ಶ್ರೀಲಂಕಾ ವಿರುದ್ದದ ಟೆಸ್ಟ್‌ ಸರಣಿಯಿಂದ ರಹಾನೆ, ಪೂಜಾರ ಔಟ್!

 ಹೈದರಾಬಾದ್: ಮುಂಬರುವ ಶ್ರೀಲಂಕಾ ವಿರುದ್ದದ ಟೆಸ್ಟ್‌ ಸರಣಿಗೆ ಭಾರತ ತಂಡದ ನಾಯಕರಾಗಿ ರೋಹಿತ್‌ ಶರ್ಮಾ ಆಯ್ಕೆಯಾಗಿದ್ದಾರೆ. ವಿರಾಟ್ ಕೊಹ್ಲಿ ನಂತರ ರೋಹಿತ್ ಶರ್ಮಾ ಅವರು ಭಾರತ ಟೆಸ್ಟ್ ತಂಡದ ನಾಯಕರಾಗಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಶನಿವಾರ ಪ್ರಕಟಿಸಿದೆ. ಇದರೊಂದಿಗೆ ಟೆಸ್ಟ್, ಟಿ20 ಹಾಗೂ ಏಕದಿನ ಈ ಮೂರೂ ಮಾದರಿಯಲ್ಲಿ ರೋಹಿತ್ ಶರ್ಮ ಟೀಂ ಇಂಡಿಯಾದ ನಾಯಕರಾಗಿದ್ದಾರೆ.

ರೋಹಿತ್ ಶರ್ಮಾ ಅವರನ್ನು ಪೂರ್ಣಾವಧಿ ಟೆಸ್ಟ್ ತಂಡದ, ಟಿ20 ಅಂತರಾಷ್ಟ್ರೀಯ ಮತ್ತು ಏಕದಿನ ಸರಣಿ ಪಂದ್ಯಗಳ ನಾಯಕರನ್ನಾಗಿ ನೇಮಿಸಲಾಯಿತು ಎಂದು ಬಿಸಿಸಿಐ ಹೇಳಿದೆ. ಮಾರ್ಚ್ 1 ರಂದು ಪ್ರಾರಂಭವಾಗುವ ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ತವರು ಟೆಸ್ಟ್ ಸರಣಿಯು ಪೂರ್ಣ ಸಮಯದ ಟೆಸ್ಟ್ ನಾಯಕನಾಗಿ ರೋಹಿತ್ ಅವರ ನಿಯೋಜನೆಯಾಗಿದೆ. ಕಳೆದ ಎರಡು ವರ್ಷಗಳಿಂದ ಟೆಸ್ಟ್ ತಂಡದ ಪ್ರಮುಖ ಸದಸ್ಯರಾಗಿರುವ ಅವರು ಕ್ರಮಾಂಕದಲ್ಲಿ ಮೇಲ್ಪಂಕ್ತಿಯಲ್ಲಿದ್ದಾರೆ

ಕಳೆದ ವರ್ಷ ಕಳಪೆ ಫಾರ್ಮ್‌ನಿಂದಾಗಿ ಅಜಿಂಕ್ಯಾ ರಹಾನೆ ನಾಯಕತ್ವದಿಂದ ಹೊರನಡೆದ ಬಳಿಕ ರೋಹಿತ್ ಅವರನ್ನು ಡಿಸೆಂಬರ್ 2021ರಲ್ಲಿ ಟೆಸ್ಟ್ ತಂಡದ ಉಪನಾಯಕರನ್ನಾಗಿ ನೇಮಿಸಲಾಯಿತು. ಆದರೆ, ಮಂಡಿರಜ್ಜು ನೋವಿನಿಂದಾಗಿ ರೋಹಿತ್ ದಕ್ಷಿಣ ಆಫ್ರಿಕಾಗೆ ತೆರಳಲು ಸಾಧ್ಯವಾಗಿರಲಿಲ್ಲ.

ಪೂಜಾರ, ರಹಾನೆ ಟೆಸ್ಟ್ ನಿಂದ ಹೊರಗೆ
ಶ್ರೀಲಂಕಾ ವಿರುದ್ಧದ ಎರಡು ಟೆಸ್ಟ್‌ಗಳ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಶ್ರೀಲಂಕಾ ವಿರುದ್ಧದ ಟೆಸ್ಟ್ ಮತ್ತು ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದ್ದು ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯ ರಹಾನೆ ಅವರನ್ನು ಟೆಸ್ಟ್ ತಂಡದಿಂದ ಹೊರಗಿಡಲಾಗಿದೆ.

ಶ್ರೀಲಂಕಾ ಸರಣಿಗೆ ಭಾರತ ಟೆಸ್ಟ್ ತಂಡ
ರೋಹಿತ್ ಶರ್ಮಾ(ನಾಯಕ), ಮಯಾಂಕ್ ಅಗರ್ವಾಲ್, ಪ್ರಿಯಾಂಕ್ ಪಾಂಚಾಲ್, ವಿರಾಟ್ ಕೊಹ್ಲಿ, ಶ್ರೇಯಸ್, ಹನುಮ ವಿಹಾರಿ, ಶುಭಮನ್ ಗಿಲ್, ರಿಷಬ್ ಪಂತ್, ಕೆಎಸ್ ಭರತ್, ಅಶ್ವಿನ್ (ಫಿಟ್ನೆಸ್), ರವಿ ಜಡೇಜಾ, ಜಯಂತ್ ಯಾದವ್, ಕುಲ್ದೀಪ್, ಬುಮ್ರಾ (ವಿಕೆಟ್‌ ಕೀಪರ್‌), ಶಮಿ, ಸಿರಾಜ್, ಉಮೇಶ್ ಯಾದವ್, ಸೌರಭ್ ಕುಮಾರ್

Latest News

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.

ಆರೋಗ್ಯ

ದೇಹ ನೀಡುವ `ಈ’ ಸೂಚನೆಗಳು ಕಿಡ್ನಿ ವೈಪಲ್ಯವನ್ನು ಸೂಚಿಸುತ್ತವೆ ; ಇಲ್ಲಿದೆ ಮಾಹಿತಿ ಓದಿ

ಕಿಡ್ನಿ(Kidney) ನಮ್ಮ ದೇಹದ ಪ್ರಮುಖ ಅಂಗವಾಗಿದೆ. ದೇಹದಲ್ಲಿ ಶುದ್ಧ ರಕ್ತವನ್ನು ಪರಿಚಲನೆ ಮಾಡುವಲ್ಲಿ ಮೂತ್ರಪಿಂಡಗಳು ಮುಖ್ಯ ಪಾತ್ರವಹಿಸುತ್ತವೆ.