• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಟಿ20 ವಿಶ್ವಕಪ್ 2026: ನ್ಯೂಜಿಲೆಂಡ್ ಮಣಿಸಿ ಮೂರನೇ ಬಾರಿಗೆ ವಿಶ್ವ ಚಾಂಪಿಯನ್ ಆದ ಭಾರತ

Teju Srinivas by Teju Srinivas
in Sports, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಟಿ20 ವಿಶ್ವಕಪ್ 2026: ನ್ಯೂಜಿಲೆಂಡ್ ಮಣಿಸಿ ಮೂರನೇ ಬಾರಿಗೆ ವಿಶ್ವ ಚಾಂಪಿಯನ್ ಆದ ಭಾರತ
0
SHARES
7
VIEWS
Share on FacebookShare on Twitter
  • 255 ರನ್‌ಗಳ ಗುರಿ ನೀಡಿದ ಟೀಮ್ ಇಂಡಿಯಾ; ಫೈನಲ್‌ನಲ್ಲಿ (india won T20 World Cup) ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು
  • ಸಂಜು ಸ್ಯಾಮ್ಸನ್, ಇಶಾನ್ ಕಿಶನ್ ಅರ್ಧಶತಕ ಮೆರಗು; ಬುಮ್ರಾ ಬೌಲಿಂಗ್ ದಾಳಿಗೆ ನ್ಯೂಜಿಲೆಂಡ್ ಶರಣು
  • ನ್ಯೂಜಿಲೆಂಡ್ ವಿರುದ್ಧ 96 ರನ್ ಅಂತರದ ಜಯ; ಮೂರನೇ ಬಾರಿ ವಿಶ್ವ ಚಾಂಪಿಯನ್ ಆಗಿ ಇತಿಹಾಸ ನಿರ್ಮಿಸಿದ ಭಾರತ

Ahmedabad: ಅಹಮದಾಬಾದ್‌ನ ನರೇಂದ್ರ ಮೋದಿ (Narendra Modi) ಕ್ರೀಡಾಂಗಣದಲ್ಲಿ (india won T20 World Cup) ನಡೆದ ಟಿ20 ವಿಶ್ವಕಪ್ 2026

ಫೈನಲ್ (Final) ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಪ್ರದರ್ಶನ ನೀಡಿ ನ್ಯೂಜಿಲೆಂಡ್ ವಿರುದ್ಧ 96 ರನ್‌ಗಳ ಭಾರಿ ಗೆಲುವು ಸಾಧಿಸಿದೆ.

ಈ ಮೂಲಕ ಟೀಮ್ ಇಂಡಿಯಾ ಒಟ್ಟಾರೆ ಮೂರನೇ ಬಾರಿ ಟಿ20 ವಿಶ್ವಕಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದ್ದು, ಸತತ ಎರಡನೇ ಬಾರಿ ವಿಶ್ವ ಚಾಂಪಿಯನ್ ಆಗಿ ಇತಿಹಾಸ

ನಿರ್ಮಿಸಿದೆ. ಇಡೀ ಟೂರ್ನಿಯಲ್ಲಿ ಭಾರತ ತಂಡದ ಆಟ ಅತ್ಯಂತ ಸ್ಥಿರವಾಗಿದ್ದು, ಆಡಿದ ಒಂಬತ್ತು ಪಂದ್ಯಗಳಲ್ಲಿ ಕೇವಲ ಒಂದೇ ಪಂದ್ಯದಲ್ಲಿ ಸೋಲನ್ನು ಅನುಭವಿಸಿತು.

ಫೈನಲ್‌ನಲ್ಲಿ ಭಾರತದ ಆಕ್ರಮಣಕಾರಿ ಬ್ಯಾಟಿಂಗ್ (Batting) ಮತ್ತು ಕಟ್ಟು ನಿಟ್ಟಾದ ಬೌಲಿಂಗ್ (Bowling) ಪ್ರದರ್ಶನವೇ ತಂಡಕ್ಕೆ ಚಾಂಪಿಯನ್ ಪಟ್ಟ ತಂದುಕೊಟ್ಟಿತು.

ಲೀಗ್ ಹಂತದಲ್ಲಿ ಭಾರತ ಆಡಿದ ನಾಲ್ಕು ಪಂದ್ಯಗಳನ್ನೂ ಗೆದ್ದು ಆತ್ಮವಿಶ್ವಾಸದಿಂದ ಸೂಪರ್-8 ಹಂತಕ್ಕೆ ಪ್ರವೇಶಿಸಿತ್ತು.

ಆದರೆ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಪಂದ್ಯದಲ್ಲಿ ಸೋಲನ್ನು ಕಂಡ ತಂಡ, ನಂತರ ಅದರಿಂದ ಪಾಠ ಕಲಿತು ಮುಂದಿನ ಎಲ್ಲಾ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿತು.

ನಿರಂತರ ಜಯಗಳ ಮೂಲಕ ಸೆಮಿಫೈನಲ್ ತಲುಪಿದ ಭಾರತ, ಅಲ್ಲಿ ಇಂಗ್ಲೆಂಡ್ (india won T20 World Cup) ತಂಡವನ್ನು ಮಣಿಸಿ ಫೈನಲ್‌ಗೆ ಪ್ರವೇಶಿಸಿತು.

ಈ ಗೆಲುವಿನ ಹಾದಿಯಲ್ಲಿ ಭಾರತೀಯ ಆಟಗಾರರು ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಸಮತೋಲನ ಪ್ರದರ್ಶನ ನೀಡಿದ್ದು, ವಿಶ್ವಕಪ್ ಜಯಕ್ಕೆ ಬಲವಾದ ನೆಲೆಯಾಯಿತು.

ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಭರ್ಜರಿ 255 ರನ್ ಗಳಿಸಿತು.

ಆರಂಭಿಕ ಬ್ಯಾಟರ್‌ಗಳಾದ ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಮತ್ತು ಸಂಜು ಸ್ಯಾಮ್ಸನ್ ತಂಡಕ್ಕೆ ಶಕ್ತಿಯುತ ಆರಂಭ ಒದಗಿಸಿದರು. ಕಳಪೆ ಫಾರ್ಮ್‌ನಿಂದ ಕಂಗೆಟ್ಟಿದ್ದ ಅಭಿಷೇಕ್

ಶರ್ಮಾ ಫೈನಲ್‌ನಲ್ಲಿ ಅದ್ಭುತ ಕಮ್‌ಬ್ಯಾಕ್ ಮಾಡಿದರು. ಅವರು ಕೇವಲ 18 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಟೂರ್ನಿಯ ವೇಗದ ಅರ್ಧಶತಕದ ದಾಖಲೆಯನ್ನೂ ನಿರ್ಮಿಸಿದರು.

ಅಭಿಷೇಕ್ 21 ಎಸೆತಗಳಲ್ಲಿ 52 ರನ್ ಗಳಿಸಿ ಔಟ್ ಆದರು. ಬಳಿಕ ಇಶಾನ್ ಕಿಶನ್ ಮತ್ತು ಸಂಜು ಸ್ಯಾಮ್ಸನ್ ಜೋಡಿ ಎರಡನೇ ವಿಕೆಟ್‌ಗೆ 48 ಎಸೆತಗಳಲ್ಲಿ 105 ರನ್ ಸೇರಿಸಿ

ತಂಡದ ಮೊತ್ತವನ್ನು ವೇಗವಾಗಿ ಹೆಚ್ಚಿಸಿತು. ಸಂಜು ಸ್ಯಾಮ್ಸನ್ 89 ರನ್ ಗಳಿಸಿ ಶತಕ ತಪ್ಪಿಸಿಕೊಂಡರೆ, ಇಶಾನ್ ಕಿಶನ್ 54 ರನ್ ಗಳಿಸಿ ತಂಡಕ್ಕೆ ದೊಡ್ಡ ಕೊಡುಗೆ ನೀಡಿದರು.

ಕೊನೆಯ ಹಂತದಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ಸೂರ್ಯಕುಮಾರ್ ಯಾದವ್ ಹೆಚ್ಚು ಸಮಯ ಕ್ರೀಸ್‌ನಲ್ಲಿ ಉಳಿಯಲಿಲ್ಲ. ಆದರೆ ಶಿವಂ ದುಬೆ ಅಂತಿಮ

ಕ್ಷಣದಲ್ಲಿ ಆಕ್ರಮಣಕಾರಿ ಆಟವಾಡಿ ಕೇವಲ 8 ಎಸೆತಗಳಲ್ಲಿ 26 ರನ್ ಗಳಿಸಿದರು. ಇದರೊಂದಿಗೆ ಭಾರತದ ಮೊತ್ತ 250 ರನ್ ಗಡಿ ದಾಟಿತು.

ನ್ಯೂಜಿಲೆಂಡ್ ಪರ ಜಿಮ್ಮಿ ನಿಶಾಮ್ (Jimmy Neesham) ಮೂರು ವಿಕೆಟ್ ಪಡೆದು ಗಮನ ಸೆಳೆದರು.

ಭಾರತ ನೀಡಿದ 256 ರನ್ ಗುರಿಯನ್ನು ಬೆನ್ನತ್ತಿದ ನ್ಯೂಜಿಲೆಂಡ್ (Zealand) ಆರಂಭದಲ್ಲಿ ಉತ್ತಮ ಪ್ರದರ್ಶನ ನೀಡಿದರೂ, ಮಧ್ಯದ ಓವರ್‌ಗಳಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ನ್ಯೂಜಿಲೆಂಡ್ ಪರ ಟಿಮ್ ಸೈಫರ್ಟ್ ಮಾತ್ರ ಅರ್ಧಶತಕ ಸಿಡಿಸಿ 52 ರನ್ ಗಳಿಸಿದರು. ಮಿಚೆಲ್ ಸ್ಯಾಂಟ್ನರ್ 43 ರನ್ ಗಳಿಸಿ ತಂಡಕ್ಕೆ ಸ್ವಲ್ಪ ಪ್ರತಿರೋಧ ನೀಡಿದರೂ, ಉಳಿದ ಬ್ಯಾಟರ್‌ಗಳು ಭಾರತೀಯ ಬೌಲರ್‌ಗಳ ಎದುರು ನಿಲ್ಲಲು ಸಾಧ್ಯವಾಗಲಿಲ್ಲ.

ಭಾರತದ ಪರ ಜಸ್ಪ್ರೀತ್ ಬುಮ್ರಾ ನಾಲ್ಕು ವಿಕೆಟ್ ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಅಕ್ಷರ್ ಪಟೇಲ್ (Axar Patel) ಮೂರು ವಿಕೆಟ್ ಕಿತ್ತರು.

ಅತ್ಯುತ್ತಮ ಬೌಲಿಂಗ್ ಪ್ರದರ್ಶನಕ್ಕಾಗಿ ಬುಮ್ರಾಗೆ ‘ಪ್ಲೇಯರ್ ಆಫ್ ದ ಮ್ಯಾಚ್’ ಪ್ರಶಸ್ತಿ ಲಭಿಸಿತು.

ಇಡೀ ಟೂರ್ನಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಸಂಜು ಸ್ಯಾಮ್ಸನ್ ‘ಟೂರ್ನಿಯ ಅತ್ಯುತ್ತಮ ಆಟಗಾರ’ ಪ್ರಶಸ್ತಿಯನ್ನು ಪಡೆದುಕೊಂಡರು.

ಅವರ ಈ ಸಾಧನೆಯಿಂದ ಭಾರತ ತಂಡ ವಿಶ್ವ ಚಾಂಪಿಯನ್ ಪಟ್ಟವನ್ನು ಭರ್ಜರಿಯಾಗಿ ಕಾಪಾಡಿಕೊಳ್ಳುವಲ್ಲಿ ಯಶಸ್ವಿಯಾಯಿತು.

ಇದನ್ನು ಓದಿ : https://vijayatimes.com/flights-cancelled-at-kempegowda-airport/

Tags: CricketIndiamatchsportst20zealand

Related News

ಬೆಂಗಳೂರಿಗೆ ದಕ್ಷಿಣ ಆಫ್ರಿಕಾದಿಂದ ನಾಲ್ಕು ಚೀತಾಗಳ ಆಗಮನ: ಬನ್ನೇರುಘಟ್ಟ ಮೃಗಾಲಯಕ್ಕೆ ಹೊಸ ಕಳೆ
ಪ್ರಮುಖ ಸುದ್ದಿ

ಬೆಂಗಳೂರಿಗೆ ದಕ್ಷಿಣ ಆಫ್ರಿಕಾದಿಂದ ನಾಲ್ಕು ಚೀತಾಗಳ ಆಗಮನ: ಬನ್ನೇರುಘಟ್ಟ ಮೃಗಾಲಯಕ್ಕೆ ಹೊಸ ಕಳೆ

April 18, 2026
ಸಾರ್ವಜನಿಕ ಭವಿಷ್ಯ ನಿಧಿ ಯೋಜನೆಯಿಂದ ಸುರಕ್ಷಿತ ಉಳಿತಾಯ : ಮಧ್ಯಮ ವರ್ಗದವರಿಗೆ ಹೇಳಿ ಮಾಡಿಸಿದ ಯೋಜನೆ
ಪ್ರಮುಖ ಸುದ್ದಿ

ಸಾರ್ವಜನಿಕ ಭವಿಷ್ಯ ನಿಧಿ ಯೋಜನೆಯಿಂದ ಸುರಕ್ಷಿತ ಉಳಿತಾಯ : ಮಧ್ಯಮ ವರ್ಗದವರಿಗೆ ಹೇಳಿ ಮಾಡಿಸಿದ ಯೋಜನೆ

April 18, 2026
ಹೈಕೋರ್ಟ್ ಸೂಚನೆ ಬೆನ್ನಲ್ಲೇ ರಾಜ್ಯದಲ್ಲಿ ವೇತನಸಹಿತ ಋತುಸ್ರಾವ ರಜೆ ಜಾರಿಗೆ ಸರ್ಕಾರ ಸಜ್ಜು
ಪ್ರಮುಖ ಸುದ್ದಿ

ಹೈಕೋರ್ಟ್ ಸೂಚನೆ ಬೆನ್ನಲ್ಲೇ ರಾಜ್ಯದಲ್ಲಿ ವೇತನಸಹಿತ ಋತುಸ್ರಾವ ರಜೆ ಜಾರಿಗೆ ಸರ್ಕಾರ ಸಜ್ಜು

April 18, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು: NDAಗೆ ನಿರಾಸೆ
ದೇಶ-ವಿದೇಶ

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು: NDAಗೆ ನಿರಾಸೆ

April 18, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.