ಫುಟ್‌ಪಾತ್ ಪಾದಚಾರಿಗಳಿಗಿರಲಿ: ಸಚಿವ ಕೃಷ್ಣ ಬೈರೇಗೌಡರಿಂದ (instructions to remove transformer electric poles) ಕಟ್ಟುನಿಟ್ಟಿನ ಆದೇಶ
ಬೆಸ್ಕಾಂ ಅಡೆತಡೆಗಳ ವಿರುದ್ಧ ವಿಶೇಷ ಅಭಿಯಾನಕ್ಕೆ ಚಾಲನೆ, ಏಕರೂಪದ ಸುರಕ್ಷತಾ ಮಾನದಂಡ ಜಾರಿ
ಫುಟ್‌ಪಾತ್ ಅತಿಕ್ರಮಣಕ್ಕೆ ಬೆಸ್ಕಾಂಗೆ ಎಚ್ಚರಿಕೆ; ಹಳೆಯ ವಿದ್ಯುತ್ ಕಂಬ ತೆರವಿಗೆ ಗಡುವು
Bengaluru : ನಗರದ ಪಾದಚಾರಿ ಮಾರ್ಗಗಳನ್ನು ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ (instructions to remove transformer electric poles) ಅನುಕೂಲವಾಗುವಂತೆ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.
ನಗರದ ಹಲವು ಪ್ರದೇಶಗಳಲ್ಲಿ ಫುಟ್‌ಪಾತ್‌ಗಳ ಮೇಲೆಯೇ ಸ್ಥಾಪಿಸಲಾಗಿರುವ ಟ್ರಾನ್ಸ್‌ಫಾರ್ಮರ್‌ಗಳು (Transformer) , ಹಳೆಯ ವಿದ್ಯುತ್ ಕಂಬಗಳು ಹಾಗೂ ತೂಗುತಂತಿಗಳಿಂದ ಪಾದಚಾರಿಗಳಿಗೆ ಉಂಟಾಗುತ್ತಿರುವ ತೊಂದರೆ ಮತ್ತು ಅಪಾಯವನ್ನು ಗಂಭೀರವಾಗಿ ಪರಿಗಣಿಸಿರುವ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು, ಬೆಸ್ಕಾಂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

ನಗರದ ಎಲ್ಲ ಫುಟ್‌ಪಾತ್‌ಗಳಿಂದ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗಿರುವ ವಿದ್ಯುತ್ (instructions to remove transformer electric poles) ಮೂಲಸೌಕರ್ಯಗಳನ್ನು ಗುರುತಿಸಿ, ಹಂತ ಹಂತವಾಗಿ ತೆರವುಗೊಳಿಸುವಂತೆ ಸೂಚಿಸಲಾಗಿದೆ.
ನಗರದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಸಚಿವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಎಲ್ಲ ರಸ್ತೆಗಳಲ್ಲಿ ಬೆಸ್ಕಾಂಗೆ ಸಂಬಂಧಿಸಿದ ಟ್ರಾನ್ಸ್‌ಫಾರ್ಮರ್‌ಗಳು, ವಿದ್ಯುತ್ ಕಂಬಗಳು ಹಾಗೂ ಇತರ ಅಡೆತಡೆಗಳ ಸಮಗ್ರ ಪಟ್ಟಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ವಿಶೇಷ ಅಭಿಯಾನದ ಮೂಲಕ ಅಪಾಯಕಾರಿಯಾಗಿ ನಿಂತಿರುವ ಎಲ್ಲ ಹಳೆಯ ಹಾಗೂ ಬಳಕೆಯಲ್ಲಿಲ್ಲದ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ, ಪಾದಚಾರಿಗಳಿಗೆ ಯಾವುದೇ ಅಡಚಣೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ಜೊತೆಗೆ, ಟ್ರಾನ್ಸ್‌ಫಾರ್ಮರ್‌ಗಳಿಗೆ ಅಳವಡಿಸಿರುವ ಕಬ್ಬಿಣದ ರಾಡ್‌ಗಳು ಸುರಕ್ಷತಾ ಮಾನದಂಡಕ್ಕೆ ಅನುಗುಣವಾಗಿರುವುದನ್ನು ಖಚಿತಪಡಿಸಿಕೊಳ್ಳುವಂತೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಫುಟ್‌ಪಾತ್‌ಗಳ ಮೇಲಿರುವ ಟ್ರಾನ್ಸ್‌ಫಾರ್ಮರ್‌ಗಳನ್ನು ಸೂಕ್ತ ಮತ್ತು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ವಿಚಾರಕ್ಕೂ ಹೆಚ್ಚಿನ ಒತ್ತು ನೀಡಲಾಯಿತು.
ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿರುವ ಖಾಸಗಿ ಅಪಾರ್ಟ್‌ಮೆಂಟ್‌ಗಳ (Apartment) ಟ್ರಾನ್ಸ್‌ಫಾರ್ಮರ್‌ಗಳನ್ನು ಆಯಾ ಕಟ್ಟಡಗಳ ಆವರಣದೊಳಗೆ ಸ್ಥಳಾಂತರಿಸಲು ಸಂಬಂಧಿಸಿದ ಆಸ್ತಿ ಮಾಲೀಕರಿಗೆ ಸೂಚನೆ ನೀಡುವಂತೆ ಅಧಿಕಾರಿಗಳಿಗೆ ಸಚಿವರು ತಿಳಿಸಿದರು.
ಬೆಸ್ಕಾಂಗೆ ಸಂಬಂಧಿಸಿದ ಸಮಸ್ಯೆಗಳಿಗೆ ಕೇವಲ ತಾತ್ಕಾಲಿಕ ಪರಿಹಾರವಲ್ಲ, ಮುಂದಿನ ದಿನಗಳಲ್ಲಿ ಇಂತಹ ಸಮಸ್ಯೆಗಳು ಮರುಕಳಿಸದಂತೆ ಅಲ್ಪಾವಧಿ ಹಾಗೂ ದೀರ್ಘಾವಧಿಯ ಕಾರ್ಯಯೋಜನೆಗಳನ್ನು ಸಿದ್ಧಪಡಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.
ನಗರದ ಫುಟ್‌ಪಾತ್‌ಗಳು ಪಾದಚಾರಿಗಳ ಸುರಕ್ಷತೆಗೆ ಮೀಸಲಾಗಿರಬೇಕು ಎಂಬುದನ್ನು ಒತ್ತಿ ಹೇಳಿದ ಸಚಿವರು, ಎಲ್ಲ ರಸ್ತೆಗಳಲ್ಲಿ ಏಕರೂಪದ ವಿನ್ಯಾಸ ಮಾನದಂಡ
ಜಾರಿಯಾಗಬೇಕು ಎಂದು ಸೂಚಿಸಿದರು. ಟ್ರಾನ್ಸ್‌ಫಾರ್ಮರ್‌ಗಳು ಹಾಗೂ ವಿದ್ಯುತ್ ಉಪಕರಣಗಳು ಪಾದಚಾರಿಗಳ ಸಂಚಾರಕ್ಕೆ ಅಡ್ಡಿಯಾಗದಂತೆ ಅಳವಡಿಸಬೇಕು.
ವಿಶೇಷವಾಗಿ ಟ್ರಾನ್ಸ್‌ಫಾರ್ಮರ್‌ಗಳಿಗೆ ಅಳವಡಿಸುವ ಕಬ್ಬಿಣದ ರಾಡ್‌ಗಳು ಕನಿಷ್ಠ ಏಳು ಅಡಿ ಎತ್ತರದಲ್ಲಿರಬೇಕು ಎಂದು ನಿರ್ದೇಶಿಸಿದರು. ಜೊತೆಗೆ, ಬಳಕೆಯಲ್ಲಿಲ್ಲದ ವಿದ್ಯುತ್ ಕಂಬಗಳ ಸುತ್ತಮುತ್ತ ಕಸ ಹಾಗೂ ತ್ಯಾಜ್ಯ ಸಂಗ್ರಹವಾಗದಂತೆ ಸ್ವಚ್ಛತೆ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಸಭೆಯಲ್ಲಿ ಮಾಹಿತಿ ನೀಡಿದ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್ ಅವರು, ನಗರದ ವಿವಿಧ ಭಾಗಗಳಲ್ಲಿದ್ದ ಸುಮಾರು 7,000 ಹಳೆಯ ಟ್ರಾನ್ಸ್‌ಫಾರ್ಮರ್‌ಗಳನ್ನು ಈಗಾಗಲೇ
ಬದಲಾಯಿಸಲಾಗಿದೆ ಎಂದು ತಿಳಿಸಿದರು. ಉಳಿದಿರುವ ಸಮಸ್ಯೆಗಳನ್ನೂ ವಿಶೇಷ ಅಭಿಯಾನದ ಮೂಲಕ ಹಂತ ಹಂತವಾಗಿ ಪರಿಹರಿಸಲಾಗುವುದು ಎಂದು ಅವರು ಹೇಳಿದರು.
ನಗರದ ಎಲ್ಲ ಫುಟ್‌ಪಾತ್‌ಗಳನ್ನು ಸುರಕ್ಷಿತ, ಸುಂದರ ಮತ್ತು ಪಾದಚಾರಿ ಸ್ನೇಹಿ ವಲಯಗಳಾಗಿ ರೂಪಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಈ ಅಭಿಯಾನದಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗುವ ನಿರೀಕ್ಷೆಯಿದೆ.
ಸರ್ಕಾರದ ಈ ಕ್ರಮ ನಗರ ಸಂಚಾರ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸುವ ಜೊತೆಗೆ ಪಾದಚಾರಿಗಳ ಸುರಕ್ಷತೆಯನ್ನು ಬಲಪಡಿಸುವ ಮಹತ್ವದ ಹೆಜ್ಜೆಯಾಗಿದೆ.
ಇದನ್ನು ಓದಿ : https://vijayatimes.com/earthquake-in-japan-2/