ಜಮ್ಮು ಮತ್ತು ಕಾಶ್ಮೀರ: ಸ್ಪೋಟಕ ಹೊತ್ತೊಯ್ಯುತ್ತಿದ್ದ ಡ್ರೋನ್ ಹೊಡೆದುರುಳಿಸಿದ ಪೊಲೀಸರು

ಜಮ್ಮು, ಜು. 23: ಜಮ್ಮು ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಭಾಗದ ಸಮೀಪದಲ್ಲಿ ಹಾರಾಟ ನಡೆಸುತ್ತಿದ್ದ ಡ್ರೋನ್‌ ಅನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶುಕ್ರವಾರ ಹೊಡೆದುರುಳಿಸಿ, ಅದರಿಂದ ಐದು ಕೆಜಿ ತೂಕದ ಐಇಡಿ ಸ್ಪೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಗುರುವಾರ ರಾತ್ರಿ ದೊರೆತ ಖಚಿತ ಮಾಹಿತಿ ಮೇರೆಗೆ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಭಾಗದ ಕಂಚಕ್‌ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆಯ ಕ್ಷಿಪ್ರ ಕಾರ್ಯ ಪಡೆ (ಕ್ಯುಆರ್‌ಟಿ)ಯವರು, ಸ್ಪೋಟಕ ಸಾಗಿಸುತ್ತಿದ್ದ ಡ್ರೋನ್‌ ಹೊಡೆದುಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Exit mobile version