ಬೆಂಗಳೂರಿನಲ್ಲಿ ಹಲವೆಡೆ ಐಟಿ ದಾಳಿ

ಬೆಂಗಳೂರು ಅ 7 : ಗುರುವಾರ ಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಂಗಳೂರು ನಗರ ಸೇರಿ 50ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಉದ್ಯಮಿಗಳು ಮತ್ತು ಗುತ್ತಿಗೆದಾರರ ಮನೆಗಳು ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ತಂಡೋಪಾದಿಯಲ್ಲಿ ದಾಳಿಗಳನ್ನು ನಡೆಸಿದ್ದಾರೆ. ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದು, 300ಕ್ಕೂ ಹೆಚ್ಚು ಆದಾಯ ತೆರಿಗೆ ಅಧಿಕಾರಿಗಳು 120 ವಾಹನಗಳಲ್ಲಿ ಆಗಮಿಸಿ ದಾಳಿ ನಡೆಸುತ್ತಿದ್ದಾರೆ

 ಚಾರ್ಟೆಡ್ ಅಕೌಂಟೆಂಟ್ ಅಮಲಾ ಮನೆ ಮೇಲೆ ದಾಳಿ ಆಗಿದೆ.ನೀರಾವರಿ ಇಲಾಖೆ ಚಾರ್ಟೆಡ್ ಅಕೌಂಟೆಂಟ್ ನ ಹೆಗಡೆ ನಗರದ ಎನ್ ಆರ್ ರಾಯಲ್ ಅಪಾರ್ಟ್ ಮೆಂಟ್ ಮೇಲೆ ದಾಳಿ ಮಾಡಲಾಗಿದೆ.ಸುಮಾರು 10ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ಶೋಧ ಕಾರ್ಯ ನಡೆಯುತ್ತಿದೆ..

ಕೊಡಿಗೇಹಳ್ಳಿ ಸಹಕಾರ ನಗರದಲ್ಲಿರುವ ರಾಹುಲ್ ಎಂಟರ್‌ ಪ್ರೈಸಸ್ ಮೇಲೆ ಐಟಿ ದಾಳಿ ನಡೆದಿದೆ. ರಾಹುಲ್ ಎಂಟರ್‌ಪ್ರೈಸಸ್
ಸಿಮೆಂಟ್, ಸ್ಟೀಲ್ ಡೀಲರ್ ಕಚೇರಿಯಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ಹಾಗೂ ಗೋವಾ ವಲಯದ ಐಟಿ ಅಧಿಕಾರಿಗಳ ಮನೆಗಳ ಮೇಲೆ ಈ ದಾಳಿಯನ್ನು ನಡೆಸಲಾಗಿದೆ. ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ದೊಡ್ಡ ಐಟಿ ದಾಳಿ ಇದಾಗಿದೆ. ಅಧಿಕಾರಿಗಳು ಮುಂಜಾನೆಯಿಂದಲೇ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಸರಕಾರಕ್ಕೆ ತೆರಿಗೆ ವಂಚನೆಯನ್ನು ಮಾಡಿದ ಆರೋಪದ ಹಿನ್ನೆಲೆಯಲ್ಲಿ ಈ ದಾಳಿಯನ್ನು ನಡೆಸಲಾಗಿದೆ ಎಂಬು ಅಧಿಕಾರಿಗಳು ತಿಳಿಸಿದ್ದಾರೆ.

Exit mobile version