ಬೆಂಗಳೂರಿನ ಖಾಲಿ ಫ್ಲಾಟ್​ ಒಂದರಲ್ಲಿದ್ದ ಮಂಚದಡಿ ಕಂತೆ ಕಂತೆ ಹಣದ ಬಾಕ್ಸ್: ಐಟಿ ದಾಳಿವೇಳೆ ಪತ್ತೆ

Bengaluru: ಆರ್​ಟಿ ನಗರದ (R T Nagar) ಎರಡು ಸ್ಥಳಗಳ ಮೇಲೆ ಐಟಿ ದಾಳಿ ನಡೆದಿದ್ದು, ಕೋಟ್ಯಂತರ (IT Raid on Blore Flat) ರೂಪಾಯಿ ನಗದನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು

ಸಂಜೆ ನಂತರ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. ಆತ್ಮಾನಂದ ಕಾಲೋನಿಯ (Atmanandha Colony) ಫ್ಲಾಟ್ ಒಂದರ ಕೊಠಡಿಯಲ್ಲಿದ್ದ ಮಂಚದಡಿ ಬಚ್ಚಿಟ್ಟಿದ್ದ ಕಂತೆ ಕಂತೆ ನೋಟುಗಳು ಸಿಕ್ಕಿದೆ.

ಐಟಿ ಅಧಿಕಾರಿಗಳು ಕಂತೆ ಕಂತೆ ನೋಟುಗಳನ್ನು ಸಂಜೆ ನಂತರ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದು, ಈ ಫ್ಲಾಟ್​ನಲ್ಲಿ (Flat) ಬರೊಬ್ಬರಿ 23 ಬಾಕ್ಸ್​ಗಳಲ್ಲಿ 500 ಮುಖಬೆಲೆಯ ಕಂತೆ ಕಂತೆ

ನೋಟುಗಳು ಪತ್ತೆಯಾಗಿವೆ. ನಿನ್ನೆ ಸಂಜೆ 6 ಗಂಟೆ ಸಮಯಕ್ಕೆ ಸರಿಯಾಗಿ ಕಾರಿನಲ್ಲಿ ಹಣ ಸಾಗಾಟ ಮಾಡಲು ತಯಾರಾಗಿತ್ತು ಎಂದು ತಿಳಿದಿದ್ದು, ಪೊಲೀಸ್ ಸಿಬ್ಬಂದಿಗಳ ಭದ್ರತೆಯಲ್ಲಿ ಐಟಿ ಅಧಿಕಾರಿಗಳು

ಏಕಕಾಲದಲ್ಲಿ ಆರ್​ಟಿ ನಗರದ ಎರಡು ಸ್ಥಳಗಳ ಮೇಲೆ (IT Raid on Blore Flat) ದಾಳಿ ಮಾಡಿದ್ದಾರೆ.

ಆತ್ಮಾನಂದ ಕಾಲೋನಿಯಲ್ಲಿರುವ ಒಂದು ಫ್ಲಾಟ್​ನ ಕೊಠಡಿಯೊಂದರ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಮಂಚದಡಿ ಪರಿಶೀಲನೆ ನಡೆಸಿದಾಗ ಕೋಟ್ಯಂತರ ರೂಪಾಯಿ ಪತ್ತೆಯಾಗಿದ್ದು, ಪತ್ತೆಯಾದ

ಹಣದ ಒಟ್ಟಾರೆ ಮೊತ್ತ ಎಣಿಕೆ ಮಾಡಿದ ಐಟಿ (IT) ಅಧಿಕಾರಿಗಳು, ಬಳಿಕ ಮಾಜಿ ಕಾರ್ಪೋರೇಟರ್​ (Corporater) ಮನೆಗೆ ತೆರಳಿದ್ದಾರೆ.

ಸದ್ಯಕ್ಕೆ ಫ್ಲಾಟ್​ನಲ್ಲಿ ಪತ್ತೆಯಾದ ಕೋಟ್ಯಂತರ ರೂಪಾಯಿ ಯಾರಿಗೆ ಸೇರಿದ್ದು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಅಸಲಿಗೆ ಹಣ ಪತ್ತೆಯಾದ ಫ್ಲ್ಯಾಟ್ ಯಾರದ್ದು ಎಂದು ಗುಟ್ಟು ಬಿಡದ ಐಟಿ

ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ. ಗಣೇಶ ಬ್ಲಾಕ್​ನಲ್ಲಿರುವ ವಾರ್ಡ್ ನಂ 95ರ ಮಾಜಿ ಕಾರ್ಪೊರೇಟರ್ ಅಶ್ವತಮ್ಮ (Ashwatamma) ಹಾಗೂ ಆರ್.ಅಂಬಿಕಾಪತಿ ದಂಪತಿಗಳ

ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿ ವಿಚಾರಣೆ ನಡೆಸುತ್ತಿದ್ದಾರೆ.

ಕಂತೆ ಕಂತೆ ನೋಟುಗಳು
ಐಟಿ ಅಧಿಕಾರಿಗಳು, ಈ ಫ್ಲಾಟ್​ನ ಬೆಡ್ ರೂಮ್​ವೊಂದರ (Bed Room) ಮಂಚದ ಅಡಿಯಲ್ಲಿ ಹಣ ಬಚ್ಚಿಟ್ಟ ಬಗ್ಗೆ ತನಿಖೆ ನಡೆಸುತ್ತಿದ್ದು, ಈ ರೂಮ್​ ಅನ್ನು ಬಳಸುತ್ತಾ ಇರಲಿಲ್ಲ, ಬೀಗ ಹಾಕಲಾಗಿತ್ತು ಎಂಬ

ಮಾಹಿತಿ ಲಭ್ಯವಾಗಿದೆ.

ಕಾಂಟ್ರಾಕ್ಟರ್ (Contractor) ಆಗಿರುವ ಆರ್.ಅಂಬಿಕಾಪತಿ ಕೆಂಪಣ್ಣ ಅವರ ಕಾಂಟ್ರಾಕ್ಟರ್ ಸಂಘದಲ್ಲಿ ಗುರುತಿಸಿಕೊಂಡಿದ್ದರು. ಫ್ಲಾಟ್​ನಲ್ಲಿ ಸಿಕ್ಕ ಹಣದ ಹಿಂದೆ ಐಟಿಗೆ ದೊಡ್ಡ ಅನುಮಾನ ವ್ಯಕ್ತವಾಗಿದೆ.

ಹಣ ಒಂದೇ ಕಡೆ ಸಂಗ್ರಹಣೆ ಹಿಂದಿದೆಯಾ ಚುನಾವಣೆ ತಯಾರಿ? ಪಂಚರಾಜ್ಯಗಳ ಚುನಾವಣೆಗಾಗಿ ಸಂಗ್ರಹಿಸಲಾಗಿತ್ತೇ ಈ ಹಣ ಎಂಬ ಅನುಮಾನ ಕಾಡಿದೆ.

ಈ ಅಂಬಿಕಾಪತಿಯ ಪತ್ನಿ ಅಶ್ವತಮ್ಮ ಅವರು ಕಾಂಗ್ರೆಸ್​ನ (Congress) ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಅಕ್ಕ. ಇವರು 2001ರ ಕಾವಲ್ ಬೈರಸಂದ್ರ (Kaval Bhairasandra)

ವಾರ್ಡ್​ನ ಕಾರ್ಪೊರೇಟರ್ ಆಗಿದ್ದರು.

ಇದನ್ನು ಓದಿ: ಬೆಂಗಳೂರು ವಿವಿ ದೂರ ಶಿಕ್ಷಣ ಪ್ರವೇಶಾತಿಗೆ ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ

Exit mobile version