Koppala : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಗಂಗಾವತಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ. ನನ್ನ ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ (Janardhan contest in gangavati) ಎಂದು
ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಗಾಲಿ ಜನಾರ್ಧನ್ ರೆಡ್ಡಿ(Janardhan contest in gangavati) ಸ್ಪಷ್ಟಪಡಿಸಿದ್ದಾರೆ.

ಕೊಪ್ಪಳದ ಕನಕಗಿರಿಯಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಿಗೆ ಈಗಾಗಲೇ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದೇವೆ.
ಇನ್ನೂ 31 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತೇವೆ. ನನ್ನ ಪತ್ನಿ ಅರುಣಾ ಲಕ್ಷ್ಮೀ (Aruna Lakshmi) ಅವರು ಬಳ್ಳಾರಿ ನಗರ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.
ಉಳಿದಂತೆ ಯಲಬುರ್ಗಾ, ಕುಷ್ಟಗಿ ಮತ್ತು ಕೊಪ್ಪಳ ಕ್ಷೇತ್ರಗಳ ಅಭ್ಯರ್ಥಿಗಳನ್ನು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು (Janardhan contest in gangavati) ಎಂದರು.
ಇದನ್ನು ಓದಿ: ರಾಪಿಡೋ ಚಾಲಕನ ಹೆಲ್ಮೆಟ್ ಹೊಡೆದು ಆಕ್ರೋಶ ವ್ಯಕ್ತಪಡಿಸಿದ ಆಟೋ ಚಾಲಕ ; ವೀಡಿಯೋ ವೈರಲ್!
ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಜನಾರ್ದನ ರೆಡ್ಡಿ ಈ ಬಾರಿಯ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಸಿರಗುಪ್ಪ- ಧರೆಪ್ಪ ನಾಯಕ , ಕನಕಗಿರಿ- ಡಾ. ಚಾರುಲ್ ದಾಸರಿ (Charul Dasari),
ನಾಗಠಾಣಾ- ಶ್ರೀಕಾಂತ್ , ಸಿಂಧನೂರು- ನೆಕ್ಕಂಟಿ ಮಲ್ಲಿಕಾರ್ಜುನ (Nekkanti Mallikarjuna) , ಚಿತ್ರದುರ್ಗ- ಮಹೇಶ್ಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಇನ್ನು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ತನ್ನ ಪ್ರಣಾಳಿಕೆ ಘೋಷಣೆ ಮಾಡಿದೆ.
ಪ್ರತಿ ವರ್ಷ ರೈತನ ಅಕೌಂಟ್‌ಗೆ 15 ಸಾವಿರ ರೂ. ಹಣ ಜಮಾ ಮಾಡಲಾಗುತ್ತದೆ ಎಂದು ಭರವಸೆ ನೀಡಿದೆ. ರೈತರ ಮನೆ ಬಾಗಿಲಿಗೆ ಅಧಿಕಾರಿಗಳು ಆಗಮಿಸಿ ಸಮಸ್ಯೆ ಆಲಿಸುವಂತೆ ಕ್ರಮ ಕೈಗೊಳ್ಳಲಾಗುತ್ತದೆ
ಎಂದು ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಜನಾರ್ದನ ರೆಡ್ಡಿ ಈಗಾಗಲೇ ಬಿರುಸಿನಿಂದ ಚುನಾವಣಾ ಪ್ರಚಾರವನ್ನು ನಡೆಸುತ್ತಿದ್ದಾರೆ.

ಡಿಸೆಂಬರ್ 25ರಂದು ಪಕ್ಷ ಘೋಷಣೆ : 2022ರ ಡಿಸೆಂಬರ್ 25ರಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಜನಾರ್ದನ ರೆಡ್ಡಿ (Janardhan Reddy) ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದ್ದರು.
ನಾನು ಕೆಲಸ ಮಾಡಿದ ಪಕ್ಷದಿಂದ ಸ್ಥಾನಮಾನ ಸಿಗದ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಕಲ್ಯಾಣ ಪ್ರಗತಿ ಪಕ್ಷ ಸ್ಥಾಪನೆ ಮಾಡಿ ಮುಂದೆ ಹೆಜ್ಜೆ ಹಾಕುತ್ತೇನೆ ಎಂದು ಹೇಳಿದ್ದರು.