Visit Channel

ಇತ್ತೀಚೆಗೆ ಸಚಿವ ಸಂಪುಟ‌ ಸೇರಿದ್ದ 7 ಮಂದಿ ನೂತನ ಸಚಿವರಿಗೆ ಖಾತೆ ಹಂಚಿಕೆ

new-minister-800x445

ಬೆಂಗಳೂರು, ಜ. 21: ಇತ್ತೀಚೆಗಷ್ಟೇ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ 7 ಮಂದಿ ನೂತನ ಸಚಿವರಿಗೆ ಖಾತೆ ಹಂಚಿಕೆಗೆ ಮಾಡಲಾಗಿದ್ದು, ಜತೆಗೆ ಹಲವು ಸಚಿವರ ಖಾತೆ ಬದಲಾವಣೆ ಮಾಡಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ನೇತೃತ್ವದ ಸಂಪುಟ ವಿಸ್ತರಣೆಯಲ್ಲಿ 7 ಶಾಸಕರು ನೂತನ ಸಚಿವರಾಗಿ ಸಂಪುಟ ಸೇರಿದ್ದರು. ಎಸ್. ಅಂಗಾರ, ಸಿ.ಪಿ. ಯೋಗೇಶ್ವರ್, ಎಂ.ಟಿ.ಬಿ. ನಾಗರಾಜ್, ಆರ್.ಶಂಕರ್, ಅರವಿಂದ ಲಿಂಬಾವಳಿ, ಮುರುಗೇಶ ನಿರಾಣಿ, ಉಮೇಶ್ ಕತ್ತಿ ಸೇರಿ 7 ಮಂದಿ ನೂತನ ಸಚಿವರಾಗಿದ್ದಾರೆ.

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಹಾಲಿ ಇರುವ ಕನಿಷ್ಠ 10 ಖಾತೆಗಳು ಬದಲಾವಣೆ ಮಾಡಲಾಗಿದೆ. ಸಿಎಂ ಬಿಎಸ್ ವೈ ಈಗಾಗಲೇ ಖಾತೆ ಪಟ್ಟಿಯನ್ನ ರಾಜಭವನಕ್ಕೆ ಕಳುಹಿಸಿದ್ದಾರೆ ಎನ್ನಲಾಗಿದೆ.

ಯಾವ ಸಚಿವರಿಗೆ ಯಾವ ಖಾತೆ? 
ಬಸವರಾಜ ಬೊಮ್ಮಾಯಿ- ಗೃಹ, ಕಾನೂನು, ಸಂಸದೀಯ ವ್ಯವಹಾರ

ಜೆ.ಸಿ. ಮಾಧುಸ್ವಾಮಿ – ವೈದ್ಯಕೀಯ ಶಿಕ್ಷಣ.

ಕನ್ನಡ-ಸಂಸ್ಕೃತಿ ಇಲಾಖೆ

ಸಿ.ಸಿ. ಪಾಟೀಲ್- ಸಣ್ಣ ಕೈಗಾರಿಕೆ, ವಾರ್ತಾ ಇಲಾಖೆ

ಎಸ್ ಅಂಗಾರ- ಮೀನುಗಾರಿಕೆ, ಬಂದರು

ಕೋಟಾ ಶ್ರೀನಿವಾಸ ಪೂಜಾರಿ-ಮುಜರಾಯಿ,

ಹಿಂದುಳಿದ ವರ್ಗಗಳ ಕಲ್ಯಾಣ

ಉಮೇಶ್ ಕತ್ತಿ -ಆಹಾರ, ನಾಗರಿಕ ಪೂರೈಕೆ ಇಲಾಖೆ

ಅರವಿಂದ ಲಿಂಬಾವಳಿ-ಅರಣ್ಯ

ಮುರುಗೇಶ್ ನಿರಾಣಿ- ಗಣಿ, ಭೂ ವಿಜ್ಞಾನ

ಎಂಟಿಬಿ ನಾಗರಾಜ್- ಅಬಕಾರಿ

ಡಾ.ಕೆ. ಸುಧಾಕರ್-ಆರೋಗ್ಯ

ಆನಂದ್ ಸಿಂಗ್ – ಪ್ರವಾಸೋದ್ಯಮ, ಪರಿಸರ ಇಲಾಖೆ

ಸಿ.ಪಿ. ಯೋಗೇಶ್ವರ್ -ಸಣ್ಣ ನೀರಾವರಿ

ಆರ್. ಶಂಕರ್-ಪೌರಾಡಳಿ ಹಾಗೂ ರೇಷ್ಮೆ ಇಲಾಖೆ

ಗೋಪಾಲಯ್ಯ-ತೋಟಗಾರಿಕೆ, ಸಕ್ಕರೆ

ಕೆ.ಸಿ. ನಾರಾಯಣ ಗೌಡ- ಯುವ ಸಬಲೀಕರಣ, ಕ್ರೀಡೆ, ಹಜ್ ಮತ್ತು ವಕ್ಫ್ ಖಾತೆ ನೀಡಲಾಗಿದೆ ಎನ್ನಲಾಗುತ್ತಿದೆ.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.