ನಾಸಾದ ಉನ್ನತ ಹುದ್ದೆಗೆ ಭಾರತ ಮೂಲದ ಭವ್ಯಾ ಲಾಲ್ ನೇಮಕ!

ವಾಷಿಂಗ್ಟನ್‌, ಫೆ. 02: ಭಾರತದ ಹೆಮ್ಮೆಯ ಪುತ್ರಿ ಭವ್ಯಾ ಲಾಲ್ ಅವರು  ಅಮೆರಿಕದ ಬಾಹ್ಯಾಕಾಶ ಸಂಸ್ಥೆಯ ಉನ್ನತ ಹುದ್ದೆಗೆ ಆಯ್ಕೆಯಾಗಿದ್ದಾರೆಂದು ನಾಸಾ ಮಾಹಿತಿ ನೀಡಿದೆ.  ನಾಸಾದ ಹಂಗಾಮಿ ಕಾರ್ಯಕಾರಿ ಮುಖ್ಯಸ್ಥರಾಗಿ ಇಂಡೋ-ಅಮೆರಿಕನ್‌ ಭವ್ಯಾ ಲಾಲ್‌ ಸೋಮವಾರ ನೇಮಕಗೊಂಡಿದ್ದಾರೆ. ಭವ್ಯ ಲಾಲ್‌ ಅವರು ನ್ಯೂಕ್ಲಿಯರ್‌ ಎಂಜಿನಿಯರಿಂಗ್‌ ವಿಷಯದಲ್ಲಿ ವಿಜ್ಞಾನ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಎಂಐಟಿಯಿಂದ ತಂತ್ರಜ್ಞಾನ ಮತ್ತು ಕಾರ್ಯನೀತಿಯಲ್ಲಿ ವಿಜ್ಞಾನ ಸ್ನಾತಕೋತ್ತರ ಪದವಿ ಹಾಗೂ ಜಾರ್ಜ್‌ ವಾಷಿಂಗ್ಟನ್ ಯೂನಿವರ್ಸಿಟಿಯಲ್ಲಿ ಸಾರ್ವಜನಿಕ ನೀತಿ ಮತ್ತು ಸಾರ್ವಜನಿಕ ಆಡಳಿತ ವಿಷಯಗಳಲ್ಲಿ ಡಾಕ್ಟರೇಟ್‌ ಪಡೆದಿದ್ದಾರೆ.

ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರಿಗೆ ಅಧಿಕಾರ ಹಸ್ತಾಂತರಿಸುವ ಪ್ರಕ್ರಿಯೆ ನಿರ್ವಹಿಸಿರುವ ‘ಏಜೆನ್ಸಿ ರಿವ್ಯೂ ಟೀಮ್‌ನಲ್ಲಿ’ ಭವ್ಯಾ ಸದಸ್ಯೆಯಾಗಿ ಕಾರ್ಯನಿರ್ವಹಿಸಿದ್ದರು ಎನ್ನಲಾಗಿದೆ. ಈ ಕುರಿತಂತೆ ಪ್ರಕಟಣೆ ಹೊರಡಿಸಿರುವ, ‘ಇನ್‌ಸ್ಟಿಟ್ಯೂಟ್‌ ಫಾರ್‌ ಡಿಫೆನ್ಸ್‌ ಅನಾಲಿಸಿಸ್‌ ಸೈನ್ಸ್‌ ಆಂಡ್‌ ಟೆಕ್ನಾಲಜಿ ಪಾಲಿಸಿ ಇನ್‌ಸ್ಟಿಟ್ಯೂಟ್‌ನಲ್ಲಿ (ಎಸ್‌ಟಿಪಿಐ) ಸಂಶೋಧನಾ ಸಿಬ್ಬಂದಿ ಸದಸ್ಯೆಯಾಗಿ 2005ರಿಂದ 2020ರ ವರೆಗೂ ಕಾರ್ಯನಿರ್ವಹಿಸಿದ್ದಾರೆ. ಎಂಜಿನಿಯರಿಂಗ್‌ ಮತ್ತು ಬಾಹ್ಯಾಕಾಶ ತಂತ್ರಜ್ಞಾನ ವಲಯದಲ್ಲಿ ಅವರು ಅನುಭವ ಪಡೆದಿದ್ದಾರೆ.

Exit mobile version