ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತೆ ಬಿಜೆಪಿ ಸೇರ್ಪಡೆ: ಶ್ರೀರಾಮುಲುಗೆ ಬಲ

Bengaluru: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕ ಹಾಗೂ ಗಂಗಾವತಿ ವಿಧಾನಸಭಾ ಕ್ಷೇತ್ರದ (Gangavati Assembly Constituency) ಹಾಲಿ ಶಾಸಕ ಜನಾರ್ದನ ರೆಡ್ಡಿ ತಮ್ಮ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನಗೊಳಿಸಿ ಮರಳಿ ಬಿಜೆಪಿಗೆ (BJP) ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ವಿಲೀನ ಕಾರ್ಯಕ್ರಮದಲ್ಲಿ ಜನಾರ್ದನ ರೆಡ್ಡಿ, ಅವರ ಪತ್ನಿ ಅರುಣಾ ಲಕ್ಷ್ಮಿ ಸೇರಿ ಕೆಆರ್ಪಿಪಿ ಪಕ್ಷದ ಎಲ್ಲ ಪದಾಧಿಕಾರಿಗಳು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಬಿಜೆಪಿಗೆ ಹೊಸ ಬಲ ಸಿಕ್ಕಂತಾಗಿದೆ.

ಇನ್ನು ಬೆಂಗಳೂರಿನಲ್ಲಿ (Bengaluru) ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಶ್ರೀರಾಮುಲು, ಆನಂದ್ ಸಿಂಗ್, ಸಿಟಿ ರವಿ, ಅಶ್ವಥ್ನಾರಾಯಣ ಅನೇಕ ಬಿಜೆಪಿ ನಾಯಕರು ಉಪಸ್ಥಿತಿತರಿದ್ದರು. ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಪಕ್ಷದ ಶಾಲು ಹೊದಿಸಿ, ಭಾವುಟ ನೀಡಿ ಜನಾರ್ಧನ್ ರೆಡ್ಡಿ (Janardhan Reddy) ಅವರನ್ನು ಪಕ್ಷಕ್ಕೆ ಮರು ಸೇರ್ಪಡೆ ಮಾಡಿಕೊಂಡರು.

ಬಿಜೆಪಿ ಪಕ್ಷವು ನಿಮ್ಮನ್ನು ಹಾಗೂ ನಿಮ್ಮ ಬೆಂಬಲಿಗರನ್ನು ಗೌರವಯುತವಾಗಿ ನಡೆಸಿಕೊಳ್ಳಲಿದೆ ಎಂದು ಭರವಸೆಯನ್ನೂ ನೀಡಿದರು. ಇದೇ ವೇಳೆ ಜನಾರ್ದನ ರೆಡ್ಡಿ, ಬಿ.ಎಸ್. ಯಡಿಯೂರಪ್ಪ (B S Yediyurappa) ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು.

ಶ್ರೀರಾಮುಲುಗೆ ಬಲ :
ಇನ್ನು ಲೋಕಸಭಾ ಚುನಾವಣೆಯ ಹೊತ್ತಲ್ಲೇ ಜನಾರ್ಧನ್ ರೆಡ್ಡಿ ಮರಳಿ ಬಿಜೆಪಿಗೆ ಬಂದಿರುವುದು, ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಗೂ ರಾಯಚೂರು ಕ್ಷೇತ್ರಗಳಲ್ಲಿ ಬಿಜೆಪಿಗೆ ಹೊಸ ಬಲ ಬಂದಿದೆ. ಸದ್ಯ ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಜನಾರ್ಧನ್ ರೆಡ್ಡಿ, ತಮ್ಮ ಹಳೆಯ ಮಿತ್ರ ಶ್ರೀರಾಮುಲು (Shri Ramulu) ಅವರ ಗೆಲುವಿಗಾಗಿ ಶ್ರಮಿಸಬೇಕಿದೆ. ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಶ್ರೀರಾಮುಲು ಕಣಕ್ಕಿಳಿದಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಈ ಕ್ಷೇತ್ರದಲ್ಲಿ ನೇರ ಹಣಾಹಣಿ ನಡೆಯಲಿದೆ. ಹೀಗಾಗಿ ಜನಾರ್ಧನ್ ರೆಡ್ಡಿ ಪಾತ್ರ ಇಲ್ಲಿ ಮಹತ್ವದ್ದಾಗಲಿದೆ.

Exit mobile version