ನವದೆಹಲಿ, ಏ. 26: ದೇಶದಲ್ಲಿ ಕೊರೋನಾ ಎರಡನೇ ಅಲೆಯ ಪರಿಣಾಮ ಕೈ ಮೀರುತ್ತಿದ್ದು, ಕಳೆದ 24ಗಂಟೆಯಲ್ಲಿ 3,52,991 ಪ್ರಕರಣಗಳು ದಾಖಲಾಗಿದ್ದು, 2,891 ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ 1,73,13,163ಕ್ಕೆ ಏರಿಕೆ ಆಗಿದೆ. ಈ ಪೈಕಿ ಕಳೆದ ೨೪ ಗಂಟೆಗಳಲ್ಲಿ ಗುಣ ಆಗಿರುವವರು 2,19,272 ಜನ ಮಾತ್ರ. ಇದಲ್ಲದೆ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗಿದ್ದು ದೇಶದಲ್ಲಿ ಇದೀಗ ದಿನ ಒಂದರಲ್ಲಿ ಎರಡು ಸಾವಿರಕ್ಕೂ ಹೆಚ್ಚು ಜನ ಸಾವನ್ನಪ್ಪುತ್ತಿದ್ದು, ಈವರೆಗೆ ಮಹಾಮಾರಿ ಕೊರೋನಾಗೆ ಬಲಿ ಆದವರ ಸಂಖ್ಯೆ 1,95,123ಕ್ಕೆ ಏರಿಕೆ ಆಗಿದೆ.
ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಹಾಕುವ ಕೆಲಸವನ್ನು ಹಂತ ಹಂತವಾಗಿ ತೀವ್ರಗೊಳಿಸಲಾಗುತ್ತದೆ. ಈವರೆಗೆ ದೇಶಾದ್ಯಂತ ಒಟ್ಟು 14,19,11,223 ಜನರಿಗೆ ಲಸಿಕೆ ಹಾಕಲಾಗಿದೆ. ದೇಶದಲ್ಲಿ ಸೋಂಕಿತರ ಏರಿಕೆಯ ಪ್ರಮಾಣ ಶೇ.47 ಇದ್ದರೆ, ಸಾವಿನ ಪ್ರಮಾಣ ಅದರ 2ರಷ್ಟು, ಅಂದರೆ ಶೇ.89ರಷ್ಟಿದೆ.
ದೇಶದಲ್ಲಿ ಕೇವಲ 7ದಿನಗಳಲ್ಲಿ ಅಂದರೆ ಏಪ್ರಿಲ್ 18-25ರವರೆಗೆ 22.49 ಲಕ್ಷ ಕೊರೊನಾ ಕೇಸ್ಗಳು ದಾಖಲಾಗಿವೆ. ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಏಳುದಿನಗಳಲ್ಲಿ 22 ಲಕ್ಷಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗಿದ್ದು ಇದೇ ಮೊದಲು.. ಮತ್ತು ಅದೂ ಭಾರತದಲ್ಲೇ ಆಗಿದೆ.