Visit Channel

ನೆರೆರಾಜ್ಯಗಳಲ್ಲಿ ಹೆಚ್ಚಾದ ಕೋರೊನಾ ಸೋಂಕು:ಭದ್ರತೆ ಬಿಗಿ ಪಡಿಸಲು ಡಿಸಿಎಂ ಪತ್ರ

dcm 85

ಬೆಂಗಳೂರು ಫೆ 20: ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ, ಕೇರಳ ರಾಜ್ಯಗಳಲ್ಲಿ ಕೋವಿಡ್ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳಾದ ಮಂಗಳೂರು, ಬೆಳಗಾವಿ, ಕೊಡಗು, ಚಾಮರಾಜನಗರ, ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಕಾರ್ಯವನ್ನು ತೀವ್ರಗೊಳಿಸಿ, ಕಟ್ಟುನಿಟ್ಟಾಗಿ ತಪಾಸಣೆಗೊಳಪಡಿಸಲು ಕ್ರಮಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಮುಖ್ಯಕಾರ್ಯದರ್ಶಿಗಳಾದ ಡಿಸಿಎಂ ಗೋವಿಂದ ಕಾರಜೋಳ ಪತ್ರ ಬರೆದಿದ್ದಾರೆ.

ನೆರೆ ರಾಜ್ಯಗಳಲ್ಲಿ ಕೋವಿಡ್ ಉಲ್ಬಣವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಸಾರ್ವಜನಿಕರು, ಕೂಲಿ ಮಾಡುವ ಜನರು ನೆರೆ ರಾಜ್ಯಗಳಿಗೆ ಪ್ರತಿ ನಿತ್ಯ ಸಂಚರಿಸುತ್ತಿದ್ದಾರೆ. ಅಲ್ಲದೇ ಜೀವನೋಪಾಯಕ್ಕಾಗಿ ಹೆಚ್ಚು ಜನರು ಗೋವಾಕ್ಕೆ ಹೋಗಿ ಬರುತ್ತಿರುವ ಹಿನ್ನೆಲೆಯಲ್ಲಿ ಇವರಿಗೆ ಸೋಂಕು ತಗುಲಿ ಗಡಿ ಜಿಲ್ಲೆಗಳಲ್ಲಿ ಕೊರೊನಾ ಉಲ್ಬಣವಾಗುವ ಸಾಧ್ಯತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ.


ಚೆಕ್ ಪೋಸ್ಟ್ ಗಳಲ್ಲಿ ಭದ್ರತೆ ತಪಾಸಣೆಗೊಳಪಡಿಸಿ ಮುಂಜಾಗ್ರತಾ ಕ್ರಮಕೈಗೊಳ್ಳಲು ಸಂಬಂಧಿಸಿದ ಎಲ್ಲಾ ಅಧಿಕಾರಿಗಳಿಗೆ ಆದೇಶಿಸುವಂತೆ ಡಿಸಿಎಂ ಗೋವಿಂದ ಕಾರಜೋಳ ಸೂಚಿಸಿದ್ದಾರೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.