ಐಪಿಎಲ್ 14ನೇ ಸೀಸನ್ ಆರಂಭಕ್ಕೆ ಕ್ಷಣಗಣನೆ: ಉದ್ಘಾಟನಾ ಪಂದ್ಯದಲ್ಲಿ ಬೆಂಗಳೂರು vs ಮುಂಬೈ ನಡುವೆ ಕಾದಾಟ

ಬೆಂಗಳೂರು, ಏ. 08: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಎಂಬ ಖ್ಯಾತಿ ಪಡೆದಿರುವ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 14ನೇ ಸೀಸನ್‌ ಆರಂಭಕ್ಕೆ ಕ್ಷಣಗಣನೆ ಶುರುವಾಗಿದ್ದು, ಚುಟುಕು ಕ್ರಿಕೆಟ್ ಕಲರವ ವೀಕ್ಷಿಸಲು ಕೋಟ್ಯಾಂತರ ಕ್ರಿಕೆಟ್ ಪ್ರೇಮಿಗಳು ತುದಿಗಾಲಲ್ಲಿ ನಿಂತಿದ್ದಾರೆ.

ಪ್ರತಿ ಬಾರಿಯಂತೆ ಈ ಬಾರಿ ಕೂಡ ಒಟ್ಟು 8 ತಂಡಗಳು ಟೂರ್ನಿಯಲ್ಲಿ ಮುಖಾಮುಖಿ ಆಗಿದ್ದು, ಏ.9ರಂದು ಶುಕ್ರವಾರ ನಡೆಯಲಿರುವ ಈ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸೆಣೆಸಾಡಲಿವೆ.

ಚೆನ್ನೈನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ. ಶುಕ್ರವಾರ ರಾತ್ರಿ 7: 30ಕ್ಕೆ ನಡೆಯುವ ಐಪಿಎಲ್ ಮೊದಲ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಮತ್ತು ಉಭಯ ತಂಡಗಳು ಭರ್ಜರಿ ಸಿದ್ಧತೆ ಮಾಡಿಕೊಂಡಿವೆ.

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸಿದರೆ. ಹಿಟ್ ಮ್ಯಾನ್ ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಲಿದ್ದಾರೆ. ಈಗಾಗಲೇ ಐದು ಬಾರಿ ಪ್ರಶಸ್ತಿ ಗೆದ್ದು, ಐಪಿಎಲ್ ಟೂರ್ನಿಯ ಅತ್ಯಂತ ಬಲಿಷ್ಠ ತಂಡ ಎನಿಸಿದೆ. ಇನ್ನೂ ಕಳೆದ 13 ಸೀಸನ್‌ಗಳಲ್ಲಿ ಪ್ರಶಸ್ತಿ ಗೆಲ್ಲುವಲ್ಲಿ ವೈಫಲ್ಯ ಕಂಡಿರುವ ಆರ್ಸಿಬಿ, ಈ ಬಾರಿ ಪ್ರಶಸ್ತಿ ಗೆದ್ದು ಚೊಚ್ಚಲ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಳ್ಳುವ ನಿರೀಕ್ಷೆಯಲ್ಲಿದೆ.

Exit mobile version