Visit Channel

ಜೈಪುರದಲ್ಲಿ 19 ವರ್ಷದ ಯುವತಿಯ ಮೇಲೆ ಗ್ಯಾಂಗ್ ರೇಪ್

 ಜೈಪುರ ಅ 20 : ಖಾಸಗಿ ಆಸ್ಪತ್ರೆಯಲ್ಲಿ ನೈರ್ಮಲ್ಯ ಕೆಲಸಗಾರರಾಗಿ ಕೆಲಸ ಮಾಡುತ್ತಿರುವ 19 ವರ್ಷದ ಯುವತಿ ಮೇಲೆ  ಐವರು ಅತ್ಯಾಚಾರ ಎಸಗಿರುವ ಘಟನೆ ನಗರದ ಶ್ಯಾಮ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಈ ಬಗ್ಗೆ  ಯುವತಿ ಸೋಮವಾರ ಸಂಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಹಾಗೂ ತಾನು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು ಅಲ್ಲಿ ನನಗೆ ಒಬ್ಬ ವ್ಯಕ್ತಿಯ ಪರಿಚಯವಿತ್ತು. ಆ ವ್ಯಕ್ತಿ ತನ್ನನ್ನು ರಿಂಗ್ ರೋಡ್ ಬಳಿಯ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ತನ್ನ ಇತರೆ ನಾಲ್ಕು ಜನ ಸ್ನೇಹಿತರನ್ನು ಕರೆಸಿ ಡ್ರಗ್ಸ್ ನೀಡಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಯುವತಿ ದೂರು ನೀಡಿದ್ದಾಳೆ ಎಂದು ಶ್ಯಾಮ್ ನಗರ ಪೊಲೀಸ್ ಠಾಣಾಧಿಕಾರಿ ಮೋಹನ್ ಮೀನಾ ತಿಳಿಸಿದ್ದಾರೆ.

ಒಂಬತ್ತು ದಿನಗಳ ಹಿಂದೆ ನಗರದ ಹೊರವಲಯದಲ್ಲಿ ಐವರು ಕಾಮುಕರು ತನ್ನನ್ನು ಪ್ರತ್ಯೇಕ ಸ್ಥಳಕ್ಕೆ ಕರೆದುಕೊಂಡು ಹೋಗಿ ಡ್ರಗ್ಸ್ ನೀಡಿ ಪೈಶಾಚಿಕ ಕೃತ್ಯ ಎಸಗಿದ್ದಾರೆ ಎಂದು ಯುವತಿ ತಿಳಿಸಿದ್ದಾಳೆ. ಸದ್ಯ ಜೈಪುರದ ಶ್ಯಾಮ್ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಪೊಲೀಸರು ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.