ಅಪೂರ್ಣ ಕಾಮಗಾರಿಗೆ ವಾಹನ ಸವಾರರು ಬಲಿ

 ಬೆಂಗಳೂರು ಸೆ 22 : ರಾಜ್ಯದ ಪ್ರಮುಖ ಮಹಾನಗರ  ಮತ್ತು ಹಲವು ನಗರ ಸೇರಿದಂತೆ ರಸ್ತೆಗಳಲ್ಲಿನ ಹೊಂಡ ಗುಂಡಿಗಳು ಜನರ ಪಾಲಿಗೆ ಮೃತ್ಯು ಕೂಪಗಳಾಗಿವೆ.ಸಾಕಷ್ಟು ಸವಾರರು ರಸ್ತೆಗಳಲ್ಲಿನ ಹೊಂಡಗುಂಡಿಗಳಿಗೆ ಬಿದ್ದು ತಮ್ಮ ಪ್ರಾಣವನ್ನು ಕಳೆದು ಕೊಳ್ಳುತ್ತಿದ್ದಾರೆ. ಸಾಕಷ್ಟು ಸವಾರರು ಗುಂಡಿ ತಪ್ಪಿಸಲು ಹೋಗಿ ಬೆಂಗಳೂರು ನಗರದಲ್ಲೇ ಕಳೆದ 20 ದಿನಗಳಲ್ಲಿ ಮೂವರು ದ್ವಿಚಕ್ರ ವಾಹನ ಸವಾರರು ರಸ್ತೆಗಳಲ್ಲಿನ ಗುಂಡಿಗೆ ಬಲಿಯಾಗಿದ್ದಾರೆ


ಗುತ್ತಿಗೆ ನೌಕರರ ಕಳಪೆ ಕಾಮಾಗಾರಿಯಿಂದಾಗಿ ಸಣ್ಣ ಮಳೆಗೇ ರಸ್ತೆಗಳು ಗುಂಡಿ ಬಿದ್ದು ಹಾಳಾಗುತ್ತಿವೆ. ಮತ್ತೆ ಕೆಲವು ಕಡೆ ನಾನಾ ಅಭಿವೃದ್ಧಿ ಕಾಮಗಾರಿಗಳ ನೆಪದಲ್ಲಿ ಗೊತ್ತು ಗುರಿ ಇಲ್ಲದೆ ರಸ್ತೆಗಳನ್ನು ಪದೇಪದೆ ಅಗೆಯಲಾಗಿದೆ. ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಲ್ಲಿ ಸ್ಮಾರ್ಟ್‌ಸಿಟಿ, ವೈಟ್‌ಟಾಪಿಂಗ್‌, ಟೆಂಡರ್‌ ಶ್ಯೂರ್‌, ರಸ್ತೆ ವಿಸ್ತರಣೆ, ಫುಟ್‌ಪಾತ್‌ ಅಭಿವೃದ್ಧಿ, ನೆಲದಡಿ ವಿದ್ಯುತ್‌ ಕೇಬಲ್‌ ಅಳವಡಿಕೆ, ಕುಡಿಯುವ ನೀರು ಹಾಗೂ ಒಳಚರಂಡಿ ಕಾಮಗಾರಿ ನೆಪದಲ್ಲಿರಸ್ತೆಗಳನ್ನು ಯದ್ವಾತದ್ವಾ ಅಗೆಯಲಾಗುತ್ತಿದೆ. ಕೆಲಸ ಮುಗಿದ ನಂತರ ಮರು ಡಾಂಬರೀಕರಣ ಮಾಡದೆ ವರ್ಷಾನುಗಟ್ಟಲೆ ಹಾಗೆಯೇ ಬಿಡಲಾಗುತ್ತಿದೆ.ಈ ಹಿನ್ನಲೆಯಲ್ಲಿ ಸಾಕಷ್ಟು ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

Exit mobile version