download app

FOLLOW US ON >

Tuesday, August 9, 2022
Breaking News
ಸಿದ್ದರಾಮಯ್ಯ-ಖರ್ಗೆಗೆ ಅಂಬೇಡ್ಕರ್ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ : ನಟ ಚೇತನ್ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ನಾಯಕರೆಂದರೆ ನಕಲಿ ಗಾಂಧಿ ಕುಟುಂಬದ ಸದಸ್ಯರು ಮಾತ್ರ  : ಬಿಜೆಪಿನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್
English English Kannada Kannada

ಯಡಿಯೂರಪ್ಪ ಅವರೇ ರಾಜ್ಯದಲ್ಲಿ ನಿಮ್ಮ ಸರ್ಕಾರ ಅಸ್ತಿತ್ವದಲ್ಲಿದೆಯೇ?ಸಿದ್ದರಾಮಯ್ಯ

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸಿಡಿ ಹಗರಣದ ಯುವತಿ ತನಗೆ ಪ್ರಾಣ ಭಯ ಇದೆ ಎಂದು ರಾಜ್ಯದ ಹೈಕೋರ್ಟ್ ಮುಖ್ಯನ್ಯಾಯಾಧೀಶರಿಗೆ ಬರೆದಿದ್ದಾರೆನ್ನಲಾದ ಪತ್ರ ಗಾಬರಿ ಹುಟ್ಟಿಸುವಂತಿದೆ.

ಬೆಂಗಳೂರು, ಮಾ. 29: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ರಾಜ್ಯದಲ್ಲಿ ನಿಮ್ಮ ಸರ್ಕಾರ ಅಸ್ತಿತ್ವದಲ್ಲಿದೆಯೇ ಎಂದು ಪ್ರಶ್ನಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸಿಡಿ ಹಗರಣದ ಯುವತಿ ತನಗೆ ಪ್ರಾಣ ಭಯ ಇದೆ ಎಂದು ರಾಜ್ಯದ ಹೈಕೋರ್ಟ್ ಮುಖ್ಯನ್ಯಾಯಾಧೀಶರಿಗೆ ಬರೆದಿದ್ದಾರೆನ್ನಲಾದ ಪತ್ರ ಗಾಬರಿ ಹುಟ್ಟಿಸುವಂತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ರಾಜ್ಯದಲ್ಲಿ ನಿಮ್ಮ ಸರ್ಕಾರ ಅಸ್ತಿತ್ವದಲ್ಲಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಸಂತ್ರಸ್ಥ ಯುವತಿ ಪ್ರಾರಂಭದ ಆಡಿಯೋದಲ್ಲಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದೆ ಎಂದು ಹೇಳಿದ್ದಳು, ಈಗ ತನಗೆ ಪ್ರಾಣಭಯ ಇದೆ ಎಂದು ಪತ್ರ ಬರೆದಿದ್ದಾಳೆ. ಆ ಯುವತಿಯ ಪ್ರಾಣಕ್ಕೇನಾದರೂ ಅಪಾಯ ಎದುರಾದರೆ ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ, ಗೃಹಸಚಿವ ಬಸವರಾಜ ಬೊಮ್ಮಾಯಿ ಮತ್ತು ಇಡೀ ರಾಜ್ಯ ಸರ್ಕಾರವೇ ಹೊಣೆಯಾಗುತ್ತದೆ.

ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಸಂತ್ರಸ್ಥೆ ಯುವತಿ ಬರೆದ ಪತ್ರದಲ್ಲಿ SIT ಮೇಲೆಯೇ ಅಪನಂಬಿಕೆ ವ್ಯಕ್ತಪಡಿಸಿರುವುದು ಮಾತ್ರವಲ್ಲ, ಅವರು ಸಾಕ್ಷ್ಯನಾಶ ಮಾಡುತ್ತಿದ್ದಾರೆ, ತನ್ನ ವಿರೋಧಿಗಳ ಜೊತೆ ಷಾಮೀಲಾಗಿದ್ದಾರೆ ಎಂದೆಲ್ಲ ಆರೋಪಿಸಿರುವುದು ಗಂಭೀರವಾದ ವಿಷಯ.

ಸಂತ್ರಸ್ಥ ಯುವತಿ ನಿರಂತರವಾಗಿ ವಿಡಿಯೋ, ಪತ್ರಗಳನ್ನು ಬಿಡುಗಡೆ ಮಾಡುತ್ತಿದ್ದರೆ, ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ ಮತ್ತು ಪೊಲೀಸರು ನಿರಂತರವಾಗಿ ಸಭೆ ನಡೆಸುತ್ತಿದ್ದಾರೆ. ಫಲಿತಾಂಶ ಏನು? ಎಂದು ಪ್ರಶ್ನಿಸಿದ್ದಾರೆ.

ಸಿಡಿ ಬಹಿರಂಗಗೊಂಡು 27 ದಿನಗಳು ಕಳೆದರೂ ಹಗರಣದ ಕೇಂದ್ರವ್ಯಕ್ತಿಯಾದ ಸಂತ್ರಸ್ತ ಯುವತಿಯ ವಿಚಾರಣೆ ನಡೆಸಲು ಸಾಧ್ಯವಾಗದ ಪೊಲೀಸರ ವೈಫಲ್ಯಕ್ಕೆ ಯಾರು ಹೊಣೆ ರಾಜ್ಯ ಸರ್ಕಾರ? ಅವರ ಮೇಲೆ ಪ್ರಭಾವ ಬೀರುತ್ತಿರುವವರು ಯಾರು?
ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕುಸಿದು ಬಿದ್ದಿರುವುದಕ್ಕೆ ಬೇರೆ ಸಾಕ್ಷಿ ಬೇಕೇ? ಎಂದು ಪ್ರಶ್ನೆ ಮಾಡಿದ್ದಾರೆ

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article