ಶ್ರೀಲಂಕಾ ತಂಡವನ್ನು ಎದುರಿಸಲು ಮುಂಬೈಗೆ ಹಾರಿದ ರೋಹಿತ್ ಪಡೆ

ಟೀಂ ಇಂಡಿಯಾ (Team India) ಇದೀಗ ತನ್ನ ಸೆಮಿಫೈನಲ್‌ ಟಿಕೆಟ್ (Semifinal Ticket) ಅನ್ನು ಬಹುತೇಕ ಖಚಿತಪಡಿಸಿಕೊಂಡಿದ್ದು, ಮುಂದಿನ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಎದುರಿಸಲು ಮುಂಬೈಗೆ ಹಾರಿದೆ. ನವೆಂಬರ್ 2 ರಂದು ರೋಹಿತ್ ಪಡೆ ಮುಂದಿನ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಎದುರಿಸಲಿದೆ.

ಟೀಂ ಇಂಡಿಯಾವು ಲಕ್ನೋದ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ (Ekna Cricket Stadium) ನಡೆದ ವಿಶ್ವಕಪ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು 100 ರನ್ ಗಳಿಂದ ಸೋಲಿಸಿ ತನ್ನ ಅಜೇಯ ಓಟವನ್ನು ಮುಂದುವರೆಸಿದ್ದು, ಬಲಿಷ್ಠ ಇಂಗ್ಲೆಂಡ್ (England) ತಂಡವನ್ನು ಆರಂಭದಿಂದಲೂ ಕಾಡಿದ ಭಾರತದ ಬೌಲರ್​ಗಳು ಆಂಗ್ಲರನ್ನು ಕೇವಲ 129 ರನ್​ಗಳಿಗೆ ಆಲೌಟ್ ಮಾಡಿತು.

ಮೊದಲ ಸ್ಥಾನದಲ್ಲಿ ಭಾರತ
ಪಾಯಿಂಟ್ (Point) ಪಟ್ಟಿಯಲ್ಲಿ ಟೀಂ ಇಂಡಿಯಾ ಆಡಿರುವ ಆರು ಪಂದ್ಯಗಳು ಅಗ್ರಸ್ಥಾನವನ್ನು ಅಲಂಕರಿಸಿದ್ದು, ಇದರೊಂದಿಗೆ ಸೆಮಿಫೈನಲ್‌ ಟಿಕೆಟ್ ಅನ್ನು ಖಚಿತಪಡಿಸಿಕೊಂಡಿದೆ. ಆದರೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ತನ್ನಲ್ಲಿಯೇ ಉಳಿಸಿಕೊಳ್ಳಬೇಕೆಂದರೆ ಟೀಂ ಇಂಡಿಯಾ ಉಳಿದಿರುವ ಮೂರು ಪಂದ್ಯಗಳನ್ನು ಗೆಲ್ಲಬೇಕಿದೆ. ಮುಂದಿನ ಪಂದ್ಯದಲ್ಲಿ ಶ್ರೀಲಂಕಾ (Srilanka) ತಂಡವನ್ನು ಎದುರಿಸಲಿರುವ ಟೀಂ ಇಂಡಿಯಾ, ಆ ಬಳಿಕ ದಕ್ಷಿಣ ಆಫ್ರಿಕಾ ಹಾಗೂ ನೆದರ್ಲೆಂಡ್ ತಂಡವನ್ನು ಎದುರಿಸಲಿದೆ.

ಸೆಮಿಸ್ ಹಾದಿ ಕಠಿಣ
ಶ್ರೀಲಂಕಾ ತಂಡ ಆಡಿರುವ 5 ಪಂದ್ಯಗಳಲ್ಲಿ 2 ರಲ್ಲಿ ಗೆದ್ದು ಮೂರರಲ್ಲಿ ಸೋತಿದೆ. ಆದರೆ ತಂಡಕ್ಕೆ ಸೆಮಿಫೈನಲ್‌ (Semifinal) ಬಾಗಿಲು ಇನ್ನೂ ತೆರೆದಿದ್ದು, ಹಾಗಾಗಿ ಉಳಿದಿರುವ 4 ಪಂದ್ಯಗಳಲ್ಲಿ ಲಂಕಾ ತಂಡ ಗೆದ್ದು, ಟಾಪ್ 4 ರಲ್ಲಿ ಸ್ಥಾನ ಪಡೆದಿರುವ ಇತರ ತಂಡಗಳು ಸೋಲನುಭವಿಸಿದರೆ ತಂಡಕ್ಕೆ ಸೆಮಿಫೈನಲ್​ಗೆ ಹೋಗುವ ಕೊನೆಯ ಅವಕಾಶ ಸಿಗಲಿದೆ.

ಭಾರತ ತಂಡ: ರೋಹಿತ್ ಶರ್ಮಾ (Rohit Sharma) (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ (Virat Kohil) , ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ.

ಶ್ರೀಲಂಕಾ ತಂಡ: ಪಾತುಮ್ ನಿಸ್ಸಾಂಕ, ಕುಸಾಲ್ ಪೆರೇರಾ, ಕುಸಲ್ ಮೆಂಡಿಸ್ (Kusal Mendis) (ನಾಯಕ), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ಏಂಜೆಲೊ ಮ್ಯಾಥ್ಯೂಸ್ (Angelo Mathews) , ಮಹೇಶ್ ತೀಕ್ಷಣ, ಕಸುನ್ ರಜಿತ, ದಿಲ್ಶನ್ ಮಧುಶಂಕ, ದುಷ್ಮಂತ ಚಮೀರ, ದಿಮುತ್ ಕರುಣಾರತ್ನೆ, ಚಾಮಿಕಾ ಕರುಣಾರತ್ನೆ, ದುನಿತ್ ವೆಲ್ಲಲಾಗೆ, ದುಶನ್ ಹೇಮಂತ..

ಭವ್ಯಶ್ರೀ ಆರ್.ಜೆ

Exit mobile version