ದೇಶದಲ್ಲಿ ಹೆಚ್ಚಿದ ಕೊರೋನಾ ಆತಂಕ: ಒಂದೇ ದಿನದಲ್ಲಿ 89,129 ಕೊರೋನಾ ಪ್ರಕರಣ ದಾಖಲು

ದೆಹಲಿ, ಎ. 03: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 89,129 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಈವರೆಗೆ ಭಾರತದಲ್ಲಿ ಕೊರೊನಾ ಸೋಂಕಿಗೆ ತುತ್ತಾದವರ ಸಂಖ್ಯೆ 1,23,92,260ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 6,58,909 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಯಲ್ಲಿ 714 ಜನರು ಮೃತಪಟ್ಟಿದ್ದಾರೆ. ಈವರೆಗೆ ದೇಶದಲ್ಲಿ ಕೊರೊನಾಕ್ಕೆ 1,64,110 ಜನರು ಬಲಿಯಾದಂತಾಗಿದೆ. ಇದುವರೆಗೆ ಒಟ್ಟು 1,15,69,241 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಕೊರೊನಾ ಲಸಿಕೆ ವಿತರಣೆಯೂ ತೀವ್ರಗತಿಯಲ್ಲಿ ನಡೆಯುತ್ತಿದ್ದು 7,30,54,295 ಜನರಿಗೆ ಕೊವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

ಕರ್ನಾಟಕ ರಾಜ್ಯದಲ್ಲೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಸೋಂಕು ಹರಡುವ ವೇಗಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಈಗಾಗಲೇ ಪ್ರಕಟವಾಗಿದೆ. ಏಪ್ರಿಲ್ 20ರವರೆಗೆ ಪ್ರಸ್ತುತ ಮಾರ್ಗಸೂಚಿ ಅನ್ವಯವಾಗಲಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆ ಕಡ್ಡಾಯ. ಅಂತರ ಕಾಪಾಡಿಕೊಳ್ಳುವ ವಿಚಾರದಲ್ಲಿ ಜನರು ಎಚ್ಚರ ವಹಿಸಬೇಕು. ಈ ನಿಯಮಗಳನ್ನು ಪೊಲೀಸರು, ಸ್ಥಳೀಯ ಆಡಳಿತ ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂದು ಸೂಚಿಸಲಾಗಿದೆ. ಕೊರೊನಾ ತಡೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟವಾಗಿದ್ದು, ಅದರನ್ವಯ ಯಾವುದೇ ರೀತಿಯ ಜಾಥಾ, ಮುಷ್ಕರ, ಧರಣಿ ನಡೆಸುವುದನ್ನು ನಿಷೇಧ ಮಾಡಲಾಗಿದೆ. ಸಾರಿಗೆ ಬಸ್‌ಗಳಲ್ಲಿ ನಿಗದಿತ ಆಸನದಷ್ಟೇ ಜನರನ್ನು ಕೊಂಡೊಯ್ಯಬೇಕು. ಸಾಧ್ಯವಾದ ಮಟ್ಟಿಗೆ ಮನೆಯಿಂದಲೇ ಕಚೇರಿ ಕೆಲಸ (ವರ್ಕ್​ಫ್ರಂ) ಸೌಲಭ್ಯ ಬಳಸಿಕೊಳ್ಳಬೇಕು ಎಂದು ಸರ್ಕಾರ ಸೂಚಿಸಿದೆ.

Exit mobile version