ಮಹೇಂದ್ರ ಪ್ರತಾಪ್ ಸಿಂಗ್ ವಿಶ್ವವಿದ್ಯಾಲಯಕ್ಕೆ ಪ್ರಧಾನಿಯಿಂದ ಶಂಕುಸ್ಥಾಪನೆ

ಲಕ್ನೋ ಸೆ 14 :  ಉತ್ತರ ಪ್ರದೇಶದ ಅಲಿಘರ್ ನಲ್ಲಿ ಘಾಟ್  ದೊರೆ ಮಹೇಂದ್ರ ಪ್ರತಾಪ್ ಸಿಂಗ್ ಅವರ ಹೆಸರಿನ ವಿಶ್ವವಿದ್ಯಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಈ ಶಂಕುಸ್ಥಾಪನೆ ಬಳಿಕ ಉತ್ತರ ಪ್ರದೇಶ ರಕ್ಷಣಾ ಕೈಗಾರಿಕಾ ಕಾರಿಡಾರ್ ಮತ್ತು ರಾಜಾ ಮಹೇಂದ್ರ ಪ್ರತಾಪ್ ಸಿಂಗ್ ಸ್ಟೇಟ್ ಯೂನಿವರ್ಸಿಟಿಯ ಅಲಿಘರ್ ನೋಡ್ ನ ಪ್ರದರ್ಶನ ಮಾದರಿಗಳಿಗೆ ಭೇಟಿ ನೀಡಲಿದ್ದಾರೆ. ಉತ್ತರ ಪ್ರದೇಶದಲ್ಲಿ 2022 ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೆಲವು ವರ್ಷಗಳ ಬಳಿಕ ಪ್ರಧಾನಿ ಭೇಟಿ ಮಹತ್ವವನ್ನು ಪಡೆದುಕೊಂಡಿದೆ.

ಸ್ವಾತಂತ್ರ್ಯ ಹೋರಾಟಗಾರ, ಶಿಕ್ಷಣ ತಜ್ಞ ಮತ್ತು ಸಮಾಜ ಸುಧಾರಕರಾಗಿದ್ದ ರಾಜಾ ಮಹೇಂದ್ರ ಪ್ರತಾಪ್ ಸಿಂಗ್ ಅವರ ಸ್ಮರಣೆ ಮತ್ತು ಗೌರವಾರ್ಥ ಉತ್ತರ ಪ್ರದೇಶ ಸರ್ಕಾರ ವಿಶ್ವವಿದ್ಯಾಲಯವನ್ನು ಸ್ಥಾಪಿಸುತ್ತಿದೆ. ಅಲಿಘರ್ ನ ಕೋಲ್ ತಹಸಿಲ್ ನ ಲೋಧಾ ಮತ್ತು ಮ್ಯೂಸೆಪುರ್ ಕರೀಮ್ ಜರೌಲಿ ಹಳ್ಳಿಗಳಲ್ಲಿ ಒಟ್ಟು 92 ಎಕರೆಗೂ ಹೆಚ್ಚು ಪ್ರದೇಶದಲ್ಲಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುತ್ತಿದೆ.

ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್ ಮತ್ತು ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಹಾಗೂ ಹಲವು ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ.

Exit mobile version