• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಆರೋಗ್ಯ

ಸುಡು ಬಿಸಿಲಿಗೆ ರಾಜ್ಯ ಸಜ್ಜಾಗಬೇಕಾದ ಸಮಯ: ಹವಾಮಾನ ತಜ್ಞರಿಂದ ಮುನ್ನೆಚ್ಚರಿಕೆ

Teju Srinivas by Teju Srinivas
in ಆರೋಗ್ಯ, ಮಾಹಿತಿ, ರಾಜ್ಯ, ವಿಜಯ ಟೈಮ್ಸ್‌
ಸುಡು ಬಿಸಿಲಿಗೆ ರಾಜ್ಯ ಸಜ್ಜಾಗಬೇಕಾದ ಸಮಯ: ಹವಾಮಾನ ತಜ್ಞರಿಂದ ಮುನ್ನೆಚ್ಚರಿಕೆ
0
SHARES
28
VIEWS
Share on FacebookShare on Twitter
  • ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತಾಪಮಾನ ಸರಾಸರಿಗಿಂತ 1–3 ಡಿಗ್ರಿ(It’s time for the state to prepare for scorching heat) ಹೆಚ್ಚಾಗುವ ಸಾಧ್ಯತೆ
  • ಫೆಬ್ರವರಿ ಅಂತ್ಯದಿಂದಲೇ ತೀವ್ರ ಬಿಸಿಲು; ಜನಜೀವನ ಹಾಗೂ ನೀರಿನ ಲಭ್ಯತೆಯ ಮೇಲೆ ಪರಿಣಾಮ ಸಾಧ್ಯತೆ
  • ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸರಾಸರಿಗಿಂತ ಹೆಚ್ಚು ಉಷ್ಣಾಂಶ ದಾಖಲೆ; ಹವಾಮಾನ ಇಲಾಖೆ ವರದಿ

Bengaluru: ಈ ವರ್ಷದ ಬೇಸಿಗೆ ಕರ್ನಾಟಕದ ಜನತೆಗೆ ಸವಾಲಾಗುವ ಸಾಧ್ಯತೆ ಇದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉಷ್ಣಾಂಶವು ವಾಡಿಕೆಯ ಸರಾಸರಿಗಿಂತ 1ರಿಂದ 3 ಡಿಗ್ರಿ ಸೆಲ್ಸಿಯಸ್‌ವರೆಗೆ (1 to 3 degrees Celsius)ಹೆಚ್ಚಾಗಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

ಈಗಾಗಲೇ ಚಳಿಗಾಲದ ತಂಪು ಕಡಿಮೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ (It’s time for the state to prepare for scorching heat) ಬೇಸಿಗೆಯ ಆರಂಭದ ತಾಪಮಾನ ಅನುಭವವಾಗುತ್ತಿದೆ.

ಜನರು ದಿನನಿತ್ಯದ ಚಟುವಟಿಕೆಗಳಲ್ಲಿ ಹೆಚ್ಚುವರಿ ಎಚ್ಚರಿಕೆ ವಹಿಸಬೇಕಾದ ಪರಿಸ್ಥಿತಿ ಎದುರಾಗಲಿದೆ ಎಂಬ ಎಚ್ಚರಿಕೆಯನ್ನು ತಜ್ಞರು ನೀಡಿದ್ದಾರೆ.

It's time for the state to prepare for scorching heat:

ವಿಶೇಷವಾಗಿ ಮಕ್ಕಳು, ವೃದ್ಧರು ಹಾಗೂ ಹೊರಾಂಗಣ ಕೆಲಸ ಮಾಡುವವರು ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಬೇಕು ಎಂದು ಸಲಹೆ ನೀಡಲಾಗಿದೆ.

ಈ ವರ್ಷ ‘ಲಾ ನೀನಾ’(‘La Nina’) ಪರಿಣಾಮ ದುರ್ಬಲಗೊಳ್ಳುತ್ತಿರುವುದು ಬಿಸಿಲಿನ ತೀವ್ರತೆಗೆ ಪ್ರಮುಖ ಕಾರಣವೆಂದು ತಜ್ಞರು ವಿವರಿಸಿದ್ದಾರೆ.

ಸಾಮಾನ್ಯವಾಗಿ ಲಾ ನೀನಾ ಪರಿಣಾಮದಿಂದ ಮಳೆ ಹಾಗೂ ತಂಪು ವಾತಾವರಣ ಕಂಡುಬರುತ್ತದೆ.

ಆದರೆ ಈ ಬಾರಿ ಅದರ ಪ್ರಭಾವ ಕಡಿಮೆಯಾಗುತ್ತಿರುವುದರಿಂದ ಮಳೆಯ ಪ್ರಮಾಣ ಕುಸಿಯುವ ಜೊತೆಗೆ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇದೆ.

ಇದರ ಪರಿಣಾಮವಾಗಿ ಬೇಸಿಗೆಯ ತಾಪಮಾನ ಏರಿಕೆ ಆಗಲಿದೆ.

ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ಮೊದಲ ವಾರದ ವೇಳೆಗೆ ಬಿಸಿಲಿನ ತೀವ್ರತೆ ಎಷ್ಟು ಮಟ್ಟಿಗೆ ಹೆಚ್ಚಾಗುತ್ತದೆ ಎಂಬುದರ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ

ಎಂದು ಹವಾಮಾನ ತಜ್ಞ ಶ್ರೀನಿವಾಸ ರೆಡ್ಡಿ (Srinivasa Reddy)ತಿಳಿಸಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳ ಪ್ರಸ್ತುತ ಹವಾಮಾನ ಸ್ಥಿತಿಯನ್ನು ಗಮನಿಸಿದರೆ ಬೇಸಿಗೆಯ ತೀವ್ರತೆ ಈಗಾಗಲೇ ಗೋಚರವಾಗುತ್ತಿದೆ.

ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಈ ಬಿಸಿಲಿನ ಪ್ರಭಾವ ಹೆಚ್ಚು ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಕಾರಣ, ಈ ಪ್ರದೇಶಗಳಲ್ಲಿ ಸಾಮಾನ್ಯವಾಗಿಯೇ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ (40 degrees Celsius)ದಾಟುತ್ತದೆ.

ಅದರಲ್ಲಿ ಇನ್ನೂ ಒಂದೆರಡು ಡಿಗ್ರಿ ಹೆಚ್ಚಾದರೆ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ.

ಕೃಷಿ, ಪಶುಸಂಗೋಪನೆ ಮತ್ತು ದಿನಗೂಲಿ ಕಾರ್ಮಿಕರ ಬದುಕು ಬಿಸಿಲಿನ ಹೊಡೆತಕ್ಕೆ ಹೆಚ್ಚು ಒಳಗಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ.

ಕೇಂದ್ರ ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ಇತ್ತೀಚಿನ ವರದಿಯ ಪ್ರಕಾರ, ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವಾಮಾನ ವಾತಾವರಣ ಕಂಡುಬಂದಿದೆ.

ಕರಾವಳಿ ಜಿಲ್ಲೆಗಳಲ್ಲಿ ತಾಪಮಾನ ಸರಾಸರಿಗಿಂತ 1.6 ರಿಂದ 3 ಡಿಗ್ರಿ ಸೆಲ್ಸಿಯಸ್‌ವರೆಗೆ (1.6 to 3 degrees Celsius)ಹೆಚ್ಚಾಗಿದ್ದರೆ,

ಉತ್ತರ ಒಳನಾಡಿನ ಕೆಲ ಪ್ರದೇಶಗಳಲ್ಲಿ 3.1 ರಿಂದ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆ ದಾಖಲಾಗಿದೆ.

ಬಳ್ಳಾರಿಯಲ್ಲಿ ಗರಿಷ್ಠ 33.8 ಡಿಗ್ರಿ(33.8 degrees) ಕಲಬುರಗಿಯಲ್ಲಿ 33 ಡಿಗ್ರಿ, ಮಂಗಳೂರಿನಲ್ಲಿ 32.9 ಡಿಗ್ರಿ, ಕಾರವಾರ ಮತ್ತು ಗೋಕರ್ಣದಲ್ಲಿ 32.6 ಡಿಗ್ರಿ,

ಚಿತ್ರದುರ್ಗದಲ್ಲಿ 31.5 ಡಿಗ್ರಿ ಹಾಗೂ ಬೆಂಗಳೂರಿನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಈ ಅಂಕಿ ಅಂಶಗಳು ಮುಂದಿನ ದಿನಗಳಲ್ಲಿ ತಾಪಮಾನ ಇನ್ನಷ್ಟು ಏರಬಹುದು ಎಂಬ ಸೂಚನೆ ನೀಡುತ್ತಿವೆ.

ನೀರಿನ ಲಭ್ಯತೆಯ ವಿಷಯದಲ್ಲಿಯೂ ಕೆಲವು ಆತಂಕಗಳು ವ್ಯಕ್ತವಾಗಿವೆ.

ಈ ಬಾರಿ ವಾಡಿಕೆಯಿಗಿಂತ ಹೆಚ್ಚು ಮಳೆಯಾಗಿರುವುದರಿಂದ ತುಂಗಭದ್ರಾ ಜಲಾಶಯ ಹೊರತುಪಡಿಸಿ ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರಿನ ಪ್ರಮಾಣ ಸಮರ್ಪಕವಾಗಿದೆ.
ಹೀಗಾಗಿ ಜಲಾಶಯ ಆಧಾರಿತ ಪ್ರದೇಶಗಳಲ್ಲಿ ತೀವ್ರ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಕಡಿಮೆ.

ಆದರೆ (Borewell)ನೀರಿನ ಮೇಲೆ ಅವಲಂಬಿತ ಪ್ರದೇಶಗಳಲ್ಲಿ ತಾಪಮಾನ ಹೆಚ್ಚಳದಿಂದ ನೀರಿನ ಮಟ್ಟ ಕುಸಿಯುವ ಸಾಧ್ಯತೆ ಇದೆ.

ಇದರಿಂದ ಕುಡಿಯುವ ನೀರು ಹಾಗೂ ಕೃಷಿಗೆ ತೊಂದರೆ ಎದುರಾಗಬಹುದು ಎಂದು ತಜ್ಞರು ತಿಳಿಸಿದ್ದಾರೆ.

ಆದ್ದರಿಂದ ಸಾರ್ವಜನಿಕರು ನೀರಿನ ಬಳಕೆಯಲ್ಲಿ ಮಿತವ್ಯಯ ಪಾಲಿಸಬೇಕು ಹಾಗೂ ಸರ್ಕಾರವೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.

ಇದನ್ನು ಓದಿhttps://vijayatimes.com/state-government-bans-inpatient-treatment-by-govt-doctors/

Tags: high temperaturePrecautionary measuresWater ScarcityWeather Alert

Related News

ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ

September 12, 2026
80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!
ಪ್ರಮುಖ ಸುದ್ದಿ

80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!

September 12, 2026
ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ
ಪ್ರಮುಖ ಸುದ್ದಿ

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ

September 12, 2026
ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ
ಪ್ರಮುಖ ಸುದ್ದಿ

ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ

September 11, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.