ರವಿ ಡಿ. ಚನ್ನಣ್ಣನವರ್‌ ಸಹಿತ 9 IPS ಅಧಿಕಾರಿಗಳ ವರ್ಗಾವಣೆ

ravi d channannavar

ಬೆಂಗಳೂರು ಜ 27 : ಕೆಲವು ದಿನಗಳಿಂದ ವಿವಾದದ ಕೇಂದ್ರಬಿಂದುವಾಗಿದ್ದ IPS ಅಧಿಕಾರಿ ರವಿ ಡಿ ಚನ್ನಣ್ಣನವರ್‌ ಸೇರಿದಂತೆ 9 ಮಂದಿ‌ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರವಿ ಡಿ ಚನ್ನಣ್ಣನವರ್‌ ಅವರನ್ನು ಸಿಐಡಿ ಎಸ್​​ಪಿ ಹುದ್ದೆಯಿಂದ ಕರ್ನಾಟಕ ಮಹರ್ಷಿ ವಾಲ್ಮೀಕಿ ಶಡ್ಯೂಲ್ ಟ್ರೈಬ್ ಡೆವಲಪ್ಮೆಂಟ್ ಕಾರ್ಪೊರೇಷನ್ ಎಂಡಿ ಆಗಿ ನೇಮಿಸಲಾಗಿದೆ. ಸಿಐಡಿ ಎಸ್​ಪಿಯಾಗಿದ್ದ ಐಪಿಎಸ್ ಅಧಿಕಾರಿ ಭೀಮಾಶಂಕರ ಗುಳೇದ್ ಅವರನ್ನು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಅಬ್ದುಲ್ ಅಹ್ಮದ್ ಅವರನ್ನು ಎಸಿಬಿ ಎಸ್​ಪಿಯಿಂದ ಕೆಎಸ್​ಆರ್​​ಟಿಸಿ ನಿರ್ದೇಶಕರ ಸ್ಥಾನಕ್ಕೆ ವರ್ಗಾಯಿಸಲಾಗಿದೆ.

IPS Officers Transferred

ಹಾಗೆ ಟಿ ಶ್ರೀಧರ್ ಅವರನ್ನು ಕೊಪ್ಪಳ ಎಸ್​ಪಿ ಹುದ್ದೆಯಿಂದ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಸ್​ಪಿ ಸ್ಥಾನಕ್ಕೆ ವರ್ಗಾಯಿಸಲಾಗಿದೆ. ಟಿ.ಪಿ ಶಿವಕುಮಾರ್ ಅವರನ್ನು ಬಂಧೀಖಾನೆ ಎಸ್​ಪಿಯಿಂದ ಚಾಮರಾಜನಗರ ಎಸ್​ಪಿಯಾಗಿ, ದಿವ್ಯಸಾರ ಥಾಮಸ್ ಅವರನ್ನು ಚಾಮರಾಜನಗರ ಎಸ್​ಪಿಯಿಂದ ಕರ್ನಾಟಕ ಪೊಲೀಸ್ ಅಕಾಡೆಮಿ ಉಪ ನಿರ್ದೇಶಕರಾಗಿ, ಡೆಕ್ಕಾ ಕಿಶೋರ್ ಬಾಬು ಅವರನ್ನು ಬೀದರ್ ಎಸ್​ಪಿ ಆಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಅರುಣಾಂಗ್ಯು ಗಿರಿ ಅವರನ್ನು ಎಸಿಬಿ ಎಸ್ಪಿಯಿಂದ ಕೊಪ್ಪಳ ಎಸ್ ಪಿ ಆಗಿ ವರ್ಗಾವಣೆ ಮಾಡಲಾಗಿದೆ. ಡಿ.ಎಲ್. ನಾಗೇಶ್ ಅವರನ್ನು ಬೀದರ್ ಎಸ್​ಪಿಯಿಂದ ಸಿಐಡಿ ಎಸ್​ಪಿ ಆಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Exit mobile version