ಉತ್ತರ ಕನ್ನಡ ಆ 19 : ಕಳೆದ ಎಂಟು ತಿಂಗಳಿನಿಂದ ದೆಹಲಿಯಲ್ಲಿ ಕೃಷಿ ಕಾಯ್ದೆಯ ವಿರುದ್ದ ಹೋರಾಟ ಮಾಡುತ್ತಿರುವ ರೈತರನ್ನು ದಲ್ಲಾಳಿಗಳು ಎಂದು ಕರೆದಿರುವ ಶೋಭಾ ಕರಂದ್ಲಾಜೆ ವಿರುದ್ದ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತರಾಮ್ ಆಗ್ರಹಿಸಿದ್ದಾರೆ.
ಮೂರು ಕೃಷಿ ಕಾಯ್ದೆ ವಾಪಸ್ಸಿಗೆ ಒತ್ತಾಯಿಸಿ ದೆಹಲಿಯಲ್ಲಿ ಕಳೆದ ಎಂಟು ತಿಂಗಳಿಂದ ಹಾಗೂ ವಿದ್ಯುತ್ ಮಸೂದೆ ವಿರುದ್ಧ ಲಕ್ಷಾಂತರ ರೈತರು ಮತ್ತು ಕಾರ್ಮಿಕರು ಹೋರಾಟ ನಡೆಸುತ್ತಿದ್ದು, ಈ ಹೋರಾಟವನ್ನು ಸಂಸದೆ ಶೋಭಾ ಕರಂದ್ಲಾಜೆ ಅವರು ದಲ್ಲಾಳಿಗಳ ಹೋರಾಟವೆಂದು ಕರೆದಿರುವುದು ರೈತರಿಗೆ ಮಾಡಿದ ಅಪಮಾನ ವಾಗಿದ್ದು, ಆದ್ದರಿಂದ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ರೈತ ಸಂಘದ ಜಿಲ್ಲಾಧ್ಯಕ್ಷ ಆಗ್ರಹಿಸಿದ್ದಾರೆ.