• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಲಾಕ್ ಡೌನ್ ನೆಪದಲ್ಲಿ ಜನರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸುವುದು ಸರಿಯಲ್ಲ: ಟಿ.ಎ.‌ ನಾರಾಯಣಗೌಡ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಲಾಕ್ ಡೌನ್ ನೆಪದಲ್ಲಿ ಜನರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸುವುದು ಸರಿಯಲ್ಲ: ಟಿ.ಎ.‌ ನಾರಾಯಣಗೌಡ
0
SHARES
0
VIEWS
Share on FacebookShare on Twitter

ಬೆಂಗಳೂರು, ಮೇ. 11: ಲಾಕ್ ಡೌನ್ ನೆಪದಲ್ಲಿ ಜನರ ಮೇಲೆ ಲಾಠಿ ಪ್ರಹಾರ ನಡೆಸುವ ಪೊಲೀಸರ ನಡೆಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.‌ನಾರಾಯಣಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಲಾಕ್ ಡೌನ್ ನಿಯಮ ಉಲ್ಲಂಘಿಸಿದರೆಂಬ ಕಾರಣಕ್ಕೆ ಜನಸಾಮಾನ್ಯರ ಮೇಲೆ ನಿರ್ದಯವಾಗಿ ಲಾಠಿ ಬೀಸುವುದನ್ನು ಪೊಲೀಸ್ ಇಲಾಖೆ ಕೂಡಲೇ ಕೈಬಿಡಬೇಕು. ಹೀಗೆ ಜನರನ್ನು ಥಳಿಸುವ ಯಾವ ಅಧಿಕಾರವೂ ಪೊಲೀಸರಿಗಿಲ್ಲ. ಸರ್ಕಾರ ಕೂಡಲೇ ಇದಕ್ಕೆ ಕಡಿವಾಣ ಹಾಕಬೇಕು. ಜನರು ಈಗಾಗಲೇ ಕೋವಿಡ್ ಸಂಕಷ್ಟಗಳಿಂದ ನರಳುತ್ತಿದ್ದಾರೆ. ಗಾಯದ ಮೇಲೆ ಬರೆ ಎಳೆದಂತೆ ಲಾಕ್ ಡೌನ್ ಕೂಡ ಬಂದಿದೆ. ಇದರ ಪರಿಣಾಮ ಬಡ, ಮಧ್ಯಮ ವರ್ಗದ ಜನರ ಮೇಲಾಗುತ್ತಿದೆ. ಈ ಜನರೇ ಇಂದು ಬೀದಿಯಲ್ಲಿ ಪೊಲೀಸರ ದೌರ್ಜನ್ಯಗಳಿಗೆ ಗುರಿಯಾಗುತ್ತಿದ್ದಾರೆ.

ದಕ್ಷಿಣದ ಇತರ ರಾಜ್ಯಗಳು ಲಾಕ್ ಡೌನ್ ಜತೆಗೇ ಆರ್ಥಿಕವಾಗಿ ದುರ್ಬಲವಾಗಿರುವ ಜನರಿಗಾಗಿ ಹಲವು ಯೋಜನೆ ಜಾರಿಗೆ ತಂದಿವೆ. ಆದರೆ ಕರ್ನಾಟಕ ಸರ್ಕಾರ ಇಂಥ ಯಾವುದೇ ಕ್ರಮ ಕೈಗೊಂಡಿಲ್ಲ. ಬಡವರ ಪಾಲಿಗೆ ಕೆಲಸವೂ ಇಲ್ಲ, ಆರೋಗ್ಯವೂ ಇಲ್ಲ, ಆಹಾರವೂ ಇಲ್ಲ ಎಂಬಂಥ ಸ್ಥಿತಿ ನಿರ್ಮಾಣವಾಗಿದೆ.

ಕೋವಿಡ್ ಎರಡನೇ ಅಲೆ ನಿರೀಕ್ಷಿತವಾಗಿದ್ದರೂ ಸರ್ಕಾರ ಯಾವುದೇ ಮುಂಜಾಗ್ರತೆ ವಹಿಸದೆ ಇಷ್ಟು ದೊಡ್ಡ ಅನಾಹುತಗಳಿಗೆ ಕಾರಣವಾಗಿದೆ. ತನ್ನ ಹೊಣೆಯನ್ನು ಹೊರಲಾಗದೆ, ಎಲ್ಲ ಭಾರವನ್ನು ಜನರ ಮೇಲೇ ಹೊರೆಸುವುದು ಎಷ್ಟು ಸರಿ? ಇನ್ನಾದರೂ ಸರ್ಕಾರ ತನ್ನ ಜವಾಬ್ದಾರಿ ಅರಿತು ಕ್ರಿಯಾಶೀಲವಾಗಬೇಕು.

ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ಆಸ್ಪತ್ರೆ ಹಾಸಿಗೆ ಇಲ್ಲದೆ, ಆಮ್ಲಜನಕ ಇಲ್ಲದೆ, ಚಿಕಿತ್ಸೆ ಇಲ್ಲದೆ ಅಸುನೀಗುತ್ತಿರುವ ಜನರ ರಕ್ಷಣೆಗೆ ನಿಲ್ಲಬೇಕು. ಇದಕ್ಕಾಗಿ ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು. ಎಲ್ಲ ಜನರಿಗೂ ತ್ವರಿತವಾಗಿ ಮೂರು ತಿಂಗಳೊಳಗೆ ಉಚಿತ ವ್ಯಾಕ್ಸಿನ್ ನೀಡಬೇಕು. ಜನರ ಜೀವ ರಕ್ಷಣೆಯೇ ಈಗ ಸರ್ಕಾರದ ಆದ್ಯ ಕರ್ತವ್ಯವಾಗಬೇಕು ಎಂದು ಒತ್ತಾಯಿಸಿದ್ದಾರೆ.

ಲಾಕ್ ಡೌನ್ ನಿಯಮ ಉಲ್ಲಂಘಿಸಿದರೆಂಬ ಕಾರಣಕ್ಕೆ ಜನಸಾಮಾನ್ಯರ ಮೇಲೆ ನಿರ್ದಯವಾಗಿ ಲಾಠಿ ಬೀಸುವುದನ್ನು ಪೊಲೀಸ್ ಇಲಾಖೆ ಕೂಡಲೇ ಕೈಬಿಡಬೇಕು. ಹೀಗೆ ಜನರನ್ನು ಥಳಿಸುವ ಯಾವ ಅಧಿಕಾರವೂ ಪೊಲೀಸರಿಗಿಲ್ಲ. ಸರ್ಕಾರ ಕೂಡಲೇ ಇದಕ್ಕೆ ಕಡಿವಾಣ ಹಾಕಬೇಕು. (1/5)

— ನಾರಾಯಣಗೌಡ್ರು.ಟಿ.ಎ | ‌Narayanagowdru T.A. (@narayanagowdru) May 10, 2021

Related News

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023
ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್
Vijaya Time

ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್

May 29, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023
ಇಂದು ಐಪಿಎಲ್ 2023 ರ ಚೆನ್ನೈ Vsಗುಜರಾತ್ ಫೈನಲ್ ಪಂದ್ಯ : ಯಾರಿಗೆ ಒಲಿಯಲಿದೆ ಕಪ್‌?
Sports

ಇಂದು ಐಪಿಎಲ್ 2023 ರ ಚೆನ್ನೈ Vsಗುಜರಾತ್ ಫೈನಲ್ ಪಂದ್ಯ : ಯಾರಿಗೆ ಒಲಿಯಲಿದೆ ಕಪ್‌?

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.