Amit Shah : ಭಾರತ ಕೆಲವೇ ವರ್ಷಗಳಲ್ಲಿ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ : ಅಮಿತ್ ಶಾ

amit shah

India : ಇನ್ನು ಕೆಲವೇ ವರ್ಷಗಳಲ್ಲಿ ಭಾರತವು(India) ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ(Economy) ಮತ್ತು

ಸಹಕಾರಿ ಕ್ಷೇತ್ರವು ದೇಶದ ಆರ್ಥಿಕ ಬೆಳವಣಿಗೆಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಲಿದೆ ಎಂದು ಕೇಂದ್ರ ಗೃಹಸಚಿವ (Home Minister) ಅಮಿತ್ ಶಾ(Amit Shah) ಹೇಳಿದ್ದಾರೆ.

2024ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಗ್ರಾಮ ಮಟ್ಟದಲ್ಲಿ 2 ಲಕ್ಷ ಹೊಸ ಡೈರಿ ಸಹಕಾರಿ ಸಂಘಗಳನ್ನು ಸ್ಥಾಪಿಸಲು ಸರ್ಕಾರ ಸಹಾಯ ಮಾಡಲಿದೆ ಎಂದು ಅಮಿತ್ ಶಾ ಘೋಷಿಸಿದರು.

ವೃತ್ತಿಪರತೆ, ಅತ್ಯಾಧುನಿಕ ತಂತ್ರಜ್ಞಾನ, ಗಣಕೀಕರಣ ಮತ್ತು ಡಿಜಿಟಲ್ ಪಾವತಿಯನ್ನು ದೊಡ್ಡ ರೀತಿಯಲ್ಲಿ ಅಳವಡಿಸಿಕೊಳ್ಳುವಂತೆ ಡೈರಿ ಉದ್ಯಮವನ್ನು ಕೇಳಿಕೊಂಡರು, ಇಲ್ಲದಿದ್ದರೆ ಮುಂದೆ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಕೊಟ್ಟರು.

ಹೆಚ್ಚುತ್ತಿರುವ ದೇಶೀಯ ಬೇಡಿಕೆಯನ್ನು ಪೂರೈಸಲು ಮತ್ತು ಬಡ ರಾಷ್ಟ್ರಗಳಿಗೆ ಸರಬರಾಜು ಮಾಡಲು ಹಾಲು ಉತ್ಪಾದನೆಯನ್ನು ಹೆಚ್ಚಿಸಲು ಡೈರಿ ಉದ್ಯಮವನ್ನು ಅಮಿತ್ ಶಾ ಕೇಳಿದರು.

https://vijayatimes.com/oldest-historical-namib-desert/

ಹಾಲು ಸಂಸ್ಕರಣೆಗೆ ಬಳಸುವ ಯಂತ್ರೋಪಕರಣಗಳ ತಯಾರಿಕೆಯಲ್ಲಿ ಉದ್ಯಮವು ಸ್ವಾವಲಂಬಿಯಾಗುವಂತೆ ಉತ್ತೇಜಿಸಿದ್ದಾರೆ.

https://youtu.be/Rqix7XJeb6I ಸತ್ತರೂ ಇಲ್ಲೇ ಬದುಕಿದರೂ ಇಲ್ಲೇ!

ಸೆಪ್ಟೆಂಬರ್ 12-15ರ ಅವಧಿಯಲ್ಲಿ ಇಲ್ಲಿನ ಇಂಡಿಯಾ ಎಕ್ಸ್‌ಪೋ ಸೆಂಟರ್ ಮತ್ತು ಮಾರ್ಟ್‌ನಲ್ಲಿ ಆಯೋಜಿಸಲಾಗಿದ್ದ ಇಂಟರ್ನ್ಯಾಷನಲ್ ಡೈರಿ ಫೆಡರೇಶನ್ ವರ್ಲ್ಡ್ ಡೈರಿ ಶೃಂಗಸಭೆ (ಐಡಿಎಫ್ ಡಬ್ಲ್ಯುಡಿಎಸ್)

2022 ರಲ್ಲಿ ಶಾ ಮಾತನಾಡಿ, 2014 ರಲ್ಲಿ ಭಾರತವು ವಿಶ್ವದ 11ನೇ ಅತಿದೊಡ್ಡ ಆರ್ಥಿಕತೆಯಾಗಿತ್ತು ಮತ್ತು ಈಗ ಅದು ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂದು ಹೇಳಿದ್ದಾರೆ.

ಇನ್ನು ಕೆಲವೇ ವರ್ಷಗಳಲ್ಲಿ ನಾವು ಮೂರನೇ ಸ್ಥಾನಕ್ಕೇರುತ್ತೇವೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ.

ದೇಶವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಸಂದರ್ಭದಲ್ಲಿ ಸಹಕಾರಿ ಕ್ಷೇತ್ರದ ಕೊಡುಗೆಯ ಬಗ್ಗೆಯೂ ಚರ್ಚಿಸಲಾಗುವುದು ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

48 ವರ್ಷಗಳ ಅಂತರದ ನಂತರ ಶೃಂಗಸಭೆಯನ್ನು ಆಯೋಜಿಸಲಾಗಿದೆ ಎಂದು ಹೇಳಿದ ಅಮಿತ್ ಶಾ,

ದೇಶವು ಈಗ ಹಾಲು ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿದೆ ಮತ್ತು ರಫ್ತುದಾರ ಕೂಡ ಆಗಿದೆ. ಮಹಿಳಾ ಸಬಲೀಕರಣದಲ್ಲಿ(Women Empowerment) ಮತ್ತು

ಅಪೌಷ್ಟಿಕತೆಯ ವಿರುದ್ಧ ಹೋರಾಡುವಲ್ಲಿ ಡೈರಿ ಸಹಕಾರ ಸಂಘಗಳು ದೊಡ್ಡ ಪಾತ್ರವನ್ನು ವಹಿಸಿವೆ.

ಸಹಕಾರ ಕ್ಷೇತ್ರ ಮತ್ತು ಡೈರಿ ಸಹಕಾರಿ ಸಂಘಗಳು ಗ್ರಾಮೀಣಾಭಿವೃದ್ಧಿಯಲ್ಲಿ ಸಾಕಷ್ಟು ಕೆಲಸ ಮಾಡಿವೆ ಎಂದು ಅಭಿನಂದಿಸಿದರು.

Exit mobile version