ಲೀಡ್ಸ್ ಆ 27 : ಲೀಡ್ಸ್‌ನ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ಭಾರತ ತಂಡವನ್ನು ಅತಿಥೇಯ ಇಂಗ್ಲೆಂಡ್ ಇನ್ನಿಂಗ್ಸ್ ಮತ್ತು 76ರನ್‌ಗಳಿಂದ ಸೋಲಿಸಿದೆ. ಈ ಗೆಲುವಿನೊಂದಿಗೆ ಐದು ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು 1-1ನ ಪಂದ್ಯ ಗೆದ್ದು ಸಮಬಲ ಸಾಧಿಸಿವೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು ಆದರೆ ಈ ನಿರ್ಧಾರ ಈ ನಿರ್ಧಾರ ವಿಫಲವಾಯಿತು. ಮೊದಲು ಬ್ಯಾಟ್ ಮಾಡಿದ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 78 ರನ್‌ಗಳಿಗೆ ಆಲೌಟ್ ಆಗಿ ನಿರಾಸೆ ಅನುಭವಿಸಿತು . ಇದಕ್ಕುತ್ತರವಾಗಿ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ ನಲ್ಲಿ 432 ರನ್ ಗಳಿಸಿ 354 ರನ್ ಗಳ ಮುನ್ನಡೆ ಸಾಧಿಸಿತು. ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ ಕೇವಲ 278 ರನ್ ಗಳಿಗೆ ಆಲೌಟ್ ಆಗಿ ಇನ್ನಿಂಗ್ಸ್ ಮತ್ತು 76 ರನ್‌ಗಳಿಂದ ಸೋಲನುಭವಿಸಿತು.
ಪ್ರಥಮ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್‌ಪರ ರೂಟ್ ಆಕರ್ಶಕ ಶತಕ ಸಿಡಿಸಿದರೆ, ಬರ್ನ್ಸ್ ಮತ್ತು ಹಮೀದ್ ತಲಾ ಅರ್ಧ ಶತಕದ ನೆರವಿನಿಂದ ಅತಿಥೇಯರು ಬೃಹತ್ ಮುನ್ನಡೆ ಸಾಧಿಸಿದರು.
ದ್ವಿತೀಯ ಇನ್ನಿಂಗ್ಸ್‌ನಲ್ಲಿ ಭಾರತ ಆರಂಭಿಕವಾಗಿ ಉತ್ತಮ ಮುನ್ನಡೆ ಪಡೆಯಿತ್ತಾದರೂ ನಂತರ ಬಂದ ಬ್ಯಾಟ್ಸ್‌ಮನ್‌ಗಳು ಫೆವಿಲಿಯನ್ ಪೆರೇಡ್ ನಡೆಸಿದರು. ಚೇತೆಶ್ವರ ಪೂಜಾರ್, ರೋಹಿತ್ ಶರ್ಮಾ ಮತ್ತು ನಾಯಕ ಕೊಯ್ಲಿ ಮಾತ್ರ ಅರ್ಧಶತಕ ಗಳಿಸಿದ್ದು ಬಿಟ್ಟರೆ ಉಳಿದ್ಯಾವ ಬ್ಯಾಟ್ಸ್‌ಮನ್‌ಗಳು ಇಂಗ್ಲೆಂಡ್ ದಾಳಿಗೆ ಪ್ರತಿರೋಧ ತೊರದೆ ಇನ್ನಿಂಗ್ಸ್ ಸೋಲಿಗೆ ಕಾರಣರಾದರು.
ಎರಡೂ ಇನ್ನಿಂಗ್ಸ್‌ನಲ್ಲಿ ಉತ್ತಮ ಪ್ರದರ್ಶನ ತೋರಿ 7ವಿಕೆಟ್ ಕಬಳಿಸಿ ಇಂಗ್ಲೆಂಡ್‌ನ ರಾಬಿನಸನ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡರು.