ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ: ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ರಾಹುಲ್ ತೆವಾಟಿಯಾಗೆ ಸ್ಥಾನ

ಮುಂಬೈ, ಫೆ. 21: ಪ್ರವಾಸಿ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಟಿ20 ಕ್ರಿಕೆಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಿರುವ ಬಿಸಿಸಿಐ, ಕಳೆದ ಐಪಿಎಲ್​ ಟೂರ್ನಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದ ಸೂರ್ಯಕುಮಾರ್ ಯಾದವ್, ರಾಹುಲ್ ತೆವಾಟಿಯಾ ಹಾಗೂ ಇಶನ್ ಕಿಶನ್​ ಅವರುಗಳು ಸ್ಥಾನ ಪಡೆದಿದ್ದಾರೆ.

ಐಪಿಎಲ್​ ಟೂರ್ನಿಯಲ್ಲಿ ಮಿಂಚಿದ್ದ ಮುಂಬೈ ಇಂಡಿಯನ್ಸ್ ಆಟಗಾರ ಸೂರ್ಯಕುಮಾರ್ ಯಾದವ್, ತಮ್ಮ ಅಮೋಘ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದರು. ಇವರೊಂದಿಗೆ ಇದೇ ತಂಡದ ಮತ್ತೋರ್ವ ಆಟಗಾರ ಇಶಾನ್ ಕಿಶನ್ ಸಹ ತಮ್ಮ ಸ್ಪೋಟಕ ಬ್ಯಾಟಿಂಗ್​ನಿಂದ ಆಯ್ಕೆದಾರರ ಮೆಚ್ಚುಗೆ ಪಡೆದಿದ್ದರು. ಇನ್ನೂ ರಾಜಸ್ಥಾನ್ ರಾಯಲ್ಸ್​ ತಂಡದ ಆಲ್​ರೌಂಡರ್ ರಾಹುಲ್ ತೆವಾಟಿಯಾ, ಅಬ್ಬರದ ಬ್ಯಾಟಿಂಗ್ ಮೂಲಕ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾಗಿದ್ದರು. ಈ ಮೂವರು ಯುವ ಆಟಗಾರರ ಪ್ರತಿಭೆಗೆ ಮಣೆಹಾಕಿರುವ ಆಯ್ಕೆದಾರರು, ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಆಡುವ ಅವಕಾಶ ಒದಗಿಸಿದ್ದಾರೆ.

ಮತ್ತೊಂದೆಡೆ ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿ ಗಾಯದ ಸಮಸ್ಯೆಯಿಂದ ವೈಟ್​ ಬಾಲ್ ಟೂರ್ನಿಯಿಂದ ಹೊರಗುಳಿದಿದ್ದ ಹಿಟ್​​ಮ್ಯಾನ್ ರೋಹಿತ್ ಶರ್ಮಾ, ತಂಡಕ್ಕೆ ಹಿಂದಿರುಗಿದ್ದಾರೆ. ಉಭಯ ತಂಡಗಳ ನಡುವಿನ 5 ಪಂದ್ಯಗಳ ಟಿ20 ಸರಣಿ ಮಾರ್ಚ್ 12ರಿಂದ ಆರಂಭವಾಗಲಿದೆ.

ಉಳಿದಂತೆ ಟೀಂ ಇಂಡಿಯಾ ಆಟಗಾರರ ಪಟ್ಟಿ ಇಂತಿದೆ, ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ. ಕೆಎಲ್ ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ಇಶಾನ್ ಕಿಶನ್, ಯಜುವೇಂದ್ರ ಚಹಲ್, ವರುಣ್ ಚಕ್ರವರ್ತಿ, ಆಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ರಾಹುಲ್ ತೆವಾಟಿಯಾ, ಟಿ.ನಟರಾಜನ್, ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ನವದೀಪ್ ಸೈನಿ, ಶಾರ್ದೂಲ್ ಠಾಕೂರ್​.

Latest News

ಆರೋಗ್ಯ

ದೇಹ ನೀಡುವ `ಈ’ ಸೂಚನೆಗಳು ಕಿಡ್ನಿ ವೈಪಲ್ಯವನ್ನು ಸೂಚಿಸುತ್ತವೆ ; ಇಲ್ಲಿದೆ ಮಾಹಿತಿ ಓದಿ

ಕಿಡ್ನಿ(Kidney) ನಮ್ಮ ದೇಹದ ಪ್ರಮುಖ ಅಂಗವಾಗಿದೆ. ದೇಹದಲ್ಲಿ ಶುದ್ಧ ರಕ್ತವನ್ನು ಪರಿಚಲನೆ ಮಾಡುವಲ್ಲಿ ಮೂತ್ರಪಿಂಡಗಳು ಮುಖ್ಯ ಪಾತ್ರವಹಿಸುತ್ತವೆ.

ರಾಜಕೀಯ

1947ರ ಹಿಂದಿನ ಕಾಂಗ್ರೆಸ್ ಬೇರೆ, ಈಗಿನ ಸೋಗಲಾಡಿ ಸಿದ್ಧಹಸ್ತರು ಇರುವ ಕಾಂಗ್ರೆಸ್ಸೇ ಬೇರೆ : ಹೆಚ್‍ಡಿಕೆ

ಇದುವರೆಗೂ ಕಾಂಗ್ರೆಸ್ ನಡೆಸಿದ ಸ್ವಾತಂತ್ರ್ಯ ವಿರೋಧಿ ಕೃತ್ಯಗಳಿಗೆ ಉತ್ತರ ಕೊಡುವಿರಾ? ಕಾಂಗ್ರೆಸ್ ಕೋಳಿ ಕೂಗಿದರೆ ಭಾರತದಲ್ಲಿ ಬೆಳಕು ಹರಿಯುತ್ತದೆ ಎನ್ನುವ ಕಾಲ ಹೋಯಿತು.

ದೇಶ-ವಿದೇಶ

8ನೇ ಬಾರಿಗೆ ಸಿಎಂ ಆಗಿ ನಿತೀಶ್ ಕುಮಾರ್ ; `ಜನಾದೇಶಕ್ಕೆ ದ್ರೋಹʼ : ಬಿಜೆಪಿ

164 ಶಾಸಕರ ಪಟ್ಟಿಯನ್ನು ಸಲ್ಲಿಸಿ, ಬಿಹಾರದಲ್ಲಿ ಹೊಸ ಸರ್ಕಾರ ರಚಿಸಲು ಏಳು ಪಕ್ಷಗಳ ಬೆಂಬಲವನ್ನು ಪಡೆದುಕೊಂಡಿದ್ದಾರೆ. ಹೀಗಾಗಿ ನಿತೀಶ್ ಕುಮಾರ್ ಇಂದು ಎಂಟನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.