World Yoga Day: ಮನುಷ್ಯನಿಗೆ ಬಾಹ್ಯ ಸೌಂದರ್ಯ ಎಷ್ಟು ಮುಖ್ಯವಾಗಿರುತ್ತದೆಯೋ ಅಷ್ಟೇ ಆಂತರಿಕ ಸೌಂದರ್ಯ ಕೂಡ ದೇಹಕ್ಕೆ ಮುಖ್ಯವಾಗಿರುತ್ತದೆ. ಪ್ರತಿ ನಿತ್ಯವೂ ಮಾಡುವ ವ್ಯಾಯಾಮ ಯೋಗವು ಮನುಷ್ಯನ ಜೀವನದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪ್ರಾಚೀನ ಭಾರತದ ಪರಂಪರೆಯ #World Yoga Day ಅತಿ ಮಹತ್ವದ ಕೊಡುಗೆ ಎಂದರೆ ಅದು ಯೋಗ. ಇದು ದೇಹ ಮತ್ತು ಮನಸನ್ನು ಒಳಗೊಂಡಿರುವ ಪ್ರಕ್ರಿಯೆ. ಯೋಚನೆ ಮತ್ತು ಕ್ರಮ, ನಿಯಂತ್ರಣ ಮತ್ತು ಈಡೇರುವಿಕೆ, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಬಾಂಧವ್ಯ.

ಮನುಷ್ಯನ ಆರೋಗ್ಯ ಮತ್ತು ಸರ್ವತೋಮುಖ ಬೆಳವಣಿಗೆಗೆ ಯೋಗ ಉತ್ತಮ ಸಾಧನ. ಯೋಗ (Yoga) ಕೇವಲ ವ್ಯಾಯಾಮವಲ್ಲ, ಇದು ವಿಶ್ವ ಮತ್ತು ಪ್ರಕೃತಿಯೊಂದಿಗೆ ನಮ್ಮತನವನ್ನು ಒಂದಾಗಿಸುವ ವಿದ್ಯೆ. ಯೋಗವು ಬದುಕನ್ನು ಬದಲಿಸುವ ಮತ್ತು ಆತ್ಮಸಾಕ್ಷಿಯ ಸೃಷ್ಟಿ. ಯೋಗದ ಗುರಿಯು ಕೇವಲ ದೇಹವನ್ನು ಸರಿಪಡಿಸುವುದು ಮಾತ್ರವಲ್ಲ. ಮನಸ್ಸು, ದೇಹ ಮತ್ತು ಆತ್ಮ ಸೇರಿದ ಎಲ್ಲ ಮೂರು ಅಂಶಗಳನ್ನು ಶುದ್ದೀಕರಿಸಲು ನೆರವಾಗುತ್ತದೆ. ಇದು ನಮ್ಮನ್ನು ನಮ್ಮ ನೈಜತೆಯ ಹತ್ತಿರಕ್ಕೆ ಕೊಂಡೊಯ್ಯುತ್ತದೆ.
ಯೋಗವು 6000 ವರ್ಷಕ್ಕೂ ಹಳೆಯದಾದ ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. ಪ್ರತಿವರ್ಷ ಯೊಗದ ದಿನಾಚರಣೆಯು ಯೋಗ, ಧ್ಯಾನ, ಸಭೆಗಳು ಚರ್ಚೆಗಳು, ಸಾಂಸ್ಕೃತಿಕ ಪ್ರದರ್ಶನಗಳು ಇತ್ಯಾದಿಗಳನ್ನು ಅಭ್ಯಸಿಸುವುದರ ಮೂಲಕ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತದೆ.ಈ ಬಾರಿಯ 10ನೇ ಅಂತಾರಾಷ್ಟ್ರೀಯ ಯೋಗ ದಿನದ ಥೀಮ್ ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂದಾಗಿದೆ.

ಅದರಂತೆ ಭಾರತದಲ್ಲಿ ಜೂನ್ (June) 21ರಂದು ಯೋಗ ದಿನವನ್ನಾಗಿ ಆಚರಿಸಲಾಗುತ್ತಿದೆ. 2015ರಲ್ಲಿ ಜೂನ್ 21ನ್ನು ವಿಶ್ವ ಯೋಗ ದಿನ ಎಂದು ಘೋಷಿಸಿತು. ಅದರೊಂದಿಗೆ, ಭಾರತಕ್ಕಷ್ಟೇ ಸೀಮಿತವಾಗಿದ್ದ, ಕೆಲವು ಆಸಕ್ತ ವಿದೇಶಿಗರಷ್ಟೇ ಮಾಡುತ್ತಿದ್ದ ಯೋಗವನ್ನು ಪ್ರಪಂಚದಾದ್ಯಂತ ಸಾಮೂಹಿಕವಾಗಿ ಅಭ್ಯಸಿಸುವಂತಾಯಿತು. ಜೂನ್ 21 ನ್ನೇ ಏಕೆ ಆಯ್ಕೆ ಮಾಡಲಾಗಿದೆ ಎಂದರೆ ಇಡೀ ವರ್ಷದಲ್ಲಿ ಜೂನ್ 21ರಂದು ಭೂಮಿಯ ಉತ್ತರ ಭಾಗದಲ್ಲಿ ಅಧಿಕ ದಿನ ಇರುತ್ತದೆ.
ಅಂದರೆ ಅಂದು ಉತ್ತರ ಭಾಗದಲ್ಲಿ ಹಗಲು ದೀರ್ಘಾವಧಿಯಾಗಿರುತ್ತದೆ. ದಕ್ಷಿಣದಲ್ಲಿ ಹಗಲಿನ ಅವಧಿ ಕಡಿಮೆ ಇರುತ್ತದೆ. ಅಂದು ಸೂರ್ಯ ತನ್ನ ಪಥವನ್ನು ದಕ್ಷಿಣದತ್ತ ಬದಲಿಸುತ್ತಾನೆ. ಅಂದು ಸಾಮಾನ್ಯವಾಗಿ ಹುಣ್ಣಿಮೆಯಾಗಿದ್ದು, ಗುರುಪೂರ್ಣಿಮ ದಿನವಾಗಿರುತ್ತದೆ. ಇದು ಯೋಗ ಮಾಡಲು ಅಥವಾ ಆರಂಭಿಸಲು ಸೂಕ್ತ ದಿನವಾಗಿದೆ. ಹೀಗೆಂದು ಮೋದಿ (Modi) ತಮ್ಮ ಭಾಷಣದಲ್ಲಿ ಹೇಳಿದ್ದರು. ಅದನ್ನೂ ವಿಶ್ವಸಂಸ್ಥೆ ಮಾನ್ಯ ಮಾಡಿದೆ. ಬೇಸಿಗೆ ಆಯನ ಸಂಕ್ರಾತಿಯ ಬಳಿಕ ಮೊದಲ ಹುಣ್ಣಿಮೆಯನ್ನು ಗುರು ಪೂರ್ಣಿಮೆ ಎಂದು ಕರೆಯಲಾಗುತ್ತದೆ. ಹಾಗಾಗಿ ಈ ದಿನವನ್ನು ಯೋಗ ದಿನವನ್ನಾಗಿ ಆಚರಿಸಲಾಗುತ್ತದೆ.