ವೆಸ್ಟ್ ಇಂಡೀಸ್ ವಿರುದ್ಧದ ಟೂರ್ನಿಗೆ ಟೀಂ ಇಂಡಿಯಾ ಪ್ರಕಟ.!

ಫೆಬ್ರವರಿ 6 ರಿಂದ ಆರಂಭವಾಗಲಿರುವ ವೆಸ್ಟ್ಇಂಡೀಸ್ ವಿರುದ್ಧದ ಟೂರ್ನಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಗಾಯದಿಂದ ಚೇತರಿಸಿಕೊಂಡಿರುವ ರೋಹಿತ್ ಶರ್ಮಾ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದ ಕೆ.ಎಲ್. ರಾಹುಲ್ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಳಲ್ಲಿ ಉಪ ನಾಯಕನಾಗಿ ಮುಂದುವರಿಯಲಿದ್ದಾರೆ.

3 ಏಕದಿನ ಪಂದ್ಯಕ್ಕೆ ಭಾರತ ತಂಡ ಇಂತಿದೆ :


ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಬ್ ಪಂತ್ (ವಿಕೆಟ್-ಕೀಪರ್), ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್. ಸಿರಾಜ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್.

3 ಪಂದ್ಯಗಳ ಟಿ-ಟ್ವೆಂಟಿ ಸರಣಿಗೆ ಪ್ರಕಟಿಸಲಾಗಿರುವ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್. ಸಿರಾಜ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್.


ಪ್ರಥಮ ಪಂದ್ಯದಿಂದ ಹೊರಗುಳಿಯಲಿರುವ ರಾಹುಲ್.
ಏಕದಿನ ಹಾಗೂ ಟಿ-ಟ್ವೆಂಟಿ ಎರಡೂ ತಂಡಗಳಲ್ಲಿಯೂ ಸ್ಥಾನ ಪಡೆದುಕೊಂಡಿರುವ ಕೆ.ಎಲ್ ರಾಹುಲ್, ಫೆಬ್ರವರಿ 6 ರಂದು ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಪ್ರಥಮ ಏಕದಿನ ಪಂದ್ಯದಿಂದ ಹೊರಗುಳಿಯಲಿದ್ದಾರೆ. ವೈಯಕ್ತಿಕ ಕಾರಣಗಳಿಂದ ಕೆ.ಎಲ್ ರಾಹುಲ್ ಈ ಪಂದ್ಯದಿಂದ ಹೊರ ಉಳಿಯಲಿದ್ದು, ನಂತರ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯದ ಮೂಲಕ ಮತ್ತೆ ತಂಡ ಸೇರಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Exit mobile version