New Delhi: ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವ ಹಿನ್ನೆಲೆ, ರಾಜ್ಯ ರಾಜಕಾರಣದಲ್ಲಿ ಮಹತ್ವದ (Jagadish Shettar Returns to BJP) ಬೆಳವಣಿಗೆಯೊಂದು ನಡೆದಿದೆ.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಅವರು ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಬಿಜೆಪಿಗೆ (BJP) ಸೇರ್ಪಡೆಯಾಗಲು
ಒಪ್ಪಿಗೆ ಸೂಚಿಸಿದ್ದಾರೆ (Jagadish Shettar Returns to BJP) ಎಂದು ತಿಳಿದುಬಂದಿದೆ.
ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದ್ದು, ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ (Congress) ಸೇರ್ಪಡೆಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು
ಮತ್ತೆ ಬಿಜೆಪಿ ಸೇರ್ಪಡೆಯಾಗಲು ನಿರ್ಧರಿಸಿದ್ದು, ದೆಹಲಿಯಲ್ಲಿ ಇಂದು ಅಮಿತ್ ಶಾ (Amit Shah) ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಿಜೆಪಿ ಸೇರ್ಪಡೆಯಾಗುವುದು ಖಚಿತವಾಗಿದೆ.
ಇಂದು ಅಮಿತ್ ಶಾ ಅವರನ್ನು ಭೇಟಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (B S Yadiyurappa), ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಜಗದೀಶ್ ಶೆಟ್ಟರ್ ಅವರು
ದೆಹಲಿಯಲ್ಲಿನ ಅವರ ನಿವಾಸದಲ್ಲಿ ಮಾತುಕತೆ ನಡೆಸಿದ್ದು, ಮಾತುಕತೆ ವೇಳೆ ಶೆಟ್ಟರ್ ಮನವೋಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದು, ಪಕ್ಷಕ್ಕೆ ಮರಳಲು ಶೆಟ್ಟರ್ ಒಪ್ಪಿಗೆ ಸೂಚಿಸಿದ್ದಾರೆ.
ಶೆಟ್ಟರ್ ಅವರ ಬಿಜೆಪಿ ಸೇರ್ಪಡೆ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎಂದು ಬಿಜೆಪಿ ಉನ್ನತ ಮೂಲಗಳಿಂದ ತಿಳಿದುಬಂದಿದೆ. ಅಮಿತ್ ಶಾ ಜೊತೆ ಮಾತುಕತೆ ನಡೆಸಿದ ನಂತರ ಯಡಿಯೂರಪ್ಪ
ಮತ್ತು ವಿಜಯೇಂದ್ರ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (J P Nadda) ಅವರನ್ನು ಭೇಟಿಯಾಗಿದ್ದಾರೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ಜೆ.ಪಿ.ನಡ್ಡಾರನ್ನು ಭೇಟಿಯಾಗಿ ಚರ್ಚೆ ನಡೆಸುತ್ತಿದ್ದಾರೆ.
ಕಾಂಗ್ರೆಸ್ಗೆ ಜಗದೀಶ್ ಶೆಟ್ಟರ್ ವಿದಾಯ:
ಇಂದೇ ಜಗದೀಶ್ ಶೆಟ್ಟರ್ ಅವರು, ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದ್ದು, ನಾಯಕರೊಂದಿಗಿನ ಮಾತುಕತೆ ನಂತರ ದೆಹಲಿಯಲ್ಲೇ (Delhi) ವರಿಷ್ಠರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗುವ
ಸಾಧ್ಯತೆ ಇದೆ. ಅಲ್ಲದೆ, ದೆಹಲಿಯಿಂದಲೇ ಫ್ಯಾಕ್ಸ್ ಮೂಲಕ ಕಾಂಗ್ರೆಸ್ಗೆ ಗುಡ್ಬೈ ಹೇಳಲಿದ್ದು, ನಂತರ ಬೆಂಗಳೂರಿಗೆ (Bengaluru) ಬಂದು ಖುದ್ದಾಗಿ ರಾಜೀನಾಮೆ ನೀಡುವ ಸಾಧ್ಯತೆ ಇದೆ.
ಇದನ್ನು ಓದಿ: ಲೋಕಸಭಾ ಚುನಾವಣೆಗೆ ರೆಡಿಯಾಗುತ್ತಿರುವ ಡಿಕೆಶಿ: ಅದೃಷ್ಟದ ಬಂಗಲೆಗೆ ಗೃಹ ಕಚೇರಿ ಶಿಫ್ಟ್
- ಭವ್ಯಶ್ರೀ ಆರ್ ಜೆ