ಇಂದಿರಾ ಕ್ಯಾಂಟೀನ್ ನಿರ್ವಹಣೆ ಇಸ್ಕಾನ್‍ಗೆ ವಹಿಸಲು ಚಿಂತನೆ!

Indira canteen

ರಾಜ್ಯದ ಕಾರ್ಮಿಕ ವರ್ಗಕ್ಕೆ ಕಡಿಮೆ ದರದಲ್ಲಿ ಊಟ ಮತ್ತು ಉಪಹಾರ ನೀಡುವ ಇಂದಿರಾ ಕ್ಯಾಂಟೀನ್‍ಗಳ(Indira Canteen) ನಿರ್ವಹಣೆಯಲ್ಲಿ ಗುತ್ತಿಗೆದಾರರು ವಿಫಲರಾಗಿದ್ದು, ಹೀಗಾಗಿ ಬೆಂಗಳೂರಿನಲ್ಲಿರುವ(Bengaluru) ಇಂದಿರಾ ಕ್ಯಾಂಟೀನ್‍ಗಳ ನಿರ್ವಹಣೆಯ ಜವಾಬ್ದಾರಿಯನ್ನು ಇಸ್ಕಾನ್ ಸಂಸ್ಥೆಗೆ(Iscon Trust) ವಹಿಸಲು ಚಿಂತನೆ ನಡೆಸಲಾಗಿದೆ.

ಇನ್ನು ಬೆಂಗಳೂರು ನಗರದಲ್ಲಿರುವ ಎಲ್ಲ ಇಂದಿರಾ ಕ್ಯಾಂಟೀನ್‍ಗಳನ್ನು ಇಸ್ಕಾನ್‍ಗೆ ವಹಿಸಲು ಬಿಬಿಎಂಪಿ(BBMP) ನಗರಾಭಿವೃದ್ದಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ತಯಾರಿ ನಡೆಸಿದೆ. ಸದ್ಯ ಇಂದಿರಾ ಕ್ಯಾಂಟೀನ್‍ಗಳನ್ನು ನಿರ್ವಹಣೆ ಮಾಡುತ್ತಿರುವ ಗುತ್ತಿಗೆದಾರರ ಬಗ್ಗೆ ಬಿಬಿಎಂಪಿಗೆ ತೃಪ್ತಿ ಇಲ್ಲ. ಹೀಗಾಗಿ ಈ ಹೊಸ ಪ್ರಸ್ತಾನವನೆ ಸಲ್ಲಿಸುತ್ತಿದ್ದೇವೆ ಎಂದು ಬಿಬಿಎಂಪಿ ವಿಶೇಷ ಆಯುಕ್ತೆ (ಹಣಕಾಸು) ತುಳಸಿ ಮದ್ದಿನೇನಿ ತಿಳಿಸಿದ್ಧಾರೆ.

ಇನ್ನು ಇಂದಿರಾ ಕ್ಯಾಂಟೀನ್‍ಗಳನ್ನು ಉದಾತ್ತ ಉದ್ದೇಶಕ್ಕಾಗಿ ತೆರೆಯಲಾಗಿದೆ. ಕಡಿಮೆ ವರಮಾನ ಇರುವ ಬಡವರಿಗೆ ನಗರಪ್ರದೇಶದಲ್ಲಿ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಆಹಾರವನ್ನು ಒದಗಿಸುವುದು ಕ್ಯಾಂಟೀನ್ ಉದ್ದೇಶ. ಆದರೆ ಹಾಲಿ ಗುತ್ತಿಗೆದಾರರ ಕಾರ್ಯನಿರ್ವಹಣೆ ಉತ್ತಮವಾಗಿಲ್ಲ. ಟೆಂಡರ್ ಕರೆದು ನಿರ್ವಹಣೆ ನೀಡಿದಾಗ ಏನಾಯಿತು ಎಂಬುದನ್ನು ನಾವು ಈಗಾಗಲೇ ನೋಡಿದ್ದೇವೆ. ನಮ್ಮ ಜೊತೆ ಕೆಲಸ ಮಾಡುವವರು ನಿಸ್ವಾರ್ಥ ಸೇವೆಯ ಮನೋಭಾವವನ್ನು ಹೊಂದಿರಬೇಕು.

ಹೀಗಾಗಿ ಈಗಾಗಲೇ ಶಾಲಾ ಮಕ್ಕಳಿಗೆ ಮತ್ತು ಪೌರ ಕಾರ್ಮಿಕರ ಮಕ್ಕಳಿಗೆ ಆಹಾರ ಪೂರೈಕೆ ಮಾಡುತ್ತಿರುವ ಇಸ್ಕಾನ್ ನಮ್ಮ ಆದ್ಯತೆಯಾಗಿದೆ. ಕಳೆದ ಅನೇಕ ವರ್ಷಗಳಿಂದ ನಿಸ್ವಾರ್ಥವಾಗಿ ಶಾಲಾ ಮಕ್ಕಳಿಗೆ ಉತ್ತಮ ಆಹಾರ ಪೂರೈಕೆ ಮಾಡುತ್ತಿರುವ ಇಸ್ಕಾನ್ ಇಂದಿರಾ ಕ್ಯಾಂಟೀನ್‍ಗಳನ್ನು ಉತ್ತಮವಾಗಿ ನಿರ್ವಹಿಸಲಿದೆ ಎಂಬ ನಂಬಿಕೆ ನಮಗಿದೆ.

ಹೀಗಾಗಿ ಇಸ್ಕಾನ್‍ನೊಂದಿಗೆ ಈ ಸಂಬಂಧ ನಾವು ಮಾತುಕತೆಗೆ ಮುಂದಾಗಿದ್ದೇವೆ ಎಂದು ಬಿಬಿಎಂಪಿ ಆಯುಕ್ತೆ (ಹಣಕಾಸು) ತುಳಿಸಿ ಮದ್ದಿನೇನಿ ತಿಳಿಸಿದ್ದಾರೆ.

Exit mobile version