ಶ್ರೀನಗರ, ಜು. 08: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಗುರುವಾರ ನಡೆಸಿದ ಪ್ರತ್ಯೇಕ ಕಾಯಾರ್ಚರಣೆಗಳಲ್ಲಿ ಭದ್ರತಾ ಪಡೆಯು ನಾಲ್ವರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಲ್ಗಾಂ ಜಿಲ್ಲೆಯ ಜೋಡರ್ ಪ್ರದೇಶದಲ್ಲಿ ಉಗ್ರರು ಇರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಭದ್ರತಾ ಪಡೆಯು ಶೋಧ ಕಾರ್ಯಾಚರಣೆ ನಡೆಸಿತ್ತು. ಬಳಿಕ ನಡೆದ ಎನ್ಕೌಂಟರ್ನಲ್ಲಿ ಉಗ್ರರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಶೋಧ ಕಾರ್ಯಾಚರಣೆ ಈಗಲೂ ಮುಂದುವರಿದಿದೆ ಎಂದು ತಿಳಿಸಿದೆ.
ಪುಲ್ವಾಮಾ ಜಿಲ್ಲೆಯ ಪುಚಲ್ನಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ತಿಳಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.