Visit Channel

ಜಗ್ಗೇಶ್ vs ಡಿ’ಬಾಸ್ ವಿವಾದ: ತಮ್ಮ ಅಭಿಮಾನಿಗಳ ಪರವಾಗಿ ಕ್ಷಮಾಪಣೆ ಕೇಳಿದ ನಟ ದರ್ಶನ್‌

WhatsApp Image 2021-02-24 at 7.43.22 PM

ಬೆಂಗಳೂರು, ಫೆ. 25: ಕನ್ನಡ ಚಿತ್ರರಂಗದಲ್ಲಿ ಸಂಚಲನ ಮೂಡಿಸಿರುವ ನವರಸ ನಾಯಕ ಜಗ್ಗೇಶ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಫ್ಯಾನ್ಸ್ ನಡುವಿನ ಗೊಂದಲದ ಕುರಿತು ಕಡೆಗೂ ಮೌನ ಮುರಿದಿರುವ ಡಿ’ಬಾಸ್, ಶೂಟಿಂಗ್‌ ಸಮಯದಲ್ಲಿ ನಟ ಜಗ್ಗೇಶ್‌ ಅವರಿಗೆ ಘೇರಾವ್‌ ಹಾಕಿ ವಾಗ್ವಾದಕ್ಕಿಳಿದ ಹಿನ್ನೆಲೆಯಲ್ಲಿ ತಮ್ಮ ಅಭಿಮಾನಿಗಳ ಪರವಾಗಿ ನಟ ದರ್ಶನ್‌ ಕ್ಷಮಾಪಣೆ ಕೇಳಿದ್ದಾರೆ.

ಖಾಸಗಿ ಸುದ್ದಿವಾಹಿನಿಯೊಂದರ ಸಂದರ್ಶನದಲ್ಲಿ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ದರ್ಶನ್, ಜಗ್ಗೇಶ್‌ ಅವರು ಹಿರಿಯರು ನಾವು ಯಾವಾಗಲೂ ಅವರ ಹಿಂದೆ ಇರುತ್ತೇವೆ. ಅವರು ತೋರಿದ ದಾರಿಯಲ್ಲೇ ನಾವು ನಡೆಯುತ್ತಿದ್ದೇವೆ ಎಂದು ಹೇಳಿ ವಿವಾದಕ್ಕೆ ತೆರೆ ಎಳೆದಿದ್ದಾರೆ.

ಅಲ್ಲದೇ, ಜಗ್ಗೇಶ್‌ ಹಿರಿಯರು ಅವರು ಏನೇ ಮಾತನಾಡಿದರೂ ಅದು ನಮ್ಮ ಬಗ್ಗೆ ತಾನೆ. ಅದಕ್ಕೆ ಬೇಸರಪಟ್ಟಿಕೊಳ್ಳುವ ಯಾವ ಪ್ರಮೇಯವಿಲ್ಲ ಎಂದು ದರ್ಶನ್‌ ಹೇಳಿದ್ದಾರೆ.

ನಿರ್ಮಾಪಕರ ಜೊತೆ ಮಾತನಾಡುವಾಗ ದರ್ಶನ್‌ ಅಭಿಮಾನಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ತೋತಾಪುರಿ ಶೂಟಿಂಗ್‌ ನಡೆಯುವ ಸಂದರ್ಭದಲ್ಲಿ ದರ್ಶನ್‌ ಅಭಿಮಾನಿಗಳು ಜಗ್ಗೇಶ್‌ ಅವರನ್ನು ಸುತ್ತುವರಿದು ವಾಗ್ವಾದಕ್ಕಿಳಿದರು. ಇದಾದ ನಂತರ ನಡೆದ ಎಲ್ಲಾ ಬೆಳವಣಿಗೆಗಳು ಕನ್ನಡ ಚಿತ್ರರಂಗದಲ್ಲಿ ದೊಡಮಟ್ಟದ ಸಂಚಲನ ಮೂಡಿಸಿತು.

Latest News

Dakshina Kannada
ರಾಜ್ಯ

ಎಚ್ಚರ! ಅಪಾಯದಲ್ಲಿದೆ ದ.ಕ ಜಿಲ್ಲೆಯ ಬಂಟ್ವಾಳ ಕಿಂಡಿ ಅಣೆಕಟ್ಟು ಸೇತುವೆ

ಕಿಂಡಿ ಅಣೆಕಟ್ಟು ಹಾಗೂ ಸೇತುವೆಯ ಕಾಮಗಾರಿಯ ಕರ್ಮಕಾಂಡ. ಕಾಮಗಾರಿ ಪೂರ್ಣ ಆಗುವ ಮೊದಲೇ ತಡೆಗೋಡೆಯ ಕಾಮಗಾರಿಯ ಅಡಿಪಾಯನೇ ಕಿತ್ತು ಹೊರಗೆ ಬಂದಿದೆ!

BJP
ರಾಜಕೀಯ

ಬಿಜೆಪಿ ನಾಯಕರು ನಮಗೆ ದೇಶಪ್ರೇಮದ ಪಾಠ ಮಾಡುವುದು ಆತ್ಮವಂಚನೆಯಾಗುತ್ತದೆ : ಸಿದ್ದರಾಮಯ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಕರಾವಳಿಯಲ್ಲಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು(Praveen Nettaru) ಮನೆಗೆ ಮಾತ್ರ ಹೋಗಿ ಪರಿಹಾರ ಕೊಟ್ಟಿದ್ದಾರೆ.

Malyalam
ಮನರಂಜನೆ

ನಟನೆಯಲ್ಲಿ ಸೋಲನ್ನು ಕಂಡರೂ ಕುಗ್ಗದೆ, ಇಂದು ಭಾರತ ಚಿತ್ರರಂಗವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ ನಟ ಫಹಾದ್ ಫಾಸಿಲ್!

ಫಹಾದ್ ಸಿನಿಮಾಗಳು ತಕ್ಕಮಟ್ಟಿಗೆ ಹಿಟ್ ಎನಿಸಿದರೂ, ಇವರ ಈಗಿನ ಸಿನಿಮಾ ಪ್ರಸಿದ್ಧಿಗೆ ಹೋಲಿಸಿದರೆ ಹಿಂದಿನ ಸಿನಿಮಾಗಳು ಏನೇನೂ ಆಗಿರಲಿಲ್ಲ.

Kabbadi Player
ದೇಶ-ವಿದೇಶ

ಪಲ್ಟಿ ಹೊಡೆಯುವ ಯತ್ನದಲ್ಲಿ ಕುಸಿದು ಬಿದ್ದು ಕಬಡ್ಡಿ ಆಟಗಾರ ಸಾವು! ; ವೀಡಿಯೋ ವೈರಲ್

ಕಬಡ್ಡಿ(Kabbadi) ಆಟಗಾರರೊಬ್ಬ ಸೋಮರ್ ಸಾಲ್ಟ್ ಹೊಡೆಯುತ್ತಿದ್ದಾಗ ಕುಸಿದು ಬಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ(Hospital) ಮೃತಪಟ್ಟಿದ್ದಾರೆ.