ಎರಡು ಪ್ರತ್ಯೇಕ ಎನ್ಕೌಂಟರ್ ನಲ್ಲಿ 4 ಭಯೋತ್ಪಾದಕರನ್ನು ಸದೆಬಡಿದ ಭಾರತೀಯ ಯೋಧರು!

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ(Jammu & Kashmir) ಪುಲ್ವಾಮಾ(Pulwama) ಮತ್ತು ಬಾರಾಮುಲ್ಲಾ ಜಿಲ್ಲೆಗಳಲ್ಲಿ ಮಂಗಳವಾರ ಭದ್ರತಾ ಪಡೆಗಳೊಂದಿಗೆ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ(Encounter) ಹತರಾದ ನಾಲ್ವರು ಭಯೋತ್ಪಾದಕರಲ್ಲಿ(Terrorists) ಜೈಶ್-ಎ-ಮೊಹಮ್ಮದ್ (ಜೆಎಂ) ಭಯೋತ್ಪಾದಕನೂ ಸೇರಿದ್ದಾನೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಬಾರಾಮುಲ್ಲಾದ ಸೋಪೋರ್ ಪ್ರದೇಶದ ತುಲಿಬಲ್ ಗ್ರಾಮದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಸರ್ಚ್ ಕಾರ್ಯಾಚರಣೆ ಆರಂಭಿಸಿವೆ ಎಂದು ಪೊಲೀಸ್(Police) ವಕ್ತಾರರು ತಿಳಿಸಿದ್ದಾರೆ. ಭದ್ರತಾ ಪಡೆಗಳತ್ತ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆಯು ಏಕಾಏಕಿ ಎನ್‌ಕೌಂಟರ್‌ಗೆ ತಿರುಗಿತು. ಎನ್‌ಕೌಂಟರ್‌ನಲ್ಲಿ ಇಬ್ಬರು ಅಪರಿಚಿತ ಉಗ್ರರನ್ನು ಹತ್ಯೆ ಮಾಡಲಾಯಿತು.

ದಕ್ಷಿಣ ಕಾಶ್ಮೀರದ(South Kashmir) ಪುಲ್ವಾಮಾದ ತುಜ್ಜನ್‌ನಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ ಮತ್ತಿಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ. ಹತ್ಯೆಗೀಡಾದ ಭಯೋತ್ಪಾದಕರಲ್ಲಿ ಒಬ್ಬನನ್ನು ಜೈಶ್-ಎ-ಮೊಹಮ್ಮದ್‌ನ ಮಜೀದ್ ನಜೀರ್ ಎಂದು ಗುರುತಿಸಲಾಗಿದೆ ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಹೇಳಿದ್ದಾರೆ. ಕೆಲವು ದಿನಗಳ ಹಿಂದೆ ಸಬ್ ಇನ್ಸ್ ಪೆಕ್ಟರ್ ಫಾರೂಕ್ ಅಹ್ಮದ್ ಮಿರ್ ಹತ್ಯೆಯಲ್ಲಿ ನಜೀರ್ ಭಾಗಿಯಾಗಿದ್ದ ಎಂಬ ಮಾಹಿತಿಯನ್ನು ಖಚಿತಪಡಿಸಿದ್ದಾರೆ.

Exit mobile version