Bengaluru : ಮಾಜಿ ಸಿಎಂ, ಮಾಜಿ ಬಿಜೆಪಿ ಶಾಸಕ ಜಗದೀಶ್ ಶೆಟ್ಟರ್ (Jagdish Shettar) ಅವರು ಬಿಜೆಪಿ ತೊರೆದು ಕಾಂಗ್ರೆಸ್ (Congress) ಸೇರಲಿದ್ದಾರೆ ಎಂಬ ಭಾರಿ ವದಂತಿಗಳ ನಡುವೆಯೇ ಇದೀಗ ಅಧಿಕೃತವಾಗಿ (Jagdish shettar joined Congress) ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಕರ್ನಾಟಕ ಬಿಜೆಪಿ ಪಕ್ಷವನ್ನು ನಾನು ಕಟ್ಟಿದೆ. ಆದರೆ ಅವಮಾನ ಅನುಭವಿಸಿದೆ ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagdish Shettar)
ಅವರು ಇಂದು ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರುವ ವೇಳೆ ಹೇಳಿದ್ದಾರೆ.
ಬಿಜೆಪಿಗೆ ರಾಜೀನಾಮೆ ನೀಡಿದ ಬಳಿಕ ಭಾನುವಾರ ಕಾಂಗ್ರೆಸ್ ಮುಖಂಡರ ಜತೆ ಸಭೆ ನಡೆಸಿದ ಜಗದೀಶ್ ಶೆಟ್ಟರ್ ಅವರು,
ಮುಂಬರುವ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷದಿಂದ ಟಿಕೆಟ್ ವಂಚಿತರಾದ ಬೆನ್ನಲ್ಲೇ ಪಕ್ಷದ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದು,
ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿ, ಸೋಮವಾರ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಮುಖಂಡರಾದ ರಣದೀಪ್ ಸುರ್ಜೇವಾಲಾ (Randeep Surjewala) ,
ಹಿರಿಯ ನಾಯಕ ಸಿದ್ದರಾಮಯ್ಯ (Siddaramaiah) ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ತನ್ನ ನಡೆಯ ಬಗ್ಗೆ ಮಾತನಾಡಿದ ಜಗದೀಶ್ ಶೆಟ್ಟರ್, ಕರ್ನಾಟಕ ಬಿಜೆಪಿಯನ್ನು ಕಟ್ಟಿದೆ ಆದರೆ ಅವಮಾನ ಅನುಭವಿಸಿದೆ. ನಾನು ಕರ್ನಾಟಕ ಬಿಜೆಪಿಯನ್ನು (BJP) ಕಟ್ಟಿದ್ದೇನೆ.
ಆದರೆ ಅವರು ನನ್ನನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿಯಿಂದ ನನ್ನಂತಹ ಹಿರಿಯ ನಾಯಕರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ.
ನಾನು ಯಾವಾಗಲೂ ಬಿಜೆಪಿಗೆ ದಾಖಲೆಯ ಅಂತರದಿಂದ ಗೆದ್ದಿದ್ದೇನೆ ಮತ್ತು ಪ್ರತಿ ಹುದ್ದೆಯಲ್ಲೂ ಉತ್ತಮ ಪ್ರದರ್ಶನ ನೀಡಿದ್ದೇನೆ.
ಆದರೆ ನನ್ನ ಮನಸ್ಸನ್ನು (Jagdish shettar joined Congress) ನೋಯಿಸಲು ಸಾಧ್ಯವಿಲ್ಲ.
ಇನ್ನಾದರೂ ಗೌರವಿಸಿ ಎಂದು ಶೆಟ್ಟರ್ ಕಾಂಗ್ರೆಸ್ (Congress) ಸೇರಿದ ನಂತರ ಹೇಳಿದ್ದಾರೆ. ಟಿಕೆಟ್ ಕೈತಪ್ಪಿ,
ನನ್ನಂತಹ ಹಿರಿಯ ನಾಯಕರನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂದು ಶೆಟ್ಟರ್ ಬಿಜೆಪಿಯನ್ನು ಗುರಿಯಾಗಿಸಿ ತಮ್ಮ ಹೇಳಿಕೆಯನ್ನು ಬಹಿರಂಗಪಡಿಸಿದ್ದಾರೆ.
ಟಿಕೆಟ್ (Ticket) ಕೈತಪ್ಪಿದ ಬಗ್ಗೆ ಕೇಸರಿ ಪಕ್ಷದ ಮೇಲೆ ತೀವ್ರ ವಾಗ್ದಾಳಿ ನಡೆಸಿದ ಜಗದೀಶ್ ಶೆಟ್ಟರ್, ಹುಬ್ಬಳ್ಳಿ-ಧಾರವಾಡದಲ್ಲಿ (Hubali-Dharwad) 7ನೇ ಬಾರಿ ಗೆಲುವು ಸಾಧಿಸುತ್ತೇನೆ,
ಬಿಜೆಪಿಗೆ ದಾಖಲೆಯ ಅಂತರದಲ್ಲಿ ಗೆಲುವು ಸಾಧಿಸಿದ್ದೇನೆ, ಪ್ರತಿ ಹುದ್ದೆಯಲ್ಲೂ ಉತ್ತಮ ಪ್ರದರ್ಶನ ನೀಡಿದ್ದೇನೆ ಎಂಬುದನ್ನು ಒತ್ತಿ ಹೇಳಿದರು.

ನಾನು ಪೂರ್ಣ ಹೃದಯದಿಂದ ಕಾಂಗ್ರೆಸ್ ಸೇರುತ್ತಿದ್ದೇನೆ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ರಣದೀಪ್ ಸುರ್ಜೇವಾಲಾ, ಎಂ.ಬಿ.ಪಾಟೀಲ್ (M.B.Patil) ಸೇರಿದಂತೆ ಕಾಂಗ್ರೆಸ್ ನಾಯಕರು ನನ್ನನ್ನು ಸಂಪರ್ಕಿಸಿದ್ದಾರೆ.
ಅವರು ನನ್ನನ್ನು ಆಹ್ವಾನಿಸಿದಾಗ, ನಾನು ಯಾವುದೇ ಆಲೋಚನೆಯಿಲ್ಲದೆ ಬಂದಿದ್ದೇನೆ ಎಂದು ಜಗದೀಶ್ ಶೆಟ್ಟರ್ ಹೇಳಿದರು.
ಜಗದೀಶ್ ಶೆಟ್ಟರ್, ನಿನ್ನೆ ಬಿಜೆಪಿ ತೊರೆದು ಇಂದು ಕಾಂಗ್ರೆಸ್(Congress) ಪಕ್ಷ ಸೇರಿದ ಹಿನ್ನೆಲೆ ಪ್ರತಿಪಕ್ಷದ ನಾಯಕ,
ಮಾಜಿ ಸಿಎಂ ಹಾಗೂ ಪಕ್ಷದ ಅಧ್ಯಕ್ಷರು ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಸೇರಿದ್ದನ್ನು ಕಂಡು
ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಶೆಟ್ಟರ್ ಅವರ ಸೇರ್ಪಡೆ ಹಲವು ಬಿಜೆಪಿ ನಾಯಕರಿಗೆ ಅಚ್ಚರಿ ಮೂಡಿಸಿದೆ.
ಶೆಟ್ಟರ್ ಅವರಿಗೆ ಯಾವುದೇ ಬೇಡಿಕೆಗಳನ್ನು ಮಂಡಿಸುವುದಿಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K.Shivakumar) ಹೇಳಿದರು. ಜಗದೀಶ್ ಶೆಟ್ಟರ್ ಅವರಿಂದ ಯಾವುದೇ ಬೇಡಿಕೆಗಳಿಲ್ಲ,
ನಾವು ಏನನ್ನೂ ನೀಡುವುದಿಲ್ಲ. ಜಗದೀಶ್ ಶೆಟ್ಟರ್ ಅವರು ಪಕ್ಷದ ತತ್ವ ಮತ್ತು ನಾಯಕತ್ವವನ್ನು ಒಪ್ಪಿಕೊಳ್ಳಬೇಕು.
ನಾವು ದೇಶವನ್ನು ಒಗ್ಗೂಡಿಸಲು ಬಯಸುತ್ತೇವೆ ಮತ್ತು ಕಾಂಗ್ರೆಸ್ (Congress) ಮಾತ್ರ ಅದನ್ನು ಮಾಡಲು ಸಾಧ್ಯ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಶಾಸಕ ಸ್ಥಾನಕ್ಕೆ ಮತ್ತು ಬಿಜೆಪಿಯ ಪ್ರಮುಖ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ನಂತರ ಟ್ವಿಟರ್‌ನಲ್ಲಿ (Twitter) ಬರೆದುಕೊಂಡಿರುವ ಜಗದೀಶ್ ಶೆಟ್ಟರ್,
ಕಳೆದ ಕೆಲವು ದಿನಗಳ ರಾಜಕೀಯ ವಿದ್ಯಮಾನಗಳಿಂದ ಬೇಸತ್ತು ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಮತ್ತು ನನ್ನ ಮುಂದಿನ ನಡೆಯ ಬಗ್ಗೆ ಚರ್ಚಿಸುತ್ತೇನೆ.
ಕಾರ್ಯಕರ್ತರೇ, ಎಂದಿನಂತೆ ನಿಮ್ಮ ಪ್ರೀತಿ ಮತ್ತು ಆಶೀರ್ವಾದ ಸದಾ ನನ್ನ ಮೇಲಿರುತ್ತದೆ ಎಂದು ನಂಬಿದ್ದೇನೆ ಎಂದು ಬರೆದು ಪೋಸ್ಟ್ (Post) ಮಾಡಿದ್ದಾರೆ.