Jammu Kashmir: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ (Kulgam) ಭಯೋತ್ಪಾದಕರು (Terrorists) ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ (Encounter) ಮುಂದುವರೆದಿದೆ. ಎನ್ಕೌಂಟರ್ನಲ್ಲಿ ಯೋಧರು (Warriors) ಐವರು ಉಗ್ರರನ್ನು (Five militants) ಸದೆಬಡಿದಿದ್ದಾರೆ. ಈ ಎನ್‌ಕೌಂಟರ್ ಕುಲ್ಗಾಮ್‌ನ ಬೆಹಿಬಾಗ್ ಪ್ರದೇಶದಲ್ಲಿ ನಡೆದಿದೆ.ಇಬ್ಬರು ಭಯೋತ್ಪಾದಕರ ಮಾಹಿತಿಯ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸೇನೆಯು ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

ಬುಧವಾರ ರಾತ್ರಿ, ಜಿಲ್ಲೆಯ ಬೆಹಿಬಾಗ್ (Behibagh) ಪ್ರದೇಶದ ಕಡ್ಡರ್‌ನಲ್ಲಿ ಶಂಕಿತ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಗುಪ್ತಚರ (Intelligence) ಮಾಹಿತಿ ಪಡೆದ ತಕ್ಷಣ ಭದ್ರತಾ ಪಡೆ ಸಿಬ್ಬಂದಿ (Security Force personnel) ಹಾಗೂ ಜಮ್ಮು ಕಾಶ್ಮೀರ ಪೊಲೀಸರು (Jammu Kashmir Police) ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು.ಗುರುವಾರ ಮುಂಜಾನೆ ಭಯೋತ್ಪಾದಕರು (Terrorists) ಏಕಾಏಕಿ ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ (Shooting attack) ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ಚಕಮಕಿ ನಡೆಸಿ ಐವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಈ ವೇಳೆ ಇಬ್ಬರು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಭಾರತೀಯ ಸೇನೆಯ (Indian Army) ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ (Chinar Corps Ex) ತಿಳಿಸಿದೆ.
ಪೊಲೀಸರು (Police) ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಪಡೆದ ನಂತರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಇತ್ತೀಚಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಅನೇಕ ಎನ್‌ಕೌಂಟರ್‌ಗಳು ಹೆಚ್ಚಾಗಿವೆ.ಅದರಲ್ಲಿ ಅನೇಕ ಭಯೋತ್ಪಾದಕರು ಮತ್ತು ಅವರ ಕಮಾಂಡರ್‌ಗಳು ಕೊಲ್ಲಲ್ಪಟ್ಟಿದ್ದಾರೆ. ಈ ವೇಳೆ ಭದ್ರತಾ ಪಡೆ ಸಿಬ್ಬಂದಿಗೂ ಗಾಯಗಳಾಗಿವೆ. ಕಾಶ್ಮೀರದ ಶ್ರೀನಗರ ಮತ್ತು ಜಮ್ಮುವಿನ ಚೆನಾಬ್ ಕಣಿವೆ (Chenab Valley of Jammu), ಉಧಮ್‌ಪುರ (Udhampur) ಮತ್ತು ಕಥುವಾ ಪ್ರದೇಶಗಳಂತಹ (Kathua areas) ಜಮ್ಮು ಮತ್ತು ಕಾಶ್ಮೀರದ ಪ್ರದೇಶಗಳಲ್ಲಿ ಇದುವರೆಗೆ ಅಂತಹ ಘಟನೆಗಳಿಂದ ಮುಕ್ತವಾಗಿದ್ದ ಪ್ರದೇಶಗಳಲ್ಲೂ ಈಗ ಭಯೋತ್ಪಾದಕ ಚಟುವಟಿಕೆಗಳು ಹರಡುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ.