ಶುಕ್ರವಾರ ಮುಂಜಾನೆ ಜಮ್ಮು(Jammu) ಜಿಲ್ಲೆಯ ಜಲಾಲಾಬಾದ್(Jalalabad) ಸುಂಜ್ವಾನ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಒಬ್ಬ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಜಮ್ಮು ಮತ್ತು ಕಾಶ್ಮೀರ(Jammu & Kashmir) ಪೊಲೀಸ್ ಸಿಬ್ಬಂದಿ ಮತ್ತು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಜವಾನರು ಸೇರಿದಂತೆ ಕನಿಷ್ಠ ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂಬುದು ವರದಿಯಲ್ಲಿದೆ.
ರಾತ್ರಿ ಐವರು ಸಿಬ್ಬಂದಿ ಗಾಯಗೊಂಡಿದ್ದು, ಅವರಲ್ಲಿ ಸಿಐಎಸ್‌ಎಫ್‌ನ ಸಹಾಯಕ ಸಬ್-ಇನ್‌ಸ್ಪೆಕ್ಟರ್ (ಎಎಸ್‌ಐ) ಎಸ್‌ಪಿ ಪಟೇಲ್ ಅವರು ಗಾಯಗೊಂಡಿದ್ದಾರೆ. ಅಂಡರ್ ಬ್ಯಾರೆಲ್ ಗ್ರೆನೇಡ್ ಲಾಂಚರ್‌ನಿಂದ (ಯುಬಿಜಿಎಲ್) ಭಯೋತ್ಪಾದಕ ಗ್ರೆನೇಡ್ ಎಸೆದಾಗ ಬೆಳಿಗ್ಗೆ ಐವರಿಗೆ ಗಾಯಗಳಾಗಿವೆ. ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿಯಲ್ಲಿ ಗಾಯಗೊಂಡವರಲ್ಲಿ ಕಥುವಾದ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಬಲರಾಜ್ ಸಿಂಗ್, ಅಖ್ನೂರ್‌ನ ಎಸ್‌ಪಿಒ ಸಾಹಿಲ್ ಶರ್ಮಾ, ಒಡಿಶಾದ ಸಿಐಎಸ್‌ಎಫ್‌ನ ಪರ್ಮೋದ್ ಪತ್ರ ಮತ್ತು ಅಸ್ಸಾಂನ ಅಮೀರ್ ಸೊರಾನ್ ಸೇರಿದ್ದಾರೆ.
ಜಮ್ಮು ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಶೂಟ್ ಮಾಡಲಾಗಿದೆ. ಉಗ್ರರು ಒಳನುಸುಳುವಿಕೆಯಲ್ಲಿ ತೊಡಗಿದ್ದರು ಎಂದು ಮೂಲಗಳು ತಿಳಿಸಿವೆ. ಸತ್ತ ಭಯೋತ್ಪಾದಕರು ಫಿದಾಯೀನ್‌ಗಳು ಅಥವಾ ಆತ್ಮಹತ್ಯಾ ದಾಳಿಕೋರರು ಎಂದು ಕಂಡುಬಂದಿದೆ ಎಂದು ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರು ದೊಡ್ಡ ಪ್ರಮಾಣದ ಮದ್ದುಗುಂಡುಗಳನ್ನು ಹೊತ್ತೊಯ್ಯುತ್ತಿದ್ದರು ಎಂದು ವರದಿಯಲ್ಲಿ ತಿಳಿಸಿದ್ದಾರೆ. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಜಮ್ಮು ಮತ್ತು ಕಾಶ್ಮೀರ ಡಿಜಿಪಿ ದಿಲ್ಬಾಗ್ ಸಿಂಗ್ ಸ್ಥಳೀಯ ಸುದ್ದಿಪತ್ರಿಕೆಗೆ ಮಾಹಿತಿ ನೀಡಿದ್ದಾರೆ.
ನಾವು ಭಯೋತ್ಪಾದಕರನ್ನು ಹೊಡೆದುರುಳಿಸಲಿದ್ದೇವೆ ಎಂದು ಹೇಳಿದರು. “ಕೆಲವು ಭಯೋತ್ಪಾದಕರು ಇಲ್ಲಿ ಅಡಗಿಕೊಂಡಿದ್ದಾರೆ ಎಂಬ ಮಾಹಿತಿಯನ್ನು ಪಡೆದ ನಂತರ ನಾವು ರಾತ್ರಿಯಲ್ಲಿ ಪ್ರದೇಶವನ್ನು ಸುತ್ತುವರೆದಿದ್ದೇವೆ. ಎನ್‌ಕೌಂಟರ್‌ನಲ್ಲಿ ನಮ್ಮ ಭದ್ರತಾ ಸಿಬ್ಬಂದಿಯೊಬ್ಬರು ಪ್ರಾಣ ಕಳೆದುಕೊಂಡಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಈ ಮಧ್ಯೆ ಎನ್‌ಕೌಂಟರ್ ನಡೆಯುತ್ತಿದೆ ಎಂದು ಜಮ್ಮುವಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಮುಖೇಶ್ ಸಿಂಗ್ ಹೇಳಿದ್ದಾರೆ.