English English Kannada Kannada

ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ 157ರನ್‌ಗಳ ಭರ್ಜರಿ ಜಯ

ಲಂಡನ್‌ನ ಓವಲ್ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಅತಿಥೇಯ ಇಂಗ್ಲೆಂಡ್ ತಂಡ 210 ರನ್‌ಗಳಿಗೆ ಆಲೌಟ್ ಆಗುವ ಮೂಲಕ 157 ರನ್‌ಗಳಿಂದ ಸೋಲನುಭವಿಸಿದೆ.
Share on facebook
Share on google
Share on twitter
Share on linkedin
Share on print

ಲಂಡನ್ ಸೆ 7 : ರೋಹಿತ್ ಶರ್ಮಾ ಅವರ ಭರ್ಜರಿ ಶತಕದ ನೆರವಿನಿಂದ ಪ್ರವಾಸಿ ಭಾರತ ತಂಡ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ 157 ರನ್‌ಗಳ ಬೃಹತ್ ಗೆಲುವು ಸಾಧಿಸಿದೆ.

ಲಂಡನ್‌ನ ಓವಲ್ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಅತಿಥೇಯ ಇಂಗ್ಲೆಂಡ್ ತಂಡ 210 ರನ್‌ಗಳಿಗೆ ಆಲೌಟ್ ಆಗುವ ಮೂಲಕ 157 ರನ್‌ಗಳಿಂದ ಸೋಲನುಭವಿಸಿದೆ.

ಪ್ರವಾಸಿ ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 191 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಬ್ಯಾಟಿಂಗ್ ಆರಂಭಿಸಿದ್ದ ಇಂಗ್ಲೆಂಡ್ 290 ರನ್ ಗಳ ಕಲೆ ಹಾಕಿ 99 ರನ್ ಗಳ ಮುನ್ನಡೆ ಸಾಧಿಸಿತ್ತು. ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ ಭರ್ಜರಿ ಬ್ಯಾಟಿಂಗ್ ಮಾಡಿದ್ದು 466 ರನ್ ಗಳನ್ನು ಕಲೆ ಹಾಕಿತು. ಇದರೊಂದಿಗೆ ಇಂಗ್ಲೆಂಡ್ ತಂಡಕ್ಕೆ 368 ರನ್ ಗಳ ಬೃಹತ್ ಮೊತ್ತದ ಗುರಿ ನೀಡಿತ್ತು. ನಂತರ ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿದ ಇಂಗ್ಲೆಂಡ್‌ ನಾಲ್ಕನೇ ದಿನಾದಟದಂತ್ಯಕ್ಕೆ ವಿಕೆಟ್ ಕಳೆದುಕೊಳ್ಳದೆ 77 ರನ್ ಗಳಿಸಿತ್ತು. ಐದನೇ ದಿನದಾಟ ಆರಂಭಿಸಿದ ಇಂಗ್ಲೆಂಡ್ ಭಾರತೀಯ ಬೌಲರ್‌ಗಳಾದ ಉಮೇಶ್ ಯಾದವ್, ಬುಮ್ರಾ, ಜಡೇಜಾ ಅವರ ದಾಳಿಗೆ ಸಿಲುಕಿ ಅತಿಥೇಯರು 210 ರನ್ ಗಳಿಗೆ ಆಲೌಟ್ ಆಗಿ 157ರನ್‌ಗಳಿಂದ ಪರಾಭವಗೊಂಡರು.  ಈ ಗೆಲುವಿನೊಂದಿಗೆ ಭಾರತ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ  2-1 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ.

Submit Your Article