ಪಾಕ್ ವಿರುದ್ದ ಭಾರತ ಸೋಲು ಹಿನ್ನಲೆ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ

ಚಂಡೀಗಢ ಅ 23 : ನಿನ್ನೆ ನಡೆದ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಸೋತಿದೆ ಎಂಬ ಕಾರಣ ಮುಂದಿಟ್ಟು ಪಂಜಾಬ್ ನ ಸಂಗ್ರೂರ್ ನಲ್ಲಿರುವ ಎಂಜಿನಿಯರಿಂಗ್ ಕಾಲೇಜ್ ನಲ್ಲಿ ಕಲಿಯುತ್ತಿರುವ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ.

ನಿನ್ನೆ ಭಾರತ ಮತ್ತು ಪಾಕಿಸ್ತಾನ ನಡುವೆ ಏರ್ಪಟ್ಟ ಟಿ -20 ಪಂದ್ಯಾಟದಲ್ಲಿ ಭಾರತ ಸೋತ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ಪ್ರಸಕ್ತ ಪಂಜಾಬ್ ಭಾಯಿ ಗುರುದಾಸ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಈ ಮಧ್ಯೆ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಯಾವುದೇ ಪ್ರಕರಣವನ್ನು ದಾಖಲಿಸಿಲ್ಲ. ನಂತರದ ಬೆಳವಣಿಗೆಯಲ್ಲಿ ಪೊಲೀಸರು ಮತ್ತು ಕಾಲೇಜು ಆಡಳಿತ ಮಂಡಳಿಯವರು ಸಂಧಾನ ನಡೆಸಿದ್ದು, ಸಭೆಯಲ್ಲಿ ಉಭಯ ಕಡೆಯವರು ಕ್ಷಮೆಯಾಚಿಸಿದ್ದಾರೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ತಮ್ಮ ಹಾಸ್ಟೆಲ್ ಕೊಠಡಿಗಳಲ್ಲಿ ಮುರಿದ ಕುರ್ಚಿಗಳು, ಹಾನಿಗೊಳಗಾದ ಹಾಸಿಗೆಗಳು ಮತ್ತು ಸಂಕಷ್ಟಕ್ಕೊಳಗಾದ ವಿದ್ಯಾರ್ಥಿಗಳನ್ನು ತೋರಿಸುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಮಾತ್ರವಲ್ಲ ಇನ್ನೊಂದು ವೀಡಿಯೋದಲ್ಲಿ ಆಕ್ರೋಶಿತ ಗುಂಪೊಂದು ಕೈಯಲ್ಲಿ ವಿಕೆಟ್ ಗಳನ್ನು ಹಿಡಿದು ದಾಂಧಲೆ ನಡೆಸುತ್ತಿರುವ ದೃಶ್ಯಾವಳಿ ಹರಿದಾಡುತ್ತಿದೆ. ವಿಶ್ವಕಪ್ ನಲ್ಲಿ ಪಾಕಿಸ್ತಾನ ಇದೇ ಮೊದಲ ಬಾರಿಗೆ ಭಾರತವನ್ನು ಸೋಲಿಸಿದೆ.

Exit mobile version