ಮತದಾರರ ಪಟ್ಟಿ ಪರಿಷ್ಕರಣೆಯೂ KGF ಸೇಡಿನ ಕಥೆಯೂ ಅಲ್ಲ, ಗುಳಿಗ-ಪಂಜುರ್ಲಿಯ ದಂತ ಕಥೆಯೂ ಅಲ್ಲ : ಸಿದ್ದರಾಮಯ್ಯ

Bengaluru : ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್(Its Not Kantara) ಚಿತ್ರದ ರಾಕಿಭಾಯ್ ನ ಸೇಡಿನ ಕತೆಯೂ ಅಲ್ಲ,

ಕಾಂತಾರ(Its Not Kantara) ಚಿತ್ರದ ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ, ಅದನ್ನೇ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಟೀಕಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌(Tweet) ಮಾಡಿರುವ ಅವರು, ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಚಿಲುಮೆ ಸಂಸ್ಥೆಗೆ ನೀಡಿರುವ ಅನುಮತಿಯನ್ನು ರದ್ದು ಪಡಿಸಿದ್ದೀರಿ ಸರಿ, ಆದರೆ ಆ ಸಂಸ್ಥೆ ಅಕ್ರಮವಾಗಿ ಸಂಗ್ರಹಿಸಿರುವ ಮಾಹಿತಿ ಏನಾಯಿತು? ಆ ಸಂಸ್ಥೆ ಬಿಬಿಎಂಪಿಗೆ ಸಲ್ಲಿಸಿದೆಯಾ? ಇಲ್ಲವೇ ಯಾವುದಾದರೂ ರಾಜಕೀಯ ಪಕ್ಷಕ್ಕೆ ಮಾರಿದೆಯಾ?

ಸಮಾಜ ಸೇವೆಗೆ ಬೇಕಾದಷ್ಟು ಅವಕಾಶ ಇರುವಾಗ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಉಚಿತವಾಗಿ ಮಾಡುತ್ತೇವೆ ಎಂದು ಸಂಸ್ಥೆ ಅರ್ಜಿ ನೀಡಿದಾಗಲೇ ಅದರ ಹಿಂದಿನ ದುರುದ್ದೇಶದ ಅರಿವು ಬಿಬಿಎಂಪಿಗೆ(BBMP) ಆಗಬೇಕಿತ್ತು. ಆಗಿಲ್ಲ ಎಂದರೆ ಬಿಬಿಎಂಪಿ ಹಗರಣದದಲ್ಲಿ ಭಾಗಿಯಾಗಿದೆ ಎಂದು ಅರ್ಥ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.

https://fb.watch/gTbIAkIsD_/ COVER STORY

ದೂರು ಬಂದ ಕಾರಣಕ್ಕೆ ಚಿಲುಮೆಗೆ ನೀಡಿರುವ ಅನುಮತಿಯನ್ನು ಬಿಬಿಎಂಪಿ ರದ್ದು ಪಡಿಸಿರುವುದನ್ನು ಸ್ವಾಗತಿಸುತ್ತೇನೆ. ಮಾಡಿರುವ ಅಪರಾಧಕ್ಕೆ ಅನುಮತಿ ರದ್ದತಿ ಶಿಕ್ಷೆ ಅಲ್ಲವಲ್ಲಾ? ಗುತ್ತಿಗೆಯನ್ನು ರದ್ದುಗೊಳಿಸುವ ಮೂಲಕ ಆಗಿರುವ ಅಪರಾಧವನ್ನು ಇಲಾಖೆಯೇ ಒಪ್ಪಿಕೊಂಡಂತಾಗಿಲ್ಲವೇ?

ಇದನ್ನೂ ಓದಿ : https://vijayatimes.com/dangerous-aluminium-foil/

ಉಚಿತವಾಗಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿರುವ ಚಿಲುಮೆ ಸಂಸ್ಥೆಯ ಹಿನ್ನೆಲೆ ಏನು? ಅದರ ಮಾಲೀಕರು ಯಾರು? ಹಣಕಾಸು ಸಾಮರ್ಥ್ಯ ಏನು? ಉದ್ಯೋಗಿಗಳ ಸಂಖ್ಯೆ ಎಷ್ಟು? ಅದರ ಹಣಕಾಸಿನ ಮೂಲ ಯಾವುದು? ಈ ಬಗ್ಗೆ ತನಿಖೆಯಾಗಲಿ. ಮುಖ್ಯಮಂತ್ರಿ ಬೊಮ್ಮಾಯಿ ಅವರು ತಮ್ಮನ್ನು ರಕ್ಷಿಸಿಕೊಳ್ಳಲು ಆಪರೇಷನ್ ವೋಟರ್ ಹಗರಣವನ್ನು ಜಾತಿಗಣತಿಗೆ ಹೋಲಿಸಿದ್ದಾರೆ.

ಒಂದು ಸಂಸ್ಥೆಯ ಹಿನ್ನೆಲೆಯನ್ನೂ ಪರಿಶೀಲಿಸದೆ ಮತದಾರರ ಪಟ್ಟಿ ಪರಿಷ್ಕರಣೆಗೆ ನೀಡಿರುವ ಅನುಮತಿಗೂ, ಸುಪ್ರೀಂಕೋರ್ಟ್(Supremecourt) ಆದೇಶದಂತೆ ರಾಜ್ಯ ಸರ್ಕಾರ ನಡೆಸಿರುವ ಜಾತಿಗಣತಿಗೂ ಏನು ಸ್ವಾಮಿ ಸಂಬಂಧ? ಎಂದು ಪ್ರಶ್ನಿಸಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆಯ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬೊಮ್ಮಾಯಿ ಅವರ ವಿರುದ್ಧವೇ ನಾವು ದೂರು ನೀಡಿದ್ದೆವು. ಮುಖ್ಯಮಂತ್ರಿಗಳು 20,000 ರೂಪಾಯಿ ಸಂಬಳದ ಬಡಪಾಯಿ ಏಜೆಂಟನನ್ನು ಬಲಿಪಶು ಮಾಡಿ ತಾವು ಪಾರಾಗುವ ಸಂಚು ನಡೆಸಿದ್ದಾರೆ.

https://youtu.be/2uFll2Xlcoc COVER STORY | ಭರ್ಜರಿ ಆಯಿಲ್ ಮಾಫಿಯಾ !

ಆಪರೇಷನ್ ವೋಟರ್ ಹಗರಣವನ್ನು ಹಾಸ್ಯಾಸ್ಪದ ಎಂದು ತಳ್ಳಿಹಾಕಿರುವ ಮುಖ್ಯಮಂತ್ರಿ ಬೊಮ್ಮಾಯಿ, ಈ ಹಗರಣದ ರೂವಾರಿಗಳನ್ನು ರಕ್ಷಿಸಲು, ಸಂಸ್ಥೆಯ ಒಬ್ಬ ಏಜೆಂಟನ ವಿರುದ್ಧ ಪೊಲೀಸರಿಂದ ಎಫ್ಐಆರ್(FIR) ಹಾಕಿಸಿ ತಮ್ಮ ಸರ್ಕಾರದ ಕೆಲಸ ಎಷ್ಟು ಹಾಸ್ಯಾಸ್ಪದ ಎನ್ನುವುದನ್ನು ಸಾಬೀತುಪಡಿಸಿದ್ದಾರೆ ಎಂದು ಟೀಕಿಸಿದ್ದಾರೆ.

Exit mobile version