿದೆ.