ಕೊರೊನಾ ಭೀಕರತೆ ಹೆಚ್ಚಾದ ಹಿನ್ನೆಲೆ: ಮಂಡ್ಯ ಜಿಲ್ಲೆಯ ಎಲ್ಲಾ ಧಾರ್ಮಿಕ ಕೇಂದ್ರಗಳಿಗೆ ಮೇ15 ರವರೆಗೆ ಭಕ್ತರ ಪ್ರವೇಶಕ್ಕೆ ಕಡಿವಾಣ

ಬೆಂಗಳೂರು, ಏ. 17: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಆರ್ಭಟ ಜೋರಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳ ಧಾರ್ಮಿಕ ಕೇಂದ್ರಗಳಿಗೆ ಭಕ್ತರ ಭೇಟಿಗೆ ನಿರ್ಬಂಧ ಹೇರಲಾಗಿದ್ದು, ಈ ನಿಟ್ಟಿನಲ್ಲಿ ಮಂಡ್ಯ ಜಿಲ್ಲೆಯ ದೇವಸ್ಥಾನಗಳನ್ನು ಒಂದು ತಿಂಗಳ ಕಾಲ ಬಂದ್ ಮಾಡಿ ಆದೇಶಿಸಲಾಗಿದೆ.

ಮಂಡ್ಯ ಜಿಲ್ಲೆಯಾಧ್ಯಂತ ಹಲವು ದೇವಸ್ಥಾನಗಳಿದ್ದು, ಪ್ರತಿನಿತ್ಯ ನೂರಾರು ಭಕ್ತರು ದೇವಸ್ಥಾನಗಳಿಗೆ ಭೇಟಿ ನೀಡುತ್ತಾರೆ. ಈ ಹಿನ್ನೆಲೆಯಲ್ಲಿ ಕೊರೊನಾ ಹರಡುವುದನ್ನು ತಡೆಗಟ್ಟುವ ಸಲುವಾಗಿ ಜಿಲ್ಲೆಯ ದೇವಸ್ಥಾನಗಳಿಗೆ ಭಕ್ತಾದಿಗಳ ಭೇಟಿಗೆ ನಿರ್ಬಂಧ ಹೇರಲಾಗಿದೆ. ಹೀಗಾಗಿ ಜಿಲ್ಲೆಯ ಪ್ರಮುಖ ದೇವಾಲಯಗಳಾದ ಶ್ರೀರಂಗಪಟ್ಟಣದ ಶ್ರೀರಂಗನಾಥಸ್ವಾಮಿ, ದೇವಸ್ಥಾನ, ನಿಮಿಷಾಂಬ ದೇಗುಲ, ಮೇಲುಕೋಟೆಯ ಚೆಲುವನಾರಾಯಣಸ್ವಾಮಿ ದೇವಾಲಯ ಸೇರಿ ಇತರೇ ದೇವಾಲಯಗಳನ್ನ ಮೇ 15ರವರೆಗೆ ಬಂದ್ ಮಾಡಲಾಗಿದೆ ಎನ್ನಲಾಗಿದೆ.

ಕೊರೊನಾ ಎರಡನೇ ಅಲೆಯ ಭೀಕರತೆ ಹಿನ್ನೆಲೆಯಲ್ಲಿ ಮಂಡ್ಯ‌ ಜಿಲ್ಲೆಯ ದೇವಸ್ಥಾನಗಳನ್ನು ಏಕಾಏಕಿ ಒಂದು ತಿಂಗಳ ಕಾಲ ಬಂದ್‌ ಆದ ಹಿನ್ನೆಲೆಯಲ್ಲಿ ದೇವರ ದರ್ಶನಕ್ಕೆ ದೂರದ ಊರುಗಳಿಂದ ಬಂದ ಭಕ್ತರು ದೇವರ ದರ್ಶನಕ್ಕೆ ಅವಕಾಶ ದೊರೆಯದ ಕಾರಣಕ್ಕೆ ಬೇಸರದಿಂದ ವಾಪಸ್ಸಾಗುತ್ತಿದ್ದಾರೆ.

Exit mobile version