ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಭಾರತ.

New York: ಐಸಿಸಿ ಟಿ20 ವಿಶ್ವಕಪ್‌ (T20 Worldcup) ಕ್ರಿಕೆಟ್​ ಟೂರ್ನಿಗಳಲ್ಲಿ ನೆರೆಯ ಪಾಕಿಸ್ತಾನದ ವಿರುದ್ಧ ಭಾರತ ತಂಡ ಗೆಲುವು ಸಾಧಿಸಿದೆ.ಭಾನುವಾರ ಇಲ್ಲಿನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಕರಾರುವಾಕ್​ ಬೌಲಿಂಗ್​ನಿಂದ ಸಾಂಪ್ರದಾಯಿಕ ಎದುರಾಳಿಯನ್ನು ಬಗ್ಗುಬಡಿದ ಟೀಂ ಇಂಡಿಯಾ (Team India), 6 ರನ್​ಗಳ ಜಯ ದಾಖಲಿಸಿದೆ. ಟೂರ್ನಿಯಲ್ಲಿ ಅತ್ಯಲ್ಪ ಮೊತ್ತವನ್ನು ಡಿಫೆಂಡ್​ ಮಾಡಿದ ದಾಖಲೆಗೆ ಭಾರತ ಪಾತ್ರವಾಗಿದೆ.

Cricket

ಆರಂಭದಲ್ಲಿಯೇ ಮಳೆಯಾದ ಕಾರಣ ಪಂದ್ಯ ಸ್ವಲ್ಪ ತಡವಾಗಿದೆ.ಟಾಸ್​ ಗೆದ್ದ ಪಾಕಿಸ್ತಾನ (Pakistan) ಮೊದಲು ರೋಹಿತ್​ ಪಡೆಯನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು. ಮಳೆಯ ವಾತಾವರಣ ಹಾಗೂ ಅನಿಯಮಿತ ಬೌನ್ಸ್​ನ ಪಿಚ್​ನಲ್ಲಿ ರನ್​ ಗಳಿಸುವುದು ಸುಲಭವಿರಲಿಲ್ಲ. ಇನ್ನಿಂಗ್ಸ್​ ಆರಂಭಿಸಿದ ವಿರಾಟ್​ ಕೊಹ್ಲಿ ಹಾಗೂ ರೋಹಿತ್​ ಶರ್ಮಾ ಹೆಚ್ಚು ಹೊತ್ತು ಕ್ರೀಸ್​ನಲ್ಲಿ ನಿಲ್ಲಲಿಲ್ಲ. 19 ಓವರ್‌ಗಳಲ್ಲಿ 119 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಸಾಧರಣ ಮೊತ್ತ ಕಲೆ ಹಾಕಿತು. ಭಾರತ ತಂಡದ ಬ್ಯಾಟಿಂಗ್ (Batting) ತೀರಾ ಕಳಪೆಯಾಗಿತ್ತು. ಅಗ್ರ ಕ್ರಮಾಂಕ, ಮಧ್ಯಮ ಕ್ರಮಾಂಕ ಎಲ್ಲವೂ ವಿಫಲವಾಯಿತು. ಹೀಗಾಗಿ ತಂಡ 119 ರನ್‌ಗಳಿಗೆ ಆಲೌಟ್ ಆಯಿತು.

ಹಾಗಾಗಿ ಗೆಲುವಿಗೆ 120 ರನ್ ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ ನಿಗದಿತ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 113 ರನ್ ಗಳಿಸುವ ಮೂಲಕ ಸೋಲನ್ನು ಅನುಭವಿಸಿತು. ಟೀಂ ಇಂಡಿಯಾ ಬೌಲರ್ ಗಳು ಅದ್ಭುತವಾಗಿ ಬೌಲಿಂಗ್ ಮಾಡಿ, ಪಾಕಿಸ್ತಾನದ ಬ್ಯಾಟರ್‌ಗಳು ರನ್‌ ಹೊಡೆಯದಂತೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿದ್ದು ವಿಶೇಷವಾಗಿತ್ತು. ಪಾಕಿಸ್ತಾನ ತಂಡ ಒಂದು ಹಂತದಲ್ಲಿ 14ನೇ ಓವರ್‌ಗಳಲ್ಲಿ ಮೂರು ವಿಕೆಟ್‌ಗೆ 80 ರನ್ ಕಲೆಹಾಕಿತ್ತು. ಆದರೆ ರಿಜ್ವಾನ್-ಶಾದಾಬ್ ಔಟಾದ ಬಳಿಕ 6 ರನ್​​ಗಳಿಂದ ಸೋಲೊಪ್ಪಿಕೊಂಡಿತು.

Exit mobile version