ಮೂರು ಮಾದರಿಗೆ 3 ನಾಯಕರು: ಆಫ್ರಿಕಾ ಪ್ರವಾಸಕ್ಕೆ ಟೀಂ ಇಂಡಿಯಾ ಆಟಗಾರರ ಪಟ್ಟಿ ಬಿಡುಗಡೆ

Mumbai: ಮೂರು ಮಾದರಿಯ ಕ್ರಿಕೆಟಿಗೆ (Cricket) ಮೂವರು ನಾಯಕರನ್ನು ಆಯ್ಕೆ ಮಾಡಿರುವ ಭಾರತೀಯ ಕ್ರಿಕೆಟ್ ಆಡಳಿತ ಮಂಡಳಿ, ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಟೀಮ್ ಇಂಡಿಯಾ (Team India) ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಬಿಸಿಸಿಐ (BCCI) ನೀಡಿರುವ ಮಾಹಿತಿಯ ಪ್ರಕಾರ, ಟೆಸ್ಟ್ ತಂಡಕ್ಕೆ ರೋಹಿತ್ ಶರ್ಮಾ, ಏಕದಿನ ತಂಡಕ್ಕೆ ಕೆಎಲ್ ರಾಹುಲ್ (K L Rahul), ಟಿ-20 ತಂಡಕ್ಕೆ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಇನ್ನು ಟೀಮ್ ಇಂಡಿಯಾ ಡಿಸೆಂಬರ್ (December) 10ರಿಂದ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದು, 3 ಟಿ20, 3 ಏಕದಿನ ಹಾಗೂ 2 ಟೆಸ್ಟ್ ಪಂದ್ಯಗಳನ್ನಾಡಲಿದೆ.

ಟೆಸ್ಟ್ ತಂಡ
ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ವಿರಾಟ್ ಕೊಹ್ಲಿ (Virat Kohli) ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, , ಶ್ರೇಯಸ್ ಅಯ್ಯರ್, ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (Ishan Kishan), ಕೆಎಲ್ ರಾಹುಲ್ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದುಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಮೊಹಮ್ಮದ್ ಶಮಿ, ಪ್ರಸಿದ್ಧ್ ಕೃಷ್ಣ.

ಏಕದಿನ ತಂಡ:
ಕೆಎಲ್ ರಾಹುಲ್ (ನಾಯಕ) ಋತುರಾಜ್ ಗಾಯಕ್ವಾಡ್, ಸಾಯ್ ಸುದರ್ಶನ್, ತಿಲಕ್ ವರ್ಮಾ (Tilak Varma), ರಜತ್, ದೀಪಕ್ ಚಹರ್. ಪಾಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್ (Akshar Patel), ವಾಷಿಂಗ್ಟನ್, ಅವೇಶ್ ಖಾನ್, ಸುಂದರ್, ಕುಲ್ದೀಪ್ ಯಾದವ್, ಯುಜುವೇಂದ್ರ ಚಹಲ್, ಮುಖೇಶ್ ಕುಮಾರ್, ಅರ್ಷದೀಪ್ ಸಿಂಗ್,

ಟಿ20 ತಂಡ:
ಸೂರ್ಯಕುಮಾರ್ ಯಾದವ್ (Surya Kumar Yadav) (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ತಿಲಕ್ ವರ್ಮಾ, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಜಿತೇಶ್ ಶರ್ಮಾ, ದೀಪಕ್ ಚಹರ್. (ವಿಕೆಟ್ಕೀಪರ್), ರವೀಂದ್ರ ಜಡೇಜಾ (Ravindra Jadeja) (ಉಪನಾಯಕ), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಋತುರಾಜ್ ಗಾಯಕ್ವಾಡ್,ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್,

Exit mobile version