vijaya times advertisements
Visit Channel

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

inflation

ಮಾರುಕಟ್ಟೆಗೆ ಹೋದಾಗ ಪ್ರತಿಯೊಂದು ವಸ್ತು ಖರೀದಿಸಬೇಕಾದರೂ ಚೌಕಾಸಿ ಮಾಡುತ್ತೇವೆ.

ಸುಮಾರು 8 ವರ್ಷದ ಹಿಂದೆ ನಾವು ಖರೀದಿಸುವ ವಸ್ತುಗಳನ್ನು ಈಗ ಅದೇ ಬೆಲೆಗೆ ಖರೀದಿಸಲು ಸಾಧ್ಯವಿಲ್ಲ. ಕಾರಣ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿವೆ, ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ.

ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.

inflation rates reduces due to essentials price

ಆರ್ಥಿಕ ಹಿಂಜರಿತದ ಭೀತಿಯಿಂದ ಜಾಗತಿಕ ವಸ್ತುಗಳ ಬೆಲೆಗಳು ತಗ್ಗುತ್ತಿರುವ ಬೆನ್ನಲ್ಲೇ ಭಾರತದಲ್ಲಿ ಹಣದುಬ್ಬರ ಕಡಿಮೆಯಾಗುವ ಸಾಧ್ಯತೆಯಿದೆ. ಇತ್ತೀಚೆಗೆ ಕಚ್ಚಾ ತೈಲ ಬೆಲೆ ತಗ್ಗಿರುವುದು ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಇಳಿಕೆಗೆ ನೆರವು ನೀಡಿದೆ. ಇನ್ನು ಆರ್ ಬಿಐ ಕೂಡ 2022-23 ಹಣಕಾಸು ಸಾಲಿನ ಹಣದುಬ್ಬರ ದರವನ್ನು ಶೇ.6.7 ಕ್ಕೆ ಅಂದಾಜಿಸಿದೆ.

ಆದರೆ, ಮನಿ ಕಂಟ್ರೋಲ್ ನಡೆಸಿದ ಸಮೀಕ್ಷೆ ಪ್ರಕಾರ ಭಾರತದಲ್ಲಿ ಜುಲೈ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7ಕ್ಕೆ ಇಳಿಕೆಯಾಗಿರುವ ಸಾಧ್ಯತೆಯಿದೆ. ಜುಲೈ ತಿಂಗಳ ಹಣದುಬ್ಬರ ದರದ ಅಧಿಕೃತ ಮಾಹಿತಿ ಇಂದು ಬಹಿರಂಗಗೊಳ್ಳಲಿದೆ. ಮೇ ತಿಂಗಳಲ್ಲಿ ಶೇ.7.04 ರಷ್ಟಿದ್ದ ಹಣದುಬ್ಬರ ಜೂನ್ ನಲ್ಲಿ ಶೇ. 7.01ಕ್ಕೆ ಇಳಿಕೆಯಾಗಿತ್ತು. ಹೀಗಾಗಿ ಜುಲೈನಲ್ಲಿ ಕೂಡ ಹಣದುಬ್ಬರ ತಗ್ಗುವ ನಿರೀಕ್ಷೆಯಂತೂ ಇದ್ದೇ ಇದೆ.

ಮನಿಕಂಟ್ರೋಲ್ ವರದಿ ಪ್ರಕಾರ ಆಹಾರ ಪದಾರ್ಥಗಳ ಬೆಲೆ ಇಳಿಕೆ ಹಾಗೂ ನಿರ್ದಿಷ್ಟ ಪ್ರಮುಖ ವಸ್ತುಗಳ ಬೆಲೆ ತಗ್ಗಿರುವ ಕಾರಣ ಜುಲೈ ತಿಂಗಳ ಹಣದುಬ್ಬರ ಇಳಿಕೆಯಾಗಿರುವ ನಿರೀಕ್ಷೆಯಿದೆ ಎಂದು ಹೇಳಿದೆ. ಎರಡು ಹಾಗೂ ಮೂರನೇ ತ್ರೈಮಾಸಿಕದಲ್ಲಿ ಹಣದುಬ್ಬರ ಶೇ. 6ಕ್ಕಿಂತ ಹೆಚ್ಚಿರುವ ನಿರೀಕ್ಷೆಯಿದೆ ಎಂದು ಗ್ರ್ಯಾಂಟ್ ಥೊರ್ನ್ ಟನ್ ಭಾರತ್ ಪಾಲುದಾರ ವಿವೇಕ್ ಐಯ್ಯರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಸಮಯದಲ್ಲಿ ಆರ್ ಬಿಐ ಹಣದುಬ್ಬರ ನಿಯಂತ್ರಣಕ್ಕೆ ರೆಪೋದರ ಏರಿಕೆಯನ್ನು ಸಾಧನವಾಗಿ ಬಳಸುವ ಬದಲು ಬೆಳವಣಿಗೆ ಕುಂಠಿತಗೊಳ್ಳದಂತೆ ನಗದು ಹರಿವಿನ ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು ಎಂಬ ಅಭಿಪ್ರಾಯವನ್ನು ಕೂಡ ಅವರು ವ್ಯಕ್ತಪಡಿಸಿದ್ದಾರೆ.

inflation rates r


2022-23ನೇ ಹಣಕಾಸು ಸಾಲಿಗೆ ಹಣದುಬ್ಬರ ಅಂದಾಜನ್ನು ಆರ್ ಬಿಐ ಶೇ.6.7ಕ್ಕೆ ನಿಗದಿಪಡಿಸಿದೆ. 2022 ರಲ್ಲಿ ಮಳೆಗಾಲ ಸಾಮಾನ್ಯವಾಗಿರುತ್ತದೆ ಹಾಗೂ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್ ಗೆ 105 ಡಾಲರ್ ಇರುವ ನಿರೀಕ್ಷೆಯಿದೆ ಎಂದು ಆರ್ ಬಿಐ ಅಂದಾಜು ಮಾಡಿತ್ತು. “2022-23ನೇ ಸಾಲಿಗೆ ಹಣದುಬ್ಬರವನ್ನು ಶೇ. 6.7 ಅಂದಾಜಿಸಲಾಗಿದೆ.

ಎರಡನೇ ತ್ರೈಮಾಸಿಕದಲ್ಲಿ ಶೇ. 7.1, ಮೂರನೇ ತ್ರೈಮಾಸಿಕದಲ್ಲಿ ಶೇ.6.4 ಹಾಗೂ ನಾಲ್ಕನೇ ತ್ರೈಮಾಸಿಕದಲ್ಲಿ ಶೇ.5.8ಕ್ಕೆ ಅಂದಾಜಿಸಲಾಗಿದೆ. ಇನ್ನು 2023-24ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಸಿಪಿಐ ಹಣದುಬ್ಬರವನ್ನು ಶೇ.5.0ಕ್ಕೆ ಅಂದಾಜಿಸಲಾಗಿದೆ” ಎಂದು ಆರ್ ಬಿಐ ಹಣಕಾಸು ನೀತಿ ಹೇಳಿಕೆಯಲ್ಲಿ ತಿಳಿಸಲಾಗಿದೆ.


ಸಿಪಿಐ ಆಧಾರಿತ ಚಿಲ್ಲರೆ ಹಣದುಬ್ಬರ ಆರ್ ಬಿಐ ನಿಗದಿಪಡಿಸಿರುವ ಗರಿಷ್ಠ ಮಟ್ಟವನ್ನು ಕಳೆದ ಐದು ತಿಂಗಳಿಂದ ಮೀರುತ್ತ ಬಂದಿದೆ. ಮಾರ್ಚ್ ನಲ್ಲಿ ಚಿಲ್ಲರೆ ಹಣದುಬ್ಬರ ಶೇ. 6.95ಕ್ಕೆ ಏರಿಕೆಯಾಗಿದ್ರೆ, ಫೆಬ್ರವರಿಯಲ್ಲಿ ಶೇ.6.07ಕ್ಕೆ ಹೆಚ್ಚಳವಾಗಿತ್ತು. ಆರ್ ಬಿಐ ಚಿಲ್ಲರೆ ಹಣದುಬ್ಬರ ಸಹನಾ ಮಿತಿಯನ್ನು ಶೇ.4ಕ್ಕೆ ನಿಗದಿಪಡಿಸಿದ್ದು, ಉಭಯ ಕಡೆ ಶೇ.2ರಷ್ಟು ಮಾರ್ಜಿನ್ ನೀಡಿದೆ. ಹೀಗಾಗಿ ಹಣದುಬ್ಬರದ ಗರಿಷ್ಠ ಮಿತಿ ಶೇ.6. ದೇಶದಲ್ಲಿ ಹಣದುಬ್ಬರ ಹೆಚ್ಚಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕಾಗಿ ಆರ್ ಬಿಐ ಈ ವರ್ಷ ಈಗಾಗಲೇ ಮೂರು ಬಾರಿ ರೆಪೋ ದರವನ್ನು ಹೆಚ್ಚಳ ಮಾಡಿದೆ.

ಆ.5ರಂದು ರೆಪೋ ದರವನ್ನು 50 ಬೇಸಿಸ್ ಪಾಯಿಂಟ್ ಗಳಷ್ಟು ಏರಿಕೆ ಮಾಡಿದೆ. ಜೂನ್ ನಲ್ಲಿ ರೆಪೋ ದರವನ್ನು 50 ಮೂಲಾಂಕಗಳಷ್ಟು ಹೆಚ್ಚಳ ಮಾಡಿತ್ತು. ಮೇನಲ್ಲಿ 40 ಮೂಲಾಂಕಗಳಷ್ಟು ಏರಿಸಿತ್ತು.

Latest News

Paneer
ಆರೋಗ್ಯ

ರುಚಿಯಷ್ಟೇ ಅಲ್ಲ, ಆರೋಗ್ಯಕ್ಕೂ ವರದಾನ ನಾವು ಪ್ರತಿದಿನ ಬಳಸುವ ಪನೀರ್

ಪನೀರ್ ಕೇವಲ ಇಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ, ನಮ್ಮ ಆರೋಗ್ಯದ ರಕ್ಷಣೆಯಲ್ಲಿ ಕೂಡ ಇದರ ಪ್ರಯೋಜನಗಳು ಅಪಾರ. ಆದರೆ ಹೆಚ್ಚಿನವರಿಗೆ ಇದರ ಬಗ್ಗೆ ಅರಿವೇ ಇಲ್ಲ.

ದೇಶ-ವಿದೇಶ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಬೆಂಗಾವಲಿಗೆ 42 ಕಾರುಗಳು‌ ; ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು

ಜನಸಾಮಾನ್ಯರ ಪಕ್ಷ ಎಂದೇ ಹೇಳಿಕೊಳ್ಳುವ ಆಮ್‌ ಆದ್ಮಿ ಪಕ್ಷದ ನಾಯಕರು ಈ ರೀತಿಯಾಗಿ ಸಾಮಾನ್ಯ ಜನರ ತೆರಿಗೆ(Tax) ಹಣವನ್ನು ದುಂದುವೆಚ್ಚ ಮಾಡುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

Mallikarjun Kharge
ರಾಜಕೀಯ

ಮಲ್ಲಿಕಾರ್ಜುನ ಖರ್ಗೆ ಚಿತ್ತ ಕಾಂಗ್ರೆಸ್ ಅಧ್ಯಕ್ಷ ಸ್ಥಾನದತ್ತ ; ಅಧ್ಯಕ್ಷ ಸ್ಥಾನ ಬಹುತೇಕ ಖಚಿತ

ಈ ರಾಜೀನಾಮೆಯನ್ನು ಸೋನಿಯಾ ಗಾಂಧಿ ಅವರು ಅಂಗೀಕರಿಸುವ ಸಾಧ್ಯತೆ ಇದ್ದು, ಹೊಸ ರಾಜ್ಯಸಭಾ ವಿರೋಧ ಪಕ್ಷದ ನಾಯಕನ ಆಯ್ಕೆ ಸಂಬಂಧ ಮುಂದಿನ ದಿನಗಳಲ್ಲಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

PFI
ದೇಶ-ವಿದೇಶ

ಬಂಧಿತ PFI ಕಾರ್ಯಕರ್ತರನ್ನು 21 ದಿನಗಳ ಕಸ್ಟಡಿಗೆ ಕಳುಹಿಸಿದ NIA ಕೋರ್ಟ್!

ಬಂಧಿತರ ಮೇಲೆ ಭಯೋತ್ಪಾದನೆಗೆ ಹಣಕಾಸಿನ ನೆರವು ಒದಗಿಸಿರುವ ಮತ್ತು ಹಿಂದೂ ಕಾರ್ಯಕರ್ತರನ್ನು ಹತ್ಯೆ(Murder) ಮಾಡಿರುವ ಆರೋಪವನ್ನು ಹೊರಿಸಲಾಗಿದೆ.