Visit Channel

ನೂಪುರ್ ಶರ್ಮಾ ಹೇಳಿಕೆ : ಇಸ್ಲಾಮಿಕ್ ರಾಷ್ಟ್ರಗಳಿಗೆ ಭಾರತ ತಿರುಗೇಟು!

Nupur sharma

ನೂಪುರ್ ಶರ್ಮಾ(Nupur Sharma) ಹೇಳಿಕೆಯನ್ನಿಟ್ಟುಕೊಂಡು ಭಾರತವನ್ನು ಟೀಕಿಸುತ್ತಿರುವ ಇಸ್ಲಾಮಿಕ್ ರಾಷ್ಟ್ರಗಳ(Islamic Countries) ಒಕ್ಕೂಟಕ್ಕೆ ಭಾರತ(India) ತಿರುಗೇಟು ನೀಡಿದೆ.

India

ಇಸ್ಲಾಮಿಕ್ ರಾಷ್ಟ್ರಗಳ ಒಕ್ಕೂಟದ ಹೇಳಿಕೆ ‘ಸಂಕುಚಿತ ಮನೋಭಾವದಿಂದ ಕೂಡಿವೆ’ ಎಂದು ಭಾರತೀಯ ವಿದೇಶಾಂಗ ಇಲಾಖೆ ಸ್ಪಷ್ಟಪಡಿಸಿದೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಬಿಜೆಪಿಯ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ, ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ನೂಪುರ್ ಶರ್ಮಾ ಹೇಳಿಕೆ ವಿವಾದದ ಸ್ವರೂಪ ಪಡೆಯುತ್ತಲೇ, ಬಿಜೆಪಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿತ್ತು.

ಆದರೆ ಈ ಹೇಳಿಕೆಯನ್ನು ಅಂತರಾಷ್ಟ್ರೀಯ(International) ಮಟ್ಟದಲ್ಲಿ ಸುದ್ದಿಯಾಗುವಂತೆ ಮಾಡಿದ್ದರಿಂದ ಅನೇಕ ಇಸ್ಲಾಮಿಕ್ ರಾಷ್ಟ್ರಗಳು ಭಾರತವನ್ನು ಟೀಕಿಸಿದವು. ಆದರೆ ಭಾರತ ಸರ್ಕಾರ ‘ಯಾರದೋ ಹೇಳಿಕೆಗಳು, ಟ್ವೀಟ್‍ಗಳು ಸರ್ಕಾರದ ಅಧಿಕೃತ ಹೇಳಿಕೆಗಳಾಗಲಾರವು. ಭಾರತ ಸರ್ಕಾರವನ್ನು ಪ್ರತಿಬಿಂಬಿಸಲಾರವು. ನಾವು ಎಲ್ಲರ ಧಾರ್ಮಿಕ ಭಾವನೆಗಳನ್ನು ಗೌರವಿಸುತ್ತೇವೆ’ ಎಂದು ಸ್ಪಷ್ಟವಾಗಿ ಹೇಳಿದೆ. ಭಾರತ-ಇಸ್ಲಾಮಿಕ್ ರಾಷ್ಟ್ರಗಳ ಸಮರ : ನೂಪುರ್ ಶರ್ಮಾ ನೀಡಿದ ಹೇಳಿಕೆಯಿಂದ ಭಾರತ ಮತ್ತು ಪಶ್ಚಿಮ ಏಷ್ಯಾ(West Asia) ರಾಷ್ಟ್ರಗಳ ನಡುವಿನ ಸಂಬಂಧಕ್ಕೆ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Nupur sharma

ಭಾರತ ಇಸ್ಲಾಮಿಕ್ ಒಕ್ಕೂಟದ ಭಾಗವಾಗಿದ್ದರೂ, ಇಸ್ಲಾಮಿಕ್ ರಾಷ್ಟ್ರವಲ್ಲ. ಹೀಗಾಗಿ ಐಒಸಿ ಭಾರತವನ್ನು ಭಿನ್ನವಾಗಿಯೇ ನೋಡುತ್ತದೆ. ನೂಪುರ್ ಶರ್ಮಾ ಹೇಳಿಕೆಯನ್ನಿಟ್ಟುಕೊಂಡು, ಸೌದಿ, ಇರಾನ್, ಪಾಕಿಸ್ತಾನ್, ಇರಾಕ್, ಲೆಬನಾನ್, ಒಮನ್, ಕತಾರ್, ಕುವೈತ್, ಅಪ್ಘಾನಿಸ್ತಾನ್, ಇಂಡೋನೇಷ್ಯಾ, ಮಲೇಷಿಯಾ, ಯುಎಇ, ಜೋರ್ಡಾನ್, ಟರ್ಕಿ ದೇಶಗಳು ಭಾರತದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿವೆ. ಆದರೆ ಭಾರತ ಮಾತ್ರ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.