• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬಳ್ಳಾರಿ ಮಾಡೆಲ್ ಹೌಸ್ ಬೆಂಕಿ ಪ್ರಕರಣ: ಎಂಟು ಮಂದಿಯ ವಶ, ತನಿಖೆ ತೀವ್ರ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಬಳ್ಳಾರಿ ಮಾಡೆಲ್ ಹೌಸ್ ಬೆಂಕಿ ಪ್ರಕರಣ: ಎಂಟು ಮಂದಿಯ ವಶ, ತನಿಖೆ ತೀವ್ರ
0
SHARES
21
VIEWS
Share on FacebookShare on Twitter
  • ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ಮಾಸುವ (janardhana reddy model house fire) ಮುನ್ನವೇ ಮತ್ತೊಂದು ಕೃತ್ಯ
  • ಜನಾರ್ಧನ ರೆಡ್ಡಿ ಅವರ ಹೆಂಡತಿಗೆ ಸೇರಿದ ಮಾಡೆಲ್ ಹೌಸ್‌ಗೆ ಬೆಂಕಿ
  • ಇಂಧನ ಸುರಿದು ಬೆಂಕಿ ಹಚ್ಚಿದ ಶಂಕೆ; ಎಂಟು ಮಂದಿ ವಶಕ್ಕೆ ಪಡೆದುಕೊಂಡ ಪೊಲೀಸರು

Bellary: ಬಳ್ಳಾರಿಯಲ್ಲಿ ಸಂಭವಿಸಿದ ಮಾಡೆಲ್ ಹೌಸ್ (Model House) ಅಗ್ನಿ ಅವಘಡ ಪ್ರಕರಣವು ರಾಜ್ಯ (janardhana reddy model house fire) ಮಟ್ಟದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಈ ಸಂಬಂಧ ಪೊಲೀಸರು ಮಹತ್ವದ ಬೆಳವಣಿಗೆ ದಾಖಲಿಸಿದ್ದಾರೆ.

ಶಾಸಕ ಜನಾರ್ದನ ರೆಡ್ಡಿಗೆ (Janardhana Reddy) ಸಂಬಂಧಿಸಿದ ಜಿ ಸ್ಕೈರ್ ಲೇಔಟ್‌ನಲ್ಲಿರುವ (G Square Layout) ಮಾಡೆಲ್ ಹೌಸ್‌ಗೆ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆ ಎಂಬ ಶಂಕೆಯ ಮೇರೆಗೆ, ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರನ್ನು ಸೇರಿಸಿ ಒಟ್ಟು ಎಂಟು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

ಘಟನೆ ನಡೆದ ಬೆನ್ನಲ್ಲೇ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ (janardhana reddy model house fire) ತನಿಖೆಯನ್ನು ಚುರುಕುಗೊಳಿಸಿದ್ದು, ಶನಿವಾರ ಅಧಿಕೃತವಾಗಿ ಈ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಬಳ್ಳಾರಿ ವಲಯ ಐಜಿಪಿ ಡಾ. ಪಿ.ಎಸ್. ಹರ್ಷ, “ಅಗ್ನಿ ಅವಘಡದ ಹಿಂದಿನ ಕಾರಣಗಳು ಮತ್ತು ಆರೋಪಿಗಳ ಪಾತ್ರದ ಕುರಿತು ಸಮಗ್ರ ತನಿಖೆ ನಡೆಸಲಾಗುತ್ತಿದೆ.

ವಶಕ್ಕೆ ಪಡೆದ ಎಂಟು ಮಂದಿಯಲ್ಲಿ ಕೆಲವರು ಅಪ್ರಾಪ್ತರಾಗಿರಬಹುದೆಂಬ ಅನುಮಾನವಿದ್ದು, ಅವರ ವಯಸ್ಸಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

ವಿಚಾರಣೆ ಪೂರ್ಣಗೊಂಡ ನಂತರ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದು” ಎಂದು ಸ್ಪಷ್ಟಪಡಿಸಿದರು.

ಪ್ರಕರಣದ ಸಂವೇದನಾಶೀಲತೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಎಲ್ಲ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.

ಘಟನೆಗೆ ಸಂಬಂಧಿಸಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಯವರ ಸೈಟ್ ಎಂಜಿನಿಯರ್ ರಿಜ್ವಾನ್ (Site Engineer Rizwan) ಅವರು ನೀಡಿದ ದೂರಿನ ಆಧಾರದ ಮೇಲೆ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರಿನ ಪ್ರಕಾರ, 8 ರಿಂದ 10 ಜನ ದುಷ್ಕರ್ಮಿಗಳು ರಾತ್ರಿ ಸಮಯದಲ್ಲಿ ಮಾಡೆಲ್ ಹೌಸ್‌ಗೆ ನುಗ್ಗಿ ಡೀಸೆಲ್ ಹಾಗೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.

ಪರಿಣಾಮವಾಗಿ ಮನೆಯೊಳಗಿನ ಫರ್ನಿಚರ್, ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಇತರೆ ಅಲಂಕಾರಿಕ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಸುಮಾರು 1 ಕೋಟಿ 25 ಲಕ್ಷ ರೂಪಾಯಿ ಮೌಲ್ಯದ ಆಸ್ತಿ ನಷ್ಟವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇನ್ನು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಪ್ರತಿಕ್ರಿಯಿಸಿದ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ, “ಈ ಲೇಔಟ್ ಅನ್ನು ನಮ್ಮ ತಾಯಿಯ ಹೆಸರಿನಲ್ಲಿ ಅಭಿವೃದ್ಧಿಪಡಿಸಿದ್ದೇವೆ.

ಸಾರ್ವಜನಿಕರಿಗೆ ತೋರಿಸುವ ಉದ್ದೇಶದಿಂದ ಮಾಡೆಲ್ ಹೌಸ್ ನಿರ್ಮಿಸಲಾಗಿತ್ತು. ಆದರೆ ಕೆಲ ಅಜ್ಞಾತರು ಉದ್ದೇಶಪೂರ್ವಕವಾಗಿ ಇಂಧನ ಸುರಿದು ಬೆಂಕಿ ಹಚ್ಚಿದ್ದಾರೆ. ಮನೆಯಲ್ಲಿದ್ದ ಎಲ್ಲಾ ಪೀಠೋಪಕರಣಗಳು, ಗ್ಲಾಸ್‌ಗಳು ಸಂಪೂರ್ಣವಾಗಿ ನಾಶವಾಗಿವೆ.

ಅಗ್ನಿಶಾಮಕ ದಳ ಮತ್ತು ಪೊಲೀಸರು ಸಮಯಕ್ಕೆ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ” ಎಂದು ವಿವರಿಸಿದರು.

ಈ ಘಟನೆಯಿಂದ ಕುಟುಂಬಕ್ಕೆ ಮಾತ್ರವಲ್ಲದೆ, ಲೇಔಟ್ ಯೋಜನೆಗೂ ದೊಡ್ಡ ಹಾನಿಯಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಇನ್ನೊಂದೆಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪನ್ನೇಕರ್ ಅವರು ಘಟನೆಯ ಪ್ರಾಥಮಿಕ ಹಂತದ ತನಿಖೆಯ ಬಗ್ಗೆ ಮಾತನಾಡಿ, “ಮಾಡೆಲ್ ಹೌಸ್‌ಗೆ ಬೆಂಕಿ ಬಿದ್ದಿರುವುದು ನಿಜ. ಆದರೆ ಯಾವ ರೀತಿಯಲ್ಲಿ ಮತ್ತು ಯಾರಿಂದ ಈ ಕೃತ್ಯ ನಡೆದಿದೆ ಎಂಬುದು ತನಿಖೆಯಿಂದಲೇ ಸ್ಪಷ್ಟವಾಗಬೇಕು.

ಆರಂಭದಲ್ಲಿ ರಾತ್ರಿಯ ಸಮಯವಾಗಿದ್ದರಿಂದ ಸಂಪೂರ್ಣ ತಪಾಸಣೆ ಸಾಧ್ಯವಾಗಿರಲಿಲ್ಲ. ಈಗ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಲಭ್ಯವಾಗುವ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

ಈ ಪ್ರಕರಣವು ರಾಜ್ಯ ರಾಜಕೀಯ ಹಾಗೂ ಕಾನೂನು ವಲಯದಲ್ಲಿ ಹೆಚ್ಚಿನ ಕುತೂಹಲಕ್ಕೆ ಕಾರಣವಾಗಿದ್ದು, ಮುಂದಿನ ತನಿಖಾ ವರದಿ ಮಹತ್ವ ಪಡೆದಿದೆ.

ಇದನ್ನು ಓದಿ : https://vijayatimes.com/us-quits-who-membership/

Tags: bellaryfirefireaccidentKarnatakamodelhouse

Related News

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ
ಪ್ರಮುಖ ಸುದ್ದಿ

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

September 12, 2026
ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ

September 12, 2026
80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!
ಪ್ರಮುಖ ಸುದ್ದಿ

80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!

September 12, 2026
ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ
ಪ್ರಮುಖ ಸುದ್ದಿ

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ

September 12, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.