Visit Channel

ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಪುತ್ರಿ ಮನೆ ಮೇಲೆ ಐಟಿ ದಾಳಿ

4444

ಚೆನ್ನೈ, ಏ,03 : ತಮಿಳುನಾಡಿನಲ್ಲಿ ವಿಧಾನ ಸಭೆ ಸಮೀಪಿಸುತ್ತಿರುವ ಬೆನ್ನಲ್ಲೇ, ಡಿಎಂಕೆ (ದ್ರಾವಿಡ ಮುನ್ನೇತ್ರ ಕಳಗಂ) ಪಕ್ಷದ ಮುಖ್ಯಸ್ಥ ಎಂ.ಕೆ.ಸ್ಟಾಲಿನ್​ ಅವರ ಮಗಳು ಸೆಂಥಮರೈ, ಅಳಿಯ ಶಬರೀಶನ್​ ಅವರ ಚೆನ್ನೈನ ಮನೆ ಸೇರಿ, ದಂಪತಿಗೆ ಸೇರಿದ ಒಟ್ಟು4 ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ. ಈ ಐಟಿ ದಾಳಿಯಿಂದ ಕೋಪಗೊಂಡಿರುವ ಡಿಎಂಕೆ ಪಕ್ಷವೀಗ ಚುನಾವಣಾ ಆಯೋಗದ ಮೊರೆ ಹೋಗಿದೆ. ಹೀಗೆ ಚುನಾವನಾ ಕೆಲವೇ ದಿನ ಇರುವಾಗ ದಾಳಿ ನಡೆಸುವುದು, ಚುನಾವಣಾ ಕಾನೂನುಗಳ ಉಲ್ಲಂಘನೆ ಎಂದು ಆರೋಪಿಸಿ, ಆದಾಯ ತೆರಿಗೆ ಇಲಾಖೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಚುನಾವಣೆ ಸಮೀಪಿಸುತ್ತಿರುವ ವೇಳೆಯಲ್ಲಿ ಕೆಲವೆಡೆ ಹಣ ಹಂಚಿಕೆ ಮಾಡಲಾಗುತ್ತಿದೆ ಎಂದ ಮಾಹಿತಿ ಆಧಾರದ ಮೇಲೆ ತಮಿಳುನಾಡಿನ ವಿವಿಧೆಡೆ ದಾಳಿ ನಡೆಸಿದ್ದಾಗಿ ನೇರ ತೆರಿಗೆಗಳ ಕೇಂದ್ರ ಮಂಡಳಿ ಹೇಳಿದೆ. ಇನ್ನು ದಾಳಿಯ ವೇಳೆ, ತೆರಿಗೆ ವಂಚನೆಗೆ ಸಂಬಂಧಪಟ್ಟ ಹಲವು ವಿಚಾರಗಳು ಗೊತ್ತಾಗಿವೆ ಎಂಬ ಮಾಹಿತಿ ಇದೆ.

ಶುಕ್ರವಾರ ಬೆಳಗ್ಗೆಯಿಂದ ಐಟಿ ಅಧಿಕಾರಿಗಳು ತಮಿಳುನಾಡಿನಲ್ಲಿ ಶೋಧ ಕಾರ್ಯ ಪ್ರಾರಂಭ ಮಾಡಿದರು. ಸ್ಟಾಲಿನ್ ಪುತ್ರಿ-ಅಳಿಯ, ಡಿಎಂಕೆಯ ಕರೂರ್ ಅಭ್ಯರ್ಥಿ ಮತ್ತು ಮಾಜಿ ಸಚಿವ ಸೆಂಥಿಲ್​ ಬಾಲಾಜಿಯವರಿಗೆ ಸಂಬಂಧಪಟ್ಟ ಸ್ಥಳಗಳು, ಎಸ್​ಎನ್​ಜೆ ಡಿಸ್ಟಿಲರಿ ಕಚೇರಿಗಳ ಮೇಲೆ ಐಟಿ ದಾಳಿ ನಡೆಸಿತ್ತು. ಈ ಬಗ್ಗೆ ಟ್ವೀಟ್​ ಮೂಲಕ ಪ್ರತಿಕ್ರಿಯೆ ನೀಡಿರುವ ಡಿಎಂಕೆ ನಾಯಕ ಸ್ಟಾಲಿನ್​, ಬಿಜೆಪಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಚುನಾವಣೆಯಲ್ಲಿ ಹೇಗೂ ಗೆಲ್ಲಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಪ್ರತಿಪಕ್ಷಗಳ ಮೇಲೆ ಹೀಗೆ ಐಟಿ ದಾಳಿ ಮಾಡಿಸುತ್ತಿದೆ. ನಾವು ಇಲ್ಲಿ AIADMK ಪಕ್ಷದ ಗುಲಾಮರಲ್ಲ. ಇಂಥ ಬೆದರಿಕೆಗಳಿಗೆಲ್ಲ ಅವರ ಕಾಲಬುಡಕ್ಕೆ ಹೋಗಿ ಬೀಳುವುದಿಲ್ಲ. ನಮಗೆ ಯಾರ ಭಯವೂ ಇಲ್ಲ. ಧೈರ್ಯವಾಗಿ ಎಲ್ಲವನ್ನೂ ಎದುರಿಸುತ್ತೇವೆ ಎಂದು ಹೇಳಿದ್ದಾರೆ.

Latest News

Russia
ದೇಶ-ವಿದೇಶ

ಜನಸಂಖ್ಯೆ ಹೆಚ್ಚಳಕ್ಕೆ 10 ಮಕ್ಕಳಿಗೆ ಜನ್ಮ ನೀಡಿದ್ರೆ 13 ಲಕ್ಷ ಬಹುಮಾನ : ರಷ್ಯಾ ಅಧ್ಯಕ್ಷ ಪುಟಿನ್‌ ಘೋಷಣೆ

ರಷ್ಯಾದ ರಾಜಕೀಯ(Russia Politics) ಮತ್ತು ಭದ್ರತಾ ತಜ್ಞ ಡಾ ಜೆನ್ನಿ ಮ್ಯಾಥರ್ಸ್, ಟೈಮ್ಸ್ ರೇಡಿಯೊದಲ್ಲಿ ಈ ಕುರಿತು ಮಾತನಾಡಿ, “ಮದರ್ ಹೀರೋಯಿನ್” ಎಂದು ಕರೆಯಲ್ಪಡುವ ಬಹುಮಾನ ಯೋಜನೆ

Dakshina Kannada
ರಾಜ್ಯ

ವಿಜಯಟೈಮ್ಸ್ ಇಂಪ್ಯಾಕ್ಟ್ ; ಬಂಟ್ವಾಳ ಸೇತುವೆಯ ದುಸ್ಥಿತಿ ನೋಡಲು ದಿಢೀರನೇ ಬಂದ ಅಧಿಕಾರಿಗಳು!

ಕಳಪೆ ಕಾಮಗಾರಿ ದುರಂತದ ಬಗ್ಗೆ ವಿಜಯಟೈಮ್ಸ್ ತಂಡ ಮಾಡಿದ್ದ ವರದಿಗೆ ಅಧಿಕಾರಿಗಳು ಈಗ ದಿಢೀರ್ ಎಚ್ಚೆತ್ತುಕೊಂಡಿದ್ದಾರೆ.

IT Minister
ದೇಶ-ವಿದೇಶ

5G ಬಿಡುಗಡೆಗೆ ತಯಾರಿ ಮಾಡಿಕೊಳ್ಳಿ : ಟೆಲಿಕಾಂ ಕಂಪನಿಗಳಿಗೆ ಐಟಿ ಸಚಿವ ಅಶ್ವಿನಿ ವೈಷ್ಣವ್ ಸೂಚನೆ

ಇನ್ನು ಏರ್ಟೆಲ್(Airtel) ಮತ್ತು ಜಿಯೋ(Jio) ಈ ತಿಂಗಳ ಕೊನೆಯಲ್ಲಿ ತಮ್ಮ 5G ಸೇವೆಗಳ ಮೊದಲ ಹಂತವನ್ನು ಬಿಡುಗಡೆಗೊಳಿಸುವ ನಿರೀಕ್ಷೆಯಿದೆ.