Belagavi: ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ (Schedule Caste) ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ (Journalism) ಪದವೀಧರರಿಗೆ ಬೆಳಗಾವಿಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಮಾನ್ಯತೆ ಹೊಂದಿರುವ ಯಾವುದೇ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪಡೆದಿರುವ ಕನ್ನಡ ಭಾಷೆ (Kannada Language) ಬಳಸಲು ಪ್ರಬುದ್ಧತೆ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿರುವ 35 ವರ್ಷದೊಳಗಿನ ಅಭ್ಯರ್ಥಿಗಳು ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿಯ ವೇಳೆ ಮಾಸಿಕ 15,000 ರೂ.ಗಳ ಸ್ಟೈಫಂಡ್ (Stay Fund) ನೀಡಲಾಗುವುದು. ಈ ತರಬೇತಿಯು 12 ತಿಂಗಳ ಅಪ್ರೆಂಟಿಸ್ ತರಬೇತಿಯಾಗಿರುತ್ತದೆ.
ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಅರ್ಜಿ ಸಲ್ಲಿಸಲು ಡಿಸೆಂಬರ್ 6, 2023 ಕೊನೆಯ ದಿನವಾಗಿದೆ. ಇನ್ನು ಅಪ್ರೆಂಟಿಸ್ ತರಬೇತಿಗಾಗಿ (Apprentice Training) ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ಸಮಯದಲ್ಲಿ ಮೂಲ ಶೈಕ್ಷಣಿಕ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಜಿಲ್ಲಾ ವಾರ್ತಾಧಿಕಾರಿಗಳಿಗೆ ಸಲ್ಲಿಸಬೇಕಾಗುತ್ತದೆ.

ಈಗಾಗಲೇ ಒಂದು ಬಾರಿ ಅಪ್ರೆಂಟಿಸ್ ತರಬೇತಿ ಪಡೆದಿರುವ ಅಭ್ಯರ್ಥಿಗಳು ಇದೇ ಯೋಜನೆಯಡಿ ಮತ್ತೊಂದು ಅವಧಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಸುಳ್ಳು ಮತ್ತು ನಕಲಿ ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅಂತಹ ಅಭ್ಯರ್ಥಿಗಳ ವಿರುದ್ಧ ಕಾನೂನು ಪ್ರಕಾರ ಕ್ರಿಮಿನಲ್ (Criminal) ಮೊಕದ್ದಮೆ ಹೂಡಲಾಗುವುದು. ಈ ಮೇಲ್ಕಂಡ ಷರತ್ತುಗಳನ್ನು ಪಾಲಿಸುವುದಾಗಿ ಆಯ್ಕೆಯಾದ ಅಭ್ಯರ್ಥಿಗಳು 20 ರೂಪಾಯಿಗಳ ಛಾಪಾ ಕಾಗದದಲ್ಲಿ ಮೇಲೆ ಲಿಖಿತ ಹೇಳಿಕೆ ನೀಡಬೇಕು.
ಇನ್ನು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, “ವಾರ್ತಾಭವನ”, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೆಳಗಾವಿ ಅಥವಾ ಮೊಬೈಲ್ ಸಂಖ್ಯೆ 9448589639 ಸಂಪರ್ಕಿಸಬಹುದು ಎಂದು ಬೆಳಗಾವಿ ವಾರ್ತಾ ಇಲಾಖೆಯ ಉಪ ನಿರ್ದೇಶಕರಾದ ಗುರುನಾಥ ಕಡಬೂರ (Gurunath Kadabur) ಅವರು ತಿಳಿಸಿದ್ದಾರೆ.