ಜನವರಿ 22ರಂದು ಕೇಂದ್ರ ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ ಘೋಷಣೆ

New Delhi: ಜನವರಿ (January) 22 ರಂದು ನಡೆಯಲಿರುವ ರಾಮಮಂದಿರ ‘ಪ್ರಾಣ ಪ್ರತಿಷ್ಠಾಪನಾʼ ಸಮಾರಂಭದ ದಿನದಂದು ಭಾರತದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು, ಸಂಸ್ಥೆಗಳು ಮತ್ತು ಕೇಂದ್ರ ಕೈಗಾರಿಕಾ ಸಂಸ್ಥೆಗಳಿಗೆ ಅರ್ಧ ದಿನ ರಜೆಯನ್ನು ಕೇಂದ್ರ ಸರ್ಕಾರ ಘೋಷಿಸಿದೆ.

ಉತ್ತರ ಪ್ರದೇಶದ (Uttara Pradesh) ಅಯೋಧ್ಯೆಯಲ್ಲಿ 2024ರ ಜನವರಿ 22ರಂದು ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ನೌಕರರು ಆಚರಣೆಯಲ್ಲಿ ಭಾಗವಹಿಸಲು ಅನುವು ಮಾಡಿಕೊಡಲು, ಜನವರಿ 22ರಂದು ಮಧ್ಯಾಹ್ನ 14: 30 ಗಂಟೆಗಳವರೆಗೆ ((ಮಧ್ಯಾಹ್ನ 2:30) ಅರ್ಧ ದಿನದ ರಜೆಯನ್ನು ಭಾರತದಾದ್ಯಂತ ಇರುವ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು, ಕೇಂದ್ರೀಯ ಸಂಸ್ಥೆಗಳು ಮತ್ತು ಕೇಂದ್ರ ಕೈಗಾರಿಕಾ ನೀಡಲು ನಿರ್ಧರಿಸಲಾಗಿದೆ.

ಅಯೋಧ್ಯೆಯಲ್ಲಿ (Ayodhya) ರಾಮಮಂದಿರ ಉದ್ಘಾಟನೆಯನ್ನು ಆಚರಿಸಲು ಕೇಂದ್ರ ಸರ್ಕಾರವಲ್ಲದೆ ಹಲವು ರಾಜ್ಯಗಳು ಈಗಾಗಲೇ ರಜೆ ಘೋಷಿಸಿವೆ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಜನವರಿ 22ರಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಜನವರಿ 22 ರಂದು ನಡೆಯಲಿರುವ ಭವ್ಯ ಸಮಾರಂಭಕ್ಕೆ ರಾಮಜನ್ಮ ಭೂಮಿ ಅಯೋಧ್ಯೆ ಸಜ್ಜುಗೊಳ್ಳುತ್ತಿದೆ.

ಪ್ರಧಾನಿ ನರೇಂದ್ರ ಮೋದಿ (Narendra Modi), ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಯೋಗಿ ಆದಿತ್ಯನಾಥ್, ದೇಶದ ಪ್ರಮುಖ ರಾಜಕಾರಣಿಗಳು, ಬಾಲಿವುಡ್ ಸೆಲೆಬ್ರಿಟಿಗಳು (Bollywood Celebrities), ಕ್ರಿಕೆಟಿಗರು, ಕೈಗಾರಿಕೋದ್ಯಮಿಗಳು ಸೇರಿದಂತೆ 7,000 ಕ್ಕೂ ಹೆಚ್ಚು ಗಣ್ಯರು ವಿಶೇಷ ಆಹ್ವಾನಿತರ ಪಟ್ಟಿಯಲ್ಲಿದ್ದಾರೆ.

ಇನ್ನು ಕರ್ನಾಟಕ (Karnataka) ರಾಜ್ಯ ಸರ್ಕಾರ ಜನವರಿ 22ರಂದು ರಜೆ ನೀಡುವ ಸಂಬಂಧ ಯಾವುದೇ ನಿರ್ಧಾರವನ್ನು ಇದುವರೆಗೂ ತೆಗೆದುಕೊಂಡಿಲ್ಲ. ಆದರೆ ರಾಜ್ಯದ ಮುಜರಾಯಿ ಇಲಾಖೆಯ ಅಧೀನದಲ್ಲಿರುವ ಎಲ್ಲಾ ದೇವಸ್ಥಾನಗಳಲ್ಲಿ ಜನವರಿ 22ರಂದು ವಿಶೇಷ ಪೂಜೆ ಸಲ್ಲಿಸಲು ಮತ್ತು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚನೆ ನೀಡಲಾಗಿದೆ. ಇನ್ನೊಂದೆಡೆ ದೇಶಾದ್ಯಂತ ಇರುವ ರಾಮಭಕ್ತರು ಮನೆಮನೆಗೆ ತೆರಳಿ ವಿಶೇಷ ಮಂತ್ರಾಕ್ಷತೆಯನ್ನು ಹಂಚುತ್ತಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ (Ramamandir) ಪ್ರತಿಷ್ಠಾಪನಾ ದಿನಂದು ದೇಶದ ಎಲ್ಲಾ ಆಂಜನೇಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯಲಿದೆ.

Exit mobile version