ದಕ್ಷಿಣ ಆಫ್ರಿಕಾ ವಿರುದ್ದ ಭಾರತಕ್ಕೆ ಗೆಲುವು

ಸೆಂಚುರಿಯನ್‌ ಡಿ 30 : ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಭಾರತ ತಂಡ ಮೊದಲ ಟೆಸ್ಟ್ ಪಂದ್ಯದಲ್ಲೇ ಆತಿಥೇಯರಿಗೆ ಶಾಕ್ ನೀಡಿ ಭರ್ಜರಿ ಗೆಲುವು ದಾಖಲಿಸಿದೆ. ಸೆಂಚುರಿಯನ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೌತ್ ಆಫ್ರಿಕಾವನ್ನು 113 ರನ್​ಗಳಿಂದ ಸೋಲಿಸುವ ಮೂಲಕ ಟೀಮ್ ಇಂಡಿಯಾ 1-0 ಮುನ್ನಡೆ ಸಾಧಿಸಿದೆ. 3 ಪಂದ್ಯಗಳ ಟೆಸ್ಟ್ ಸರಣಿಯ 2ನೇ ಪಂದ್ಯವು ಜನವರಿ 3 ರಿಂದ ಶುರುವಾಗಲಿದೆ. ಈ ಪಂದ್ಯದಲ್ಲಿಇಂಡಿಯಾ ಗೆದ್ದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಏಕೆಂದರೆ ಭಾರತ ತಂಡವು ಇದುವರೆಗೆ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಗೆದ್ದಿಲ್ಲ.

ಹರಿಣರ ನಾಡಲ್ಲಿ ಟೀಮ್ ಇಂಡಿಯಾ ಈವರೆಗೆ 20 ಟೆಸ್ಟ್ ಪಂದ್ಯಗಳನ್ನು ಆಡಿದೆ. ಅದರಲ್ಲಿ ಗೆದ್ದಿರುವುದು ಕೇವಲ ಮೂರು ಪಂದ್ಯಗಳಲ್ಲಿ ಮಾತ್ರ. ಇನ್ನು ಕಳೆದ ಬಾರಿ 2018 ರಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ದ 1-2 ಅಂತರದಿಂದ ಸರಣಿ ಸೋತಿತ್ತು. ಆದರೆ ಈ ಬಾರಿ ಮೊದಲ ಪಂದ್ಯದಲ್ಲೇ ಐತಿಹಾಸಿಕ ಗೆಲುವು ದಾಖಲಿಸುವ ಮೂಲಕ ಹೊಸ ನಿರೀಕ್ಷೆಯನ್ನು ಹುಟ್ಟುಹಾಕಿದೆ.

2ನೇ ಇನ್ನಿಂಗ್ಸ್‌ನಲ್ಲಿ 241 ರನ್​ಗಳ ಗುರಿ ಪಡೆದ ದಕ್ಷಿಣ ಆಫ್ರಿಕಾಗೆ ಅಂದು ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಶಾಕ್ ನೀಡಿದ್ದರು. ಡೀನ್ ಎಲ್ಗರ್ ಹಾಗೂ ಹಾಶಿಂ ಆಮ್ಲ ಅಂದು ಅರ್ಧಶತಕ ಬಾರಿಸಿದರೂ ಶಮಿಯ ಮಾರಕ ದಾಳಿಗೆ ಕ್ರೀಸ್​ ಕಚ್ಚಿ ನಿಲ್ಲಲು ಸಾಧ್ಯವಾಗಿಲ್ಲ. ಅದರಂತೆ ಐದು ವಿಕೆಟ್ ಉರುಳಿಸಿದ ಶಮಿ 177 ರನ್​ಗೆ ದಕ್ಷಿಣ ಆಫ್ರಿಕಾ ಸರ್ವಪತನಕ್ಕೆ ಕಾರಣರಾಗಿದ್ದರು. ಈ ಮೂಲಕ ಟೀಮ್ ಇಂಡಿಯಾ 63 ರನ್​ಗಳ ಜಯ ಸಾಧಿಸಿತ್ತು.

Exit mobile version